Headlines

ಪುತ್ರಿಗಾಗಿ ಮಂತ್ರಿ ತ್ಯಾಗ: ಅಂತೆ ಕಂತೆಗಳಿಗೆ ಸ್ಪಷ್ಟನೆ ನಿಡಿದ ಸಚಿವ ಕೆ.ಹೆಚ್. ಮುನಿಯಪ್ಪ – Kannada News | KH Muniyappa Clarify about Sacrifice His minister Post To daughter roopakala shashidhar

ಬೆಂಗಳೂರು, (ಆಗಸ್ಟ್ 07): ಸಂಪುಟ ಪುನಾರಚನೆ (karnataka Cabinet Expansion) ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​ನಲ್ಲಿ (Karnataka Congress) ಗೊಂದಲಗಳು ಉದ್ಭವಿಸಿವೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರ ಪುತ್ರಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡುವ ಪ್ರಯತ್ನವೂ ನಡೆದಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಖುದ್ದು ಸಚಿವ ಕೆಎಚ್​​​ ಮುನಿಯಪ್ಪ ಅವರು ಪ್ರತಿಕ್ರಿಯಿಸಿದ್ದು, ರೂಪಕಲಾ ಶಶಿಧರ್‌ ರವರಿಗೆ ಸಚಿವ ಸ್ಥಾನವನ್ನು ತ್ಯಾಗ ಮಾಡಲಿದ್ದಾರೆ ಎಂಬ ಸುದ್ದಿಗಳು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬರುತ್ತಿದೆ.ಈ ವರದಿಯು ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಕೆಎಚ್​​ ಮುನಿಯಪ್ಪ ಕಚೇರಿ, ದಲಿತ ಎಡ ಸಮುದಾಯದ ಹಿರಿಯ ಹಾಗೂ ಮುಂಚೂಣಿ ನಾಯಕರಾದ ಕೆ.ಹೆಚ್.‌ ಮುನಿಯಪ್ಪ, ಕಳೆದ 50 ವರ್ಷಗಳ ಸುದೀರ್ಘ ಕಾಲದ ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ನಾಯಕರಾಗಿ ಪಕ್ಷವನ್ನು ಬಲವರ್ಧನೆಗೊಳಿಸುತ್ತಾ ಬಂದಿದ್ದಾರೆ. ರೂಪಕಲಾ ಶಶಿಧರ್‌ ರವರಿಗೆ ಸಚಿವ ಸ್ಥಾನವನ್ನು ತ್ಯಾಗ ಮಾಡಲಿದ್ದಾರೆ ಎಂಬ ಸುದ್ದಿಗಳು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬರುತ್ತಿದೆ.ಈ ವರದಿಯು ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಅಂತ್ಯ ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ನೋಡಿ: ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ಮತ್ತೆ ದಿಲ್ಲಿಯತ್ತ ಡಿಕೆ ಶಿವಕುಮಾರ್

ಇಂದಿರಾ ಗಾಂಧಿಯವರ ಕಾಲದಿಂದ ಇಲ್ಲಿಯವರೆಗೂ ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ನಾಯಕರಾಗಿ ಪಕ್ಷವನ್ನು ಕಟ್ಟುತ್ತಾ ಬಂದಿದ್ದಾರೆ. ಇಲ್ಲಿಯವರೆಗೂ ಕಾಂಗ್ರೆಸ್‌ ಪಕ್ಷಕ್ಕೆ ತಮ್ಮ ಕುಟುಂಬ ಸಮೇತ ನಿಷ್ಠೆಯನ್ನು ತೋರಿ, ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿದ್ದಾರೆ. ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತವಾಗಿ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರದಲ್ಲಿ ಮೂರು ಬಾರಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಶಂಕರಾನಂದ ಹಾಗೂ ಜಾಫರ್‌ ಶರೀಫ್‌ ರವರ ನಂತರ ಮಾನ್ಯ ಕೆ.ಹೆಚ್.‌ ಮುನಿಯಪ್ಪ ರವರ ದಾಖಲೆ ಜಯ ಐತಿಹಾಸಿಕವಾಗಿದೆ.

ದಕ್ಷಿಣ ಭಾರತದ ಬಾಬು ಜಗಜೀವನರಾಮ್‌ ಎಂದೇ ಖ್ಯಾತರಾಗಿರುವ ಕೆ.ಹೆಚ್.‌ ಮುನಿಯಪ್ಪ ,ಪ್ರಸ್ತುತ ಆಹಾರ ಇಲಾಖೆಯನ್ನು ಉತ್ತಮವಾಗಿ ಮುನ್ನೆಡೆಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆ ಖಾತೆಯೊಂದಿಗೆ ಪರಿಶಿಷ್ಟ ಜಾತಿಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಖಾತೆ ಬದಲಾವಣೆಗಾಗಿ ಮಾನ್ಯ ಲೋಕಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್‌ ಗಾಂಧಿಯವರಿಗೆ ಬೇಡಿಕೆ ಇಟ್ಟಿದ್ದಾರೆ. ಸಕರಾತ್ಮ ಸ್ಪಂದನೆಯೊಂದಿಗೆ ಸಮಾಜ ಕಲ್ಯಾಣ ಖಾತೆ ನೀಡುವುದು ಬಹುತೇಕ ಖಚಿತವಾಗಿದೆ. ಮಾಧ್ಯಮಗಳಲ್ಲಿ ಇತ್ತಿಚೀಗೆ ಹರಿದಾಡುತ್ತಿರುವ ಸುದ್ಧಿಗಳು ನೈಜಕ್ಕೆ ದೂರವಾಗಿದ್ದು, ಅವುಗಳನ್ನು ಪರಿಗಣಿಸಿದಿರಲು ಈ ಮೂಲಕ ಕೋರುತ್ತೇವೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *