Bagalkot, Davangere, West Bengal, Tamil Nadu, Kerala, Assam, Puducherry Assembly Election 2026 Live Counting and Results Updates in Kannada: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ತಮಿಳುನಾಡಿನ 234 ಸ್ಥಾನಗಳಿಗೆ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಮತದಾನವೂ ನಡೆದಿತ್ತು. ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಸ್ಥಾನಗಳಿಗೆ ಮತದಾನ ನಡೆದಿತ್ತು. ಎರಡನೇ ಹಂತದಲ್ಲಿ ಏಪ್ರಿಲ್ 29 ರಂದು 8 ಜಿಲ್ಲೆಗಳ 142 ಸ್ಥಾನಗಳಿಗೆ ಮತದಾನ ನಡೆದಿತ್ತು.
ಎಕ್ಸಿಟ್ ಪೋಲ್ಗಳ ಪ್ರಕಾರ, ಬಿಜೆಪಿ ಅಸ್ಸಾಂನಲ್ಲಿ ಹ್ಯಾಟ್ರಿಕ್ ಗೆಲುವಿನ ಸಾಧ್ಯತೆ ಕಾಣುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಸರ್ಕಾರ ರಚಿಸುವತ್ತ ಸಾಗಲಿದೆ. ಇದಲ್ಲದೆ, ಕೇರಳದಲ್ಲಿ ಎಡಪಕ್ಷಗಳು ಅಧಿಕಾರ ಕಳೆದುಕೊಳ್ಳಬಹುದು ಎನ್ನಲಾಗಿದೆ. ಆದಾಗ್ಯೂ, ಇವು ಎಕ್ಸಿಟ್ ಪೋಲ್ಗಳ ಅಭಿಪ್ರಾಯವಷ್ಟೇ. ಅಧಿಕೃತ ಫಲಿತಾಂಶ ಇಂದು,ಮೇ 4 ರಂದು ಪ್ರಕಟವಾಗಲಿದೆ. ಮತ ಎಣಿಕೆ ಹಾಗೂ ಫಲಿತಾಂಶದ ಕ್ಷಣ ಕ್ಷಣದ ಅಪ್ಡೇಟ್ಗೆ ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ…
