Headlines

BC Nagesh Death: ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ | Former BJP Minister B.C. Nagesh passes Away; Last Rites in Tiptur

ಬೆಂಗಳೂರು, ಆಗಸ್ಟ್ 19: ಮಾಜಿ ಶಿಕ್ಷಣ ಸಚಿವರು ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಸಿ. ನಾಗೇಶ್ ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ನಾಳೆ (ಆ.20) ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಂದು ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ಪಿ.ಎಚ್. ಪೂಜಾರ್, ಎಸ್.ವಿ. ಸುಂಕನೂರ್ ಹಾಗೂ ಡಿ.ವಿ.ಎಸ್ ಸೇರಿದಂತೆ ಹಲವು ಬಿಜೆಪಿ ನಾಯಕರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *