Headlines

ಬೆಂಗಳೂರಿನಲ್ಲಿ ಖಾಕಿ ಬಿಗ್‌ ಬೇಟೆ: 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಸೆರೆ! – Kannada News | Bengaluru Drug Bust: Police Seize Rs 55.8 Crore Drugs Under Mission RISE, 39 Arrested

ಬೆಂಗಳೂರು, ಆಗಸ್ಟ್ 10: ನಗರದಲ್ಲಿ (Bengaluru) ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಭಾರಿ ಯಶಸ್ಸು ಸಿಕ್ಕಿದೆ. ಸಿಸಿಬಿ ಸೇರಿದಂತೆ ಒಟ್ಟು 16 ಪೊಲೀಸ್ ಯೂನಿಟ್‌ಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, 8 ಮಂದಿ ವಿದೇಶಿಯರು ಹಾಗೂ 21 ಅನ್ಯರಾಜ್ಯದವರು ಸೇರಿದಂತೆ ಒಟ್ಟು 39 ಆರೋಪಿಗಳನ್ನು ಬಂಧಿಸಲಾಗಿದೆ.

16 ಠಾಣಾ ವ್ಯಾಪ್ತಿಯಲ್ಲಿ ಖಾಕಿ ಕಾರ್ಯಾಚರಣೆ

ಕಳೆದ ಹತ್ತು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿದ ಪೊಲೀಸರು ಅಮೃತಹಳ್ಳಿ, ಗಿರಿನಗರ, ಕೆಐಎ (ವಿಮಾನ ನಿಲ್ದಾಣ), ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್, ಕಾಡುಗೋಡಿ, ಮಲ್ಲೇಶ್ವರಂ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮೀ ಲೇಔಟ್, ಬೇಗೂರು ಹಾಗೂ ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಮಾದಕ ದಂಧೆಕೋರರ ಜಾಲವನ್ನು ಭೇದಿಸಿದ್ದಾರೆ. ಬಂಧಿತರಿಂದ 17 ಲಕ್ಷ ರೂಪಾಯಿ ನಗದು, 22 ಮೊಬೈಲ್ ಫೋನ್‌ಗಳು ಹಾಗೂ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೃಹತ್ ಪ್ರಮಾಣದ ಡ್ರಗ್ಸ್ ಜಪ್ತಿ

ಎಂಡಿಎಂಎ: 21 ಕೆಜಿ 641 ಗ್ರಾಂ
ಗಾಂಜಾ: 184 ಕೆಜಿ 625 ಗ್ರಾಂ
ಹೈಡ್ರೋ ಗಾಂಜಾ: 4 ಕೆಜಿ 493 ಗ್ರಾಂ
ಅಫೀಮು: 1 ಕೆಜಿ 65 ಗ್ರಾಂ
ಕೊಕೇನ್: 738 ಗ್ರಾಂ
ಮಾರ್ಫಿನ್: 25 ಗ್ರಾಂ

ದೆಹಲಿಯಲ್ಲಿ ತಯಾರಾಗುತ್ತಿತ್ತು MDMA!

ಈ ಇಡೀ ಕಾರ್ಯಾಚರಣೆಯಲ್ಲಿ ಅಮೃತಹಳ್ಳಿ ಪೊಲೀಸರು ಅತ್ಯಂತ ದೊಡ್ಡ ಮೊತ್ತದ ಡ್ರಗ್ಸ್ ಜಾಲವನ್ನು ಭೇದಿಸಿದ್ದಾರೆ. ಬರೋಬ್ಬರಿ 28.8 ಕೋಟಿ ರೂಪಾಯಿ ಮೌಲ್ಯದ MDMA ವಶಪಡಿಸಿಕೊಂಡಿರುವ ಪೊಲೀಸರು, ದೆಹಲಿ ಮೂಲದ ಆಮ್ನಿ ಸಿಂಗ್ ಹಾಗೂ ನೈಜೀರಿಯಾ ಮೂಲದ ಓಬಮ್ ಎಂಬಿಬ್ಬರನ್ನು ದೆಹಲಿಯಲ್ಲೇ ಬಂಧಿಸಿದ್ದಾರೆ. ಆರೋಪಿಗಳು ದೆಹಲಿಯಲ್ಲೇ ಮಾದಕ ವಸ್ತುವನ್ನು ತಯಾರಿಸಿ, ಬೆಂಗಳೂರಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *