ಜಪಾನ್‌ನ ಐಚಿ-ನಗೋಯಾದಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ನಡೆಯಲಿರುವ 20 ನೇ ಏಷ್ಯನ್ ಕ್ರೀಡಾಕೂಟಕ್ಕೆ ( Asian Games) ಹಾಕಿ ಇಂಡಿಯಾ (Hockey India) 20 ಸದಸ್ಯರ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಕಟಿಸಿದೆ. ಹಾಲಿ ಏಷ್ಯನ್ ಚಾಂಪಿಯನ್ ಆಗಿರುವ ಭಾರತ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ (Harmanpreet Singh) ಮುನ್ನಡೆಸಲಿದ್ದು, ತಂಡದ ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಅನುಭವಿ ಆಟಗಾರ, ಮಿಡ್‌ಫೀಲ್ಡರ್ ಮನ್ಪ್ರೀತ್ ಸಿಂಗ್ ಕೂಡ ಈ ತಂಡದಲ್ಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ ತಂಡ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವುದರ ಜೊತೆಗೆ 2028 ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರವಾಗಿ ಅರ್ಹತೆ ಪಡೆಯುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ.
12 ತಂಡಗಳು ಭಾಗಿ
ಈ ಕ್ರೀಡಾಕೂಟದಲ್ಲಿ 12 ದೇಶಗಳ ತಂಡಗಳು ಭಾಗವಹಿಸುತ್ತಿದ್ದು, ತಲಾ 6 ತಂಡಗಳ ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಅದರಲ್ಲಿ ಹಾಲಿ ಚಾಂಪಿಯನ್ ಭಾರತ ಆತಿಥೇಯ ಜಪಾನ್, ಕೊರಿಯಾ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಇಂಡೋನೇಷ್ಯಾ ಜೊತೆಗೆ ಪೂಲ್ ಎ ನಲ್ಲಿ ಸ್ಥಾನ ಪಡೆದಿದೆ. ಹಾಗೆಯೇ ಚೀನಾ, ಚೈನೀಸ್ ತೈಪೆ, ಕಝಾಕಿಸ್ತಾನ್, ಮಲೇಷ್ಯಾ, ಓಮನ್, ಪಾಕಿಸ್ತಾನ ತಂಡಗಳು ಪೂಲ್ ಬಿ ನಲ್ಲಿ ಸ್ಥಾನ ಪಡೆದಿವೆ. ಎಲ್ಲಾ ಪಂದ್ಯಗಳು ಕಾಕಮಿಗಹರಾದ ಗಿಫು ಪ್ರಿಫೆಕ್ಚರಲ್ ಗ್ರೀನ್ ಕ್ರೀಡಾಂಗಣದಲ್ಲಿ ನಡೆಯಲಿವೆ.
ಭಾರತ ಹಾಕಿ ತಂಡ ಸೆಪ್ಟೆಂಬರ್ 20 ರಂದು ಇಂಡೋನೇಷ್ಯಾ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇದರ ನಂತರ ಸೆಪ್ಟೆಂಬರ್ 22 ರಂದು ಶ್ರೀಲಂಕಾ, ಸೆಪ್ಟೆಂಬರ್ 24 ರಂದು ದಕ್ಷಿಣ ಕೊರಿಯಾ, ಸೆಪ್ಟೆಂಬರ್ 26 ರಂದು ಜಪಾನ್ ಮತ್ತು ಸೆಪ್ಟೆಂಬರ್ 28 ರಂದು ಬಾಂಗ್ಲಾದೇಶ ವಿರುದ್ಧ ಪಂದ್ಯಗಳನ್ನು ಆಡಲಿದೆ.
Presenting the Indian Men’s Hockey Team for 20th Asian Games Aichi-Nagoya 2026. 🇮🇳❤️
Together, let’s defend our gold medal and book a spot in the LA 2028 Olympics. 💙🏑
🗓️: Sept 19 to Oct 4#HockeyIndia #IndiaKaGame #AsianGames2026 #AsianGames pic.twitter.com/hlwxVNgkNw
— Hockey India (@TheHockeyIndia) July 29, 2026
ಸಂಪೂರ್ಣ ನಂಬಿಕೆ ನನಗಿದೆ
ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ನಾಯಕ ಹರ್ಮನ್‌ಪ್ರೀತ್ ಸಿಂಗ್, ‘ಯುವಕರಾಗಲಿ ಅಥವಾ ಹಿರಿಯರಾಗಲಿ, ಎಲ್ಲರೂ ತಮ್ಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಯಾವುದೇ ಒತ್ತಡವಿಲ್ಲದೆ ಆಟವನ್ನು ಆನಂದಿಸುವುದು ಮತ್ತು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳುವುದು ನಮ್ಮ ಮುಖ್ಯ ಗುರಿಯಾಗಿದೆ’ ಎಂದಿದ್ದಾರೆ.
ಏಷ್ಯನ್ ಗೇಮ್ಸ್ ಕ್ರಿಕೆಟ್ ವೇಳಾಪಟ್ಟಿ ಪ್ರಕಟ; ಹೀಗಾದ್ರೆ ಮಾತ್ರ ಭಾರತ- ಪಾಕ್ ಮುಖಾಮುಖಿ
ಭಾರತ ಹಾಕಿ ತಂಡ
ಗೋಲ್‌ಕೀಪರ್‌ಗಳು: ಮೋಹಿತ್ ಎಚ್‌ಎಸ್, ಸೂರಜ್ ಕರ್ಕೇರಾ.
ಡಿಫೆಂಡರ್ಸ್: ಜರ್ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ (ನಾಯಕ), ಅಮಿತ್ ರೋಹಿದಾಸ್, ಜುಗ್ರಾಜ್ ಸಿಂಗ್, ಸಂಜಯ್, ಸುಮಿತ್, ಯಶ್‌ದೀಪ್ ಸಿವಾಚ್.
ಮಿಡ್‌ಫೀಲ್ಡರ್‌ಗಳು: ರಾಜಿಂದರ್ ಸಿಂಗ್, ರಾಜ್ ಕುಮಾರ್ ಪಾಲ್, ಹಾರ್ದಿಕ್ ಸಿಂಗ್, ಮನ್‌ಪ್ರೀತ್ ಸಿಂಗ್, ನೀಲಕಂಠ ಶರ್ಮಾ, ವಿವೇಕ್ ಸಾಗರ್ ಪ್ರಸಾದ್.
ಫಾರ್ವರ್ಡ್‌ಗಳು: ದಿಲ್‌ಪ್ರೀತ್ ಸಿಂಗ್, ಶಿಲಾನಂದ್ ಲಾಕ್ರಾ, ಸುಖಜೀತ್ ಸಿಂಗ್, ಮನ್‌ದೀಪ್ ಸಿಂಗ್, ಅಭಿಷೇಕ್.
