ಯೋಗೀಶ್ ಗೌಡರ್ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನುImage Credit source: tv9
ಬೆಂಗಳೂರು, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda Murder Case) ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಆದೇಶಿಸಿದೆ. ಇದೇ ವೇಳೆ ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ತಡೆಯಾಜ್ಞೆ ನೀಡಲಾಗಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಮೂಡಿದೆ.
(ಮಾಹಿತಿ ಅಪ್ಡೇಟ್ ಆಗಲಿದೆ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 10:56 am, Fri, 31 July 26