nagaraj11081993

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್​​ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ! ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು, ಏಪ್ರಿಲ್ 03: ನಗರದ ಕಬ್ಬನ್ ಪಾರ್ಕ್​ನಲ್ಲಿ (Cubbon park) ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಸಧ್ಯಕ್ಕೆ ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹಿಂದಿನ ದಿನವೇ ಕಾಣೆಯಾಗಿದ್ದ ವ್ಯಕ್ತಿ ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು…

Read More

ಲೋಕನಾಥೇಶ್ವರ ಕ್ಷೇತ್ರದಲ್ಲಿ ಸಿರಿ ಆರಾಧನೆ: ಮೈ ರೋಮಾಂಚನಗೊಳಿಸುವ ಕುಮಾರ – ಸಿರಿಯ ಭೇಟಿ

ಬೆಳ್ತಂಗಡಿ, ಏ.3: ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್‌ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು. ತುಳುನಾಡಿನ ಆರಾಧ್ಯ ದೈವಗಳಾದ ಸಿರಿ, ಸೋಮು, ಅಬ್ಬಗ-ದಾರಗ ಹಾಗೂ ಕುಮಾರ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಿರಿಯ ಪುರಾಣವನ್ನು ಹಾಡುವ ಮೂಲಕ ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ನಡೆಯುವ ‘ದರ್ಶನ’ ಮತ್ತು ‘ಪಾಡ್ದನ’…

Read More

Video: ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಅಯೋಧ್ಯೆ, ಏಪ್ರಿಲ್ 03: ಅಯೋಧ್ಯೆಯಲ್ಲಿ ಹಗಲು ದರೋಡೆ ನಡೆದಿದೆ. ಬುರ್ಖಾಧಾರಿ ಮಹಿಳೆಯೊಬ್ಬಳು ಬಂದೂಕು ತೋರಿಸಿ ಆಭರಣದಂಗಡಿ ದೋಚಿರುವ ಘಟನೆ ನಡೆದಿದೆ. ರುಡೌಲಿ ಪೊಲೀಸ್ ಠಾಣೆ ಪ್ರದೇಶದ ಅಗರ್ವಾಲ್ ಕಾಂಪ್ಲೆಕ್ಸ್‌ನಲ್ಲಿರುವ ಆಭರಣ ಅಂಗಡಿಯನ್ನು ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಂದೂಕು ತೋರಿಸಿ ದರೋಡೆ ಮಾಡಿ, ತನ್ನ ಸಹಚರನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಘಟನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದ್ದು, ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆ ಕೌಂಟರ್‌ನಿಂದ ಸುಮಾರು 26 ಗ್ರಾಂ ಚಿನ್ನಾಭರಣಗಳನ್ನು ಕದ್ದಿದ್ದಾಳೆ ಎಂದು ವರದಿಯಾಗಿದೆ….

Read More

IPL Match: ಐಪಿಎಲ್ ಪಂದ್ಯದ ನಿಮಿತ್ತ ಮೆಟ್ರೋ ಸಂಚಾರ ವಿಸ್ತರಣೆ; ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿಶೇಷ ಬಸ್ ಸೇವೆ!

ಬೆಂಗಳೂರು, ಏಪ್ರಿಲ್ 03: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಐಪಿಎಲ್ ಪಂದ್ಯವನ್ನು ಇದೇ ಭಾನುವಾರ (ಏಪ್ರಿಲ್ 5) ಆಯೋಜಿಸಲಾಗುತ್ತಿದ್ದು, ಮೆಟ್ರೋ ರೈಲುಗಳು ದೀರ್ಘಾವಧಿ ಕಾರ್ಯನಿರ್ವಹಿಸಲಿವೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಹೇಳುವಂತೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11 ಗಂಟೆಯ ನಂತರ ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಎಲ್ಲೆಲ್ಲಿ ಮೆಟ್ರೋ ಸಮಯ ವಿಸ್ತರಣೆ? ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಬೊಮ್ಮಸಂದ್ರದಿಂದ ಕೊನೆಯ ರೈಲು ಬೆಳಿಗ್ಗೆ…

Read More

Abhishek Sharma: ಸಂಕಷ್ಟಕ್ಕೆ ಸಿಲುಕಿದ ಅಭಿಷೇಕ್ ಶರ್ಮಾ: ಬಿಸಿಸಿಐಯಿಂದ ಸಿಕ್ಕಿತು ಶಾಕಿಂಗ್ ನ್ಯೂಸ್

ಬೆಂಗಳೂರು (ಏ. 03): ಐಪಿಎಲ್ 2026 ರ ಆರನೇ ಪಂದ್ಯವು ಬುಧವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಸನ್‌ರೈಸರ್ಸ್ ಹೈದರಾಬಾದ್ ತಂಡವು 65 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಈ ಋತುವಿನ ಎಸ್‌ಆರ್‌ಹೆಚ್‌ನ ಮೊದಲ ಗೆಲುವು. ಈ ಪಂದ್ಯದಲ್ಲಿ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಟಿ20 ವಿಶ್ವಕಪ್​​ನಲ್ಲಿ ಸಾಧಾರಣ ಪ್ರದರ್ಶನ ನೀಡಿದ ನಂತರ ಐಪಿಎಲ್…

Read More

ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ಆನೇಕಲ್, ಏಪ್ರಿಲ್ 3: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚೂಡೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತಲೇ ಬೀಡುಬಿಟ್ಟಿರುವ ಗಜಪಡೆ, ಪ್ರತಿ ರಾತ್ರಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ಆನೆಗಳ ಪಾಲಾಗುತ್ತಿದ್ದು, ಜೀವ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬರಲು ನಡುಗುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮಧ್ಯೆ, ಗ್ರಾಮದಲ್ಲಿ ಆನೆಗಳ ನೈಟ್ ರೌಂಡ್ಸ್ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕದ…

Read More

Hormuz Strait: ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್​ಗೆ ಭಾರತದ ಒತ್ತಾಯ

ನವದೆಹಲಿ, ಏಪ್ರಿಲ್ 03: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದಾಗಿನಿಂದ ಇರಾನ್​ನ ಮುಚ್ಚಿರುವ ಹಾರ್ಮುಜ್(Hormuz) ಜಲಸಂಧಿಯನ್ನು ತೆರೆಯುವಂತೆ ಭಾರತ ಒತ್ತಾಯಿಸಿದೆ. ಸಂಘರ್ಷ ಪೀಡಿತ ಜಲಮಾರ್ಗದಲ್ಲಿ ನಾಗರಿಕರನ್ನು ಕಳೆದುಕೊಂಡ ಏಕೈಕ ರಾಷ್ಟ್ರ ಭಾರತ ಎಂದು ಭಾರತ ಹೇಳಿದೆ. ಮಧ್ಯಪ್ರಾಚ್ಯದ ಪರಿಸ್ಥಿತಿಯ ಕುರಿತು ಯುಕೆ ಕರೆದ ಬಹುಪಕ್ಷೀಯ ಸಭೆಯಲ್ಲಿ, ಅಂತಾರಾಷ್ಟ್ರೀಯ ಜಲಮಾರ್ಗಗಳ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಭಾರತವು ಒತ್ತಿ ಹೇಳಿದೆ. 60 ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್…

Read More

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್

ಬಾಗಲಕೋಟೆ, ಏ.3: ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ  ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು…

Read More

ಲ್ಯಾಂಬೋರ್ಗಿನಿ ಕಾರು ಪ್ರಕರಣ: ಮುತ್ತಪ್ಪ ರೈ ಮಗ ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ

ಬೆಂಗಳೂರು, ಏಪ್ರಿಲ್ 3: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಬೆಂಗಳೂರಿನ (Bangalore) ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ನಕಲಿ ನಂಬರ್ ಪ್ಲೇಟ್ ಬಳಸಿ ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ ವಿಚಾರದ ವಿಡಿಯೋ ವೈರಲ್ ಆಗಿತ್ತಲ್ಲದೆ, ಪ್ರಕರಣ ಸಹ ದಾಖಲಾಗಿತ್ತು. ಏನಿದು ಲ್ಯಾಂಬೋರ್ಗಿನಿ ವಂಚನೆ ಪ್ರಕರಣ? ದೆಹಲಿಯಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ…

Read More