ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು
ಬೆಂಗಳೂರು, ಮಾ,30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಭಾರಿ ಶಾಕ್ ಎದುರಾಗಿದೆ. ಪಂದ್ಯದ ಸಂಭ್ರಮದಲ್ಲಿದ್ದ ಪ್ರೇಕ್ಷಕರ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಕಳ್ಳರ ತಂಡವೊಂದು ದೊಡ್ಡ ಮಟ್ಟದ ಕಳ್ಳತನ ಎಸಗಿದೆ. ಈ ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಅಂದರೆ ಎಕ್ಸ್ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕ್ರೀಡಾಂಗಣದ P3 ಸ್ಟ್ಯಾಂಡ್ ಒಂದರಲ್ಲೇ ಸುಮಾರು 50 ರಿಂದ 60 ಮೊಬೈಲ್ ಫೋನ್‌ಗಳು ಕಳ್ಳತನವಾಗಿವೆ ಎಂದು…