Headlines

AIIMS Recruitment 2026: 2551 ನರ್ಸಿಂಗ್ ಅಧಿಕಾರಿ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | AIIMS NORCET 10 Recruitment 2026: 2551 Nursing Officer Posts. Apply by March 16!

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2551 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 16 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಪ್ರಾಥಮಿಕ ಪರೀಕ್ಷೆಯು ಏಪ್ರಿಲ್ 11 ರಂದು ಹಾಗೂ ಎರಡನೇ ಹಂತದ ಮುಖ್ಯ ಪರೀಕ್ಷೆಯು ಏಪ್ರಿಲ್ 30 ರಂದು ನಿಗದಿಯಾಗಿದೆ. ದೇಶಾದ್ಯಂತ ಇರುವ ವಿವಿಧ ಏಮ್ಸ್ ಸಂಸ್ಥೆಗಳು ಸೇರಿದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ (SJH) ಮತ್ತು ಇಎಸ್‌ಐಸಿ (ESIC) ನಂತಹ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಇದು ಉತ್ತಮ ಅವಕಾಶವಾಗಿದೆ.

ಅರ್ಜಿದಾರರು ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಪದವಿಯನ್ನು ಹೊಂದಿರಬೇಕು ಅಥವಾ ಜನರಲ್ ನರ್ಸಿಂಗ್ ಮಿಡ್‌ವೈಫರಿಯಲ್ಲಿ (GNM) ಡಿಪ್ಲೊಮಾ ಪಡೆದವರಾಗಿರಬೇಕು. ಇದರೊಂದಿಗೆ ಅಭ್ಯರ್ಥಿಗಳು 18 ರಿಂದ 30 ವರ್ಷ ವಯೋಮಿತಿಯ ಒಳಗಿರಬೇಕು ಎಂಬ ನಿಯಮವನ್ನು ವಿಧಿಸಲಾಗಿದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಆಯ್ಕೆ ಪ್ರಕ್ರಿಯೆಯ ಮೊದಲ ಹಂತವಾದ ಪ್ರಾಥಮಿಕ ಪರೀಕ್ಷೆಯು ಒಟ್ಟು 100 ಅಂಕಗಳ ಬಹು ಆಯ್ಕೆಯ ಪ್ರಶ್ನೆಗಳನ್ನು (MCQ) ಒಳಗೊಂಡಿರುತ್ತದೆ. 90 ನಿಮಿಷಗಳ ಕಾಲಾವಧಿಯ ಈ ಪರೀಕ್ಷೆಯಲ್ಲಿ ಋಣಾತ್ಮಕ ಅಂಕದ (Negative Marking) ವ್ಯವಸ್ಥೆಯೂ ಇದ್ದು, ಪ್ರತಿ ತಪ್ಪು ಉತ್ತರಕ್ಕೆ 1/3 ಅಂಕಗಳನ್ನು ಕಳೆಯಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಕೆಗಾಗಿ aiimsexams.ac.in ವೆಬ್‌ಸೈಟ್​​ ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *