ಮಂಗಳೂರು ವಿಶ್ವವಿದ್ಯಾನಿಲಯವು 2026-27 ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ (PG) ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (Guest Faculty) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬೋಧನಾ ಹುದ್ದೆಗಳು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಲಭ್ಯವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಹುದ್ದೆಗಳು ಲಭ್ಯವಿರುವ ಪ್ರಮುಖ ವಿಷಯಗಳು:
ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಷಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರರಿ ಆಂಡ್ ಇನ್‌ಫಾರ್ಮೇಷನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸಿಕ್ಸ್, ಕೆಮಿಸ್ಟ್ರಿ, ಎನ್ವಿರಾನ್‌ಮೆಂಟ್ ಸೈನ್ಸ್, ಇಲೆಕ್ಟ್ರಾನಿಕ್ಸ್, ಮೆಟೀರಿಯಲ್ ಸೈನ್ಸ್, ಬಾಟನಿ, ಪ್ರಾಣಿಶಾಸ್ತ್ರ, ಸೈಬರ್ ಸೆಕ್ಯೂರಿಟಿ, ಫುಡ್ ಸೈನ್ಸ್ ಆಂಡ್ ನ್ಯೂಟ್ರಿಷನ್, ಬಯೋಟೆಕ್ನಾಲಜಿ, ಹ್ಯೂಮನ್ ಕಾನ್ಷಿಯಸ್‌ನೆಸ್ ಆಂಡ್ ಯೋಗಿಕ್ ಸೈನ್ಸ್, ಇಂಡಸ್ಟ್ರಿಯಲ್ ಕೆಮಿಸ್ಟ್ರಿ, ಗಣಿತ, ಮೈಕ್ರೋಬಯಾಲಜಿ, ಕಂಪ್ಯೂಟರ್ ಸೈನ್ಸ್/MCA, M.PEd, B.PEd, MBA (ಟೂರಿಸಂ), MBA, ಸ್ಟಾಟಿಸ್ಟಿಕ್ಸ್, MBA (IB), M.Ed ಮತ್ತು ಕಾಮರ್ಸ್ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅತಿಥಿ ಉಪನ್ಯಾಸಕರಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55 ರಷ್ಟು ಅಂಕಗಳನ್ನು ಪಡೆದಿರಬೇಕು (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 50 ಅಂಕಗಳು ಇರಬೇಕಾಗುತ್ತದೆ). ಅರ್ಹ ಅಭ್ಯರ್ಥಿಗಳು ನಿಗದಿತ ವೆಬ್‌ಸೈಟ್ ಲಿಂಕ್ (14.139.155.115/guest/index.php/home/) ಮೂಲಕ ಆಗಸ್ಟ್ 1, 2026 ರೊಳಗೆ ತಮ್ಮ ಆನ್‌ಲೈನ್ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಬೇಕಾಗಿದೆ.
ಅರ್ಜಿ ಶುಲ್ಕ ಮತ್ತು ಪಾವತಿ ಮಾಡುವ ಸರಳ ವಿಧಾನ:
ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 250ರೂ. ಹಾಗೂ SC/ST/Cat-1 ಅಭ್ಯರ್ಥಿಗಳಿಗೆ 125 ರೂ. ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ವಿಷಯ ಅಥವಾ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ, ಪ್ರತಿ ಹೆಚ್ಚುವರಿ ಅರ್ಜಿಗೆ 100 ರೂ. ನಂತೆ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಅರ್ಜಿ ಶುಲ್ಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ಗೆ (www.mangaloreuniversity.ac.in) ಭೇಟಿ ನೀಡಿ, “Online fees collection” ವಿಭಾಗದಲ್ಲಿರುವ “005/60- Guest Faculty Application fee” ಶೀರ್ಷಿಕೆಯಡಿ ಆನ್‌ಲೈನ್ ಮೂಲಕವೇ ಪಾವತಿಸಬೇಕು. ಆ ನಂತರ ಲಭಿಸುವ ಇ-ರಶೀದಿಯನ್ನು (E-Receipt) ತಪ್ಪದೇ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಬೇಕು.
ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್ ಟಿಪ್ಸ್ ಇಲ್ಲಿದೆ
ಸಂದರ್ಶನ ಪ್ರಕ್ರಿಯೆ ಮತ್ತು ಅಗತ್ಯ ದಾಖಲೆಗಳ ವಿವರ:
ಅಭ್ಯರ್ಥಿಗಳನ್ನು ಯುಜಿಸಿ (UGC) ಯ ನಿಗದಿತ ಮಾನದಂಡಗಳು ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಯಲ್ಲಿ ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಸಂದರ್ಶನದ ಸಮಯದಲ್ಲಿ ಅಭ್ಯರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರಗಳು ಹಾಗೂ SCOPUS/WOS/UGC-CARELIST ನಲ್ಲಿ ಪ್ರಕಟವಾದ ಸಂಶೋಧನಾ ಪತ್ರಿಕೆಗಳ ಮೂಲ ದಾಖಲೆಗಳು ಮತ್ತು ಸ್ವಯಂ ದೃಢೀಕರಿಸಿದ ನಕಲುಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಸಂದರ್ಶನದ ನಿಖರ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
