
ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಪಿಯುಸಿ (PUC) ಉತ್ತೀರ್ಣರಾಗಿರಬೇಕು ಮತ್ತು ಸಹಾಯಕಿಯರ ಹುದ್ದೆಗೆ 10ನೇ ತರಗತಿ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ (karnemakaone.kar.nic.in) ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಶೈಕ್ಷಣಿಕ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರವನ್ನು ಸಿದ್ಧಪಡಿಸಿಕೊಂಡು, ಅಧಿಸೂಚನೆಯಲ್ಲಿನ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಲು ಇಲಾಖೆ ಸೂಚಿಸಿದೆ. ಆನ್‌ಲೈನ್ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಿದ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಕಡ್ಡಾಯವಾಗಿ ಸುರಕ್ಷಿತವಾಗಿಟ್ಟುಕೊಳ್ಳುವುದು ಅವಶ್ಯಕ. ಫೆಬ್ರವರಿ 20 ರಿಂದ ಪ್ರಾರಂಭವಾದ ಈ ಅರ್ಜಿ ಪ್ರಕ್ರಿಯೆಯು ಮಾರ್ಚ್ 16 ರಂದು ಮುಕ್ತಾಯಗೊಳ್ಳಲಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಆಡಳಿತ ಮಂಡಳಿ ತಿಳಿಸಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ