Headlines

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ – Kannada News | Karnataka Congress Power Sharing Talks: DK Shivakumar to Visit Delhi, Likely to Meet Rahul Gandhi

ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತ ಬಿಕ್ಕಟ್ಟು ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಡಿಸೆಂಬರ್ 26 ಮತ್ತು 27 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ, ಅದಕ್ಕೂ ಮುನ್ನ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದಾರೆ. ಮುಖ್ಯವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ನಾಯಕತ್ವ ವಿಚಾರವನ್ನು ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ.

ಆದರೆ, ದೆಹಲಿಯಿಂದ ಬುಲಾವ್ ಬಂದರೆ ಮಾತ್ರ ದೆಹಲಿಗೆ ಪ್ರಯಾಣ ಬೆಳೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕಾರ್ಯಕಾರಣಿ ಸಭೆಯಲ್ಲಿ ಸಿಎಂ ಭಾಗಿಯಾಗುವ ಸಾಧ್ಯತೆ ಇದೆ. ಈ ನಡುವೆ ಗೃಹ ಸಚಿವ ಪರಮೇಶ್ವರ್, ಹೈಕಮಾಂಡ್​​​ನ ಒಂದು ಮಾತಿನಿಂದ ಎಲ್ಲ ಗೊಂದಲ ನಿಲ್ಲುತ್ತದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಕೂಡ, ವರಿಷ್ಠರ ಕಡೆ ಮುಖ ಮಾಡಿದ್ದಾರೆ.

ಏತನ್ಮಧ್ಯೆ, ಡಿಕೆ ಶಿವಕುಮಾರ್ ದೆಹಲಿಗೆ ಬರುತ್ತಿರುವ ವಿಚಾರ ಗೊತ್ತಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರೇ ಗೊಂದಲ ಮಾಡಿಕೊಂಡಿದ್ದಾರೆ. ಅವರೇ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *