Headlines

Independence day 2026: ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಆರ್ಟ್ ಆಫ್ ಲಿವಿಂಗ್​ನ ರವಿಶಂಕರ್ ಗುರೂಜಿ ಮಾತು – Kannada News | Sri Sri Ravi Shankars Independence Day Message: Honouring Vande Mataram and Youths Role in National Progress

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯ ಈ ಶುಭ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಶ್ರೀಶ್ರೀ ರವಿಶಂಕರ್ ಗುರೂಜಿ ಅವರು ಯುವಜನತೆಗೆ ಪ್ರೇರಣಾದಾಯಿ ಸಂದೇಶ ನೀಡಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ವೀರರು ಮಾಡಿದ ತ್ಯಾಗ ಮತ್ತು ಪರಿಶ್ರಮವನ್ನು ಯುವ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದಿರುವ ಅವರು, “ಹೊಸ ಚಿಗುರು ಹಳೆಬೇರು ಕೂಡಿರಲು ಮರ ಸೊಬಗು” ಎಂಬ ಕವಿವಾಣಿಯಂತೆ ನಮ್ಮ ಸಾಂಸ್ಕೃತಿಕ ಪರಂಪರೆಯ ಹೆಮ್ಮೆಯೊಂದಿಗೆ ವೈಜ್ಞಾನಿಕ ದೃಷ್ಟಿಕೋನ ಹಾಗೂ ನಾವೀನ್ಯತೆಯನ್ನು ಅಳವಡಿಸಿಕೊಳ್ಳಲು ಕರೆ ನೀಡಿದ್ದಾರೆ. ಯುವಕರ ಒಗ್ಗಟ್ಟು ದೇಶವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *