ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: Getty Images
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣ ಹಾಗೂ ರಾಮನಗರದ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬೋಧನೆ ನಡೆಸಲು ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ವಿಶ್ವವಿದ್ಯಾಲಯದ ಕುಲಸಚಿವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಮತ್ತು ನಿಯಮಾವಳಿಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ನಿಯಮಾವಳಿಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು (PG) ಪೂರ್ಣಗೊಳಿಸಿರಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ನಿಯಮಾವಳಿಗಳನ್ನು ಪರಿಶೀಲಿಸಲು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ bangaloreuniversitykarnataka.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಜಾಬ್ ಇಂಟರ್ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್ ಟಿಪ್ಸ್ ಇಲ್ಲಿದೆ
ಅರ್ಜಿ ಸಲ್ಲಿಕೆಗೆ ಕಾಲಾವಕಾಶ ಮತ್ತು ಪ್ರಮುಖ ದಿನಾಂಕಗಳು:
ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಕೆಯ ಪೋರ್ಟಲ್ ಆಗಸ್ಟ್ 05 ರ ಬೆಳಿಗ್ಗೆ 10:00 ಗಂಟೆಯಿಂದ ಸಕ್ರಿಯಗೊಂಡಿದ್ದು, ಆಗಸ್ಟ್ 21ರ ಸಂಜೆ 5:00 ಗಂಟೆಯವರೆಗೆ ಲಭ್ಯವಿರುತ್ತದೆ. ಕೊನೆಯ ದಿನಾಂಕದೊಳಗೆ ಅರ್ಹ ಅಭ್ಯರ್ಥಿಗಳು ತಮ್ಮ ಮಾಹಿತಿಯನ್ನು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಲು ವಿಶ್ವವಿದ್ಯಾಲಯ ಕೋರಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ