ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆ ಕಾವು ಹೆಚ್ಚಾಗಿದೆ. ಈ ಬಾರಿ ಪ್ರಿಯಾ ಹಾಸನ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಅವುಗಳನ್ನು ಬಗೆಹರಿಸುವ ಬಗ್ಗೆ ಅವರು ಭರವಸೆ ನೀಡಿದ್ದಾರೆ. ‘ನಿರ್ಮಾಪಕರಿಗೆ ಇರುವ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು. ಕೇವಲ ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ. ಬೇರೆ ಬೇರೆ ಸಿನಿಮಾಗಳು ಕೂಡ ಬರಬೇಕು. ಆಗ ಎಲ್ಲರಿಗೂ ಕೆಲಸ ಸಿಗುತ್ತದೆ. ತುಂಬ ನಿರ್ಮಾಪಕರು ಈಗ ಸಿನಿಮಾ ಮಾಡಲು ಹೆದರುತ್ತಿದ್ದಾರೆ. ಈ ರೀತಿಯ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶ ನಮಗೆ ಇದೆ’ ಎಂದು ಪ್ರಿಯಾ ಹಾಸನ್ (Priya Hassan) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.