ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವನ್ನೂ ಸಹ ಆತಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಈ ಮೂಲಕ 3-0 ಅಂತರದಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಮಾತ್ರವಲ್ಲದೆ ಸತತ 13ನೇ ಟಿ20 ಸರಣಿಯನ್ನು ಗೆಲ್ಲುವ ಮೂಲಕ ತನ್ನದೇ ಹಳೆದ ದಾಖಲೆಯನ್ನು ಮುರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 153 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 10 ಓವರ್ಗಳಲ್ಲಿ 2 ವಿಕೆಟ್ಗಳನ್ನು ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಮುಟ್ಟಿತು. ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದರು.