AUS vs BAN: 228 ರನ್​ಗಳ ಮುನ್ನಡೆ; ಬಾಂಗ್ಲಾ ಆಟಕ್ಕೆ ಕಾಂಗರೂಗಳು ಕಕ್ಕಾಬಿಕ್ಕಿ – Kannada News | Bangladesh Stuns Australia: Dominates Day 3, Leads by 67 Runs in Home Test

ತವರು ನೆಲದಲ್ಲಿ ದುರ್ಬಲ ಬಾಂಗ್ಲಾದೇಶ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಇರಾದೆಯೊಂದಿಗೆ ಕಣಕ್ಕಿಳಿದಿದ್ದ ಆತಿಥೇಯ ಆಸ್ಟ್ರೇಲಿಯಾ (Bangladesh vs Australia ) ತಂಡಕ್ಕೆ ಬಾಂಗ್ಲಾದೇಶದ ಆಟಗಾರರು ಮರೆಯಲಾಗದ ಆಘಾತ ನೀಡಿದ್ದಾರೆ. ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾವನ್ನು ಕೇವಲ 198 ರನ್​ಗಳಿಗೆ ಆಲೌಟ್ ಮಾಡಿದ್ದ ಬಾಂಗ್ಲಾದೇಶ, ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 426 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 228 ರನ್​ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ. ಇತ್ತ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡರಲ್ಲೂ ವಿಫಲವಾಗಿದ್ದ ಆಸ್ಟ್ರೇಲಿಯಾ ತಂಡ ಇದೀಗ ಎರಡನೇ ಇನ್ನಿಂಗ್ಸ್​ನ ಬ್ಯಾಟಿಂಗ್​ನಲ್ಲೂ ಎಡವಿದಂತೆ ಕಾಣುತ್ತಿದೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು 161 ರನ್ ಕಲೆಹಾಕಿದೆ. ಇದರೊಂದಿಗೆ ಆಸ್ಟ್ರೇಲಿಯಾ ಇನ್ನೂ 67 ರನ್‌ಗಳ ಹಿನ್ನಡೆಯಲ್ಲಿದೆ.

1 ಶತಕ, ಇಬ್ಬರ ಅರ್ಧಶತಕ

ಮೊದಲ ಇನ್ನಿಂಗ್ಸ್​ನಲ್ಲಿ ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಂಜಿದ್ ಹಸನ್ ಶತಕ ಬಾರಿಸಿದರೆ, ನಾಯಕ ನಜ್ಮುಲ್ ಶಾಂತೊ 84 ರನ್‌ಗಳ ಇನ್ನಿಂಗ್ಸ್ ಆಡಿದರು. ಇವರಿಬ್ಬರ ಆಟ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಬಾಂಗ್ಲಾದೇಶದ ಮೊದಲ ಇನ್ನಿಂಗ್ಸ್ ಮುನ್ನಡೆಗೆ ಗಮನಾರ್ಹವಾಗಿ ಕೊಡುಗೆ ನೀಡಿತು. ಇವರಿಬ್ಬರ ಜೊತೆಗೆ ಮೆಹಿದಿ ಹಸನ್ ಅವರ 65 ರನ್‌ಗಳ ಇನ್ನಿಂಗ್ಸ್ ಕೂಡ ಬಾಂಗ್ಲಾದೇಶದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿತು.

ನಾಲ್ಕು ವಿಕೆಟ್‌ ಪತನ

ಮೂರನೇ ದಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ಮೊದಲ ಇನ್ನಿಂಗ್ಸ್​ಗಿಂತ ಉತ್ತಮವಾಗಿ ಬ್ಯಾಟಿಂಗ್ ಮಾಡಿತು. ಆದಾಗ್ಯೂ, ದಿನದ ಅಂತ್ಯದ ವೇಳೆಗೆ ಬಾಂಗ್ಲಾದೇಶ ನಾಲ್ಕು ವಿಕೆಟ್‌ಗಳನ್ನು ಉರುಳಿಸುವಲ್ಲಿ ಯಶಸ್ವಿಯಾಯಿತು. ಆಸೀಸ್ ಪರ ಕ್ಯಾಮರೂನ್ ಗ್ರೀನ್ ಮೂರನೇ ದಿನದಂದು 43 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಅಲೆಕ್ಸ್ ಕ್ಯಾರಿ 19 ರನ್ ಗಳಿಸಿ ನಾಲ್ಕನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಉಳಿದಂತೆ ಸ್ಟೀವ್ ಸ್ಮಿತ್ 44 ರನ್ ಗಳಿಸಿ ಔಟಾದರೆ, ಮಾರ್ನಸ್ ಲಬುಶೇನ್ ಅವರ ಇನ್ನಿಂಗ್ಸ್ 31 ರನ್​ಗಳಿಗೆ ಅಂತ್ಯವಾಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಜೇಕ್ ವೆದರಾಲ್ಡ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಟ್ರಾವಿಸ್ ಹೆಡ್ ಕೇವಲ 17 ರನ್ ಗಳಿಸಲಷ್ಟೇ ಶಕ್ತರಾದರು. ಇತ್ತ ಬಾಂಗ್ಲಾದೇಶ ಪರ ಮೊದಲ ಇನ್ನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದ ಹಸನ್ ಮಹ್ಮದ್, ಮೂರನೇ ದಿನದ ಆಟದ ಅಂತ್ಯದವರೆಗೆ ಎರಡನೇ ಇನ್ನಿಂಗ್ಸ್​ನಲ್ಲೂ 2 ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *