Apply Now: ಶಿಕ್ಷಕರೇ.. ನೀವು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಇಲ್ಲಿದೆ ಸುವರ್ಣವಕಾಶ; ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಆಹ್ವಾನ – Kannada News | National Teachers Awards 2026: Apply Now! Eligibility and Deadline for Educators

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿImage Credit source: nationalawardstoteachers.education.gov.in

ದೇಶದ ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವಾಲಯವು ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2026’ (National Teachers Awards–2026) ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ, ಅನುದಾನಿತ ಹಾಗೂ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಈ ಪ್ರತಿಷ್ಠಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ಯಾರು ಅರ್ಜಿ ಸಲ್ಲಿಸಲು ಅರ್ಹರು?

ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿದಾರರು ಕನಿಷ್ಠ 10 ವರ್ಷಗಳ ನಿಯಮಿತ ಸೇವೆ ಪೂರ್ಣಗೊಳಿಸಿರಬೇಕು. ಆದರೆ ಗುತ್ತಿಗೆ (Contract) ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು nationalawardstoteachers.education.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಮಾರ್ಗಸೂಚಿಗಳನ್ನು ಓದಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಉತ್ತಮ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು 2026ರ ಜುಲೈ 13 ಕೊನೆಯ ದಿನವಾಗಿದೆ. ಕೊನೆಯ ಕ್ಷಣದ ತೊಂದರೆಗಳನ್ನು ತಪ್ಪಿಸಲು ಅರ್ಹ ಅಭ್ಯರ್ಥಿಗಳು ಮುಂಚಿತವಾಗಿಯೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸಮಿತಿಗಳು ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ನಂತರ ಆಯ್ಕೆಯಾದ ಅರ್ಜಿಗಳನ್ನು ಸ್ವತಂತ್ರ ರಾಷ್ಟ್ರೀಯ ತೀರ್ಪುಗಾರರ (National Jury) ಸಮಿತಿ ಮೌಲ್ಯಮಾಪನ ನಡೆಸಿ ಅಂತಿಮವಾಗಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಿದೆ.

ಅರ್ಹ ಶಿಕ್ಷಕರಿಗೆ ಮನವಿ:

ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜುಲೈ 13ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಶಿಕ್ಷಕರಿಗೆ ಇದು ತಮ್ಮ ಸೇವೆಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ.

ಮತ್ತಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *