All posts by nagaraj11081993

ಪೋಕ್ಸೋ ಕೇಸ್​: ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್ – Kannada News | Vachanananda Swamiji pocso case: Karnataka High Court Unhappy on Davanagere Court Bail

ಬೆಂಗಳೂರು, (ಜೂನ್ 16): ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ (Davanagere) ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದ್ರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ (karnataka High Court) ಅಸಮಾಧನ ವ್ಯಕ್ತಪಡಿಸಿದೆ. ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ. ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿಯಾಗಿದೆ. ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯಾಂಶಗಳು

  • ಪೋಕ್ಸೋ ಕೇಸ್​ನಲ್ಲಿ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಹಿನ್ನೆಲೆ
  • ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಹೈಕೋರ್ಟ್​ಗೆ ಬಾಲಕನ ತಾಯಿ ಅರ್ಜಿ
  • ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್​​​ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ
  • ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ
  • ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್
  • ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ
  • ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ
  • ಅರ್ಜಿ ಸಂಬಂಧ ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ನೋಟಿಸ್

ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್​​​ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ. ಆದರೂ ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ: ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು?

ಇನ್ನು ದಾವಣಗೆರೆ ಜಿಲ್ಲಾ ಕೋರ್ಟ್ ನೀಡಿರುವ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಹೈಕೋರ್ಟ್, ಸ್ವಾಮೀಜಿಯ ಜಾಮೀನು ರದ್ದುಗೊಳಿಸುತ್ತಾ ಅಥವಾ ಏನು ತೀರ್ಪು ನೀಡುತ್ತೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಈ ಪ್ರಕರಣದ ಬೆಳವಣಿಗೆಗಳು ಹೀಗಿವೆ

ಪಂಚಮಸಾಲಿ ಪೀಠದಿಂದ ಸ್ವಾಮೀಜಿ ಉಚ್ಛಾಟನೆ: ಏಪ್ರಿಲ್​ ಆರಂಭದಲ್ಲಿ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 13 ಟ್ರಸ್ಟಿಗಳು ಭಾಗವಹಿಸಿ ನಿರ್ಣಯ ತೆಗೆದುಕೊಂಡು ಸ್ವಾಮೀಜಿಗಳನ್ನು ಮಠದ ಪೀಠದಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಕಾರಣವಾಗಿದ್ದು 2 ಪೀಠಗಳ ನಿರ್ವಹಣೆಯ ವಿಚಾರ. 2018ರಲ್ಲಿ ಶ್ರೀ ಅವರನ್ನು ಇಲ್ಲಿನ ಟ್ರಸ್ಟಿಗಳು ಜಗದ್ಗುರು ಮಾಡಿದ್ದರು. ಬಳಿಕ ಹಲವಾರು ಬಾರಿ ಎರಡು ಪೀಠಗಳ ಆಯ್ಕೆ ಮಾಡಿಕೊಳ್ಳುವಂತೆ ಹೇಳಿದ್ದರು. ಆದರೆ ಇದನ್ನು ವಚನಾನಂದ ಸ್ವಾಮೀಜಿ ಪಾಲಿಸದ ಆರೋಪದಲ್ಲಿ ಟ್ರಸ್ಟಿಗಳು ಸರ್ವಾನುಮತವಾಗಿ ಪದಚ್ಯುತಗೊಳಿಸಿದ್ದರು.

ವಚನಾನಂದ ಶ್ರೀಗಳ ವಿರುದ್ಧ ಮಠದ ಮಕ್ಕಳಿಂದ ದೂರು: ವಚನಾನಂದ ಸ್ವಾಮೀಜಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ, ಹಿಂಸೆ ನೀಡುತ್ತಾರೆ ಎಂದು ಸ್ವತಃ ಮಕ್ಕಳು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯ ವಿಚಾರಣೆ ನಡೆಸಿದ್ದರು. ಅಲ್ಲದೇ ವಚನಾನಂದ ಸ್ವಾಮೀಜಿ ವಿರುದ್ಧ ಮಠದ ಬಾಲಕನೋರ್ವನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈಗಾಗಲೇ ಇದೇ ಪ್ರಕರಣದಲ್ಲಿ ಸ್ವಾಮೀಜಿಯ ವಿಚಾರಣೆ ನಡೆದು, ಮೆಡಿಕಲ್ ಟೆಸ್ಟ್ ಕೂಡ ನಡೆಸಲಾಗಿದೆ.

ನಿರೀಕ್ಷಣಾ ಜಾಮೀನು ಮಂಜೂರು: ಸ್ವಾಮೀಜಿ ವಿರುದ್ಧ ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಜಿಲ್ಲಾ ನ್ಯಾಯಾಲಯ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕ್ರಿಕೆಟ್ ಫ್ಯಾನ್ಸ್​ಗೆ ಡಬಲ್ ಧಮಾಕ; ಒಂದೇ ದಿನ ಕಣಕ್ಕಿಳಿಯಲಿವೆ ಭಾರತದ ಎರಡು ತಂಡಗಳು – Kannada News | Indian Cricket Teams Battle: Men’s ODI vs AFG, Women’s T20 World Cup on June 17

ಭಾರತದ ಕ್ರಿಕೆಟ್ ಫ್ಯಾನ್ಸ್​ಗೆ ಬುಧವಾರ ಅಂದರೆ ಜೂನ್ 17 ರಂದು ಡಬಲ್ ಮನರಂಜನೆ ಸಿಗಲಿದೆ. ಏಕೆಂದರೆ ಈ ದಿನದಂದು ಭಾರತದ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಗಳು ಪಂದ್ಯಗಳನ್ನಾಡಲಿವೆ. ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ಪುರುಷ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈ ಸರಣಿಯ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿ ಭಾರತದ ಪುರುಷರ ತಂಡವಿದೆ. ಮತ್ತೊಂದೆಡೆ ಭಾರತ ಮಹಿಳಾ ಕ್ರಿಕೆಟ್ ತಂಡ, 2026 ರ ಮಹಿಳಾ ಟಿ20 ವಿಶ್ವಕಪ್​ನಲ್ಲಿ (Women’s T20 World Cup) ತನ್ನ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ.

ಅಫ್ಘನ್ ವಿರುದ್ಧ ಏಕದಿನ ಪಂದ್ಯ

ಧರ್ಮಶಾಲಾದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಶುಭ್​ಮನ್ ಗಿಲ್ ಪಡೆ 7 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು. ಮಳೆ ಪೀಡಿತ ಈ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿತ್ತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ್ದ ಅಫ್ಘಾನಿಸ್ತಾನ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು ಇನ್ನು 7 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡಿತು.

ಇದೀಗ ಉಭಯ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಉತ್ತರ ಪ್ರದೇಶದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಭಾರತ ಗೆದ್ದರೆ, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿ ಟೀಂ ಇಂಡಿಯಾ ಪಾಲಾಗಲಿದೆ. ಇತ್ತ ಅಫ್ಘಾನಿಸ್ತಾನ ಗೆದ್ದರೆ, ಸರಣಿ 1-1 ರಿಂದ ಸಮಬಲಗೊಳ್ಳಲಿದೆ. ಈ ಪಂದ್ಯ ಎಂದಿನಂತೆ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

ಟಿ20 ವಿಶ್ವಕಪ್​ನಲ್ಲಿ 2ನೇ ಪಂದ್ಯ

ಇತ್ತ 2026 ರ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಲೀಗ್ ಹಂತದಲ್ಲಿ ತನ್ನ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಿದ್ದ ಟೀಂ ಇಂಡಿಯಾ, ಮೊದಲು ಬ್ಯಾಟಿಂಗ್‌ ಮಾಡಿ 20 ಓವರ್​ಗಳಲ್ಲಿ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಕೇವಲ 106 ರನ್​ಗಳಿಗೆ ಆಲೌಟ್ ಆಗುವ ಮೂಲಕ 64 ರನ್​ಗಳಿಂದ ಪಂದ್ಯವನ್ನು ಕಳೆದುಕೊಂಡಿತ್ತು. ಈ ಗೆಲುವಿನೊಂದಿಗೆ ಭಾರತ ತಂಡ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿತ್ತು.

IND vs PAK: ವಿಶ್ವಕಪ್​ ಅಂಗಳದಲ್ಲೂ ಕೈಕುಲುಕದ ಉಭಯ ನಾಯಕಿಯರು

ಇದೀಗ ಭಾರತ ವನಿತಾ ತಂಡ ತನ್ನ ಎರಡನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಲಿದೆ. ಲೀಗ್ ಹಂತದಲ್ಲಿ ಉಭಯ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸಿ ಸೋತಿತ್ತು. ಹೀಗಾಗಿ ಈ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಪ್ರಬಲ ಪೈಪೋಟಿ ನೀಡಲು ನೆದರ್ಲ್ಯಾಂಡ್ಸ್ ಪ್ರಯತ್ನಿಸಲಿದೆ. ಹೆಡ್ಡಿಂಗ್ಲಿ ಮೈದಾನದಲ್ಲಿ ನಡೆಯುವ ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:56 pm, Tue, 16 June 26

Source link

Nimma Doctor: ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ – Kannada News | Understanding Childrens Cancer Treatment: Insights from HCG Cancer Hospital

ಇಂದಿನ ಒತ್ತಡದ ಜೀವನಶೈಲಿ ಹಾಗೂ ಬದಲಾಗುತ್ತಿರುವ ಪರಿಸರದಿಂದಾಗಿ ಜನರಲ್ಲಿ ನೂರಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಯಾವ ಸಮಸ್ಯೆಗೆ ಯಾವ ಚಿಕಿತ್ಸೆ ಪಡೆಯಬೇಕು ಎಂಬುದು ಒಂದು ದೊಡ್ಡ ಚಿಂತೆಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ, ನಿಮ್ಮ ಡಾಕ್ಟರ್ ಕಾರ್ಯಕ್ರಮವು ಎಲ್ಲರಿಗೂ ಒಂದೇ ವೇದಿಕೆಯಲ್ಲಿ ಉತ್ತರಗಳನ್ನು ಒದಗಿಸುವ ಮೂಲಕ ಸಹಾಯ ಮಾಡುತ್ತಿದೆ.

ಮನುಷ್ಯನನ್ನು ಮಾರಣಾಂತಿಕವಾಗಿ ಕಾಡುವ ರೋಗಗಳಲ್ಲಿ ಕ್ಯಾನ್ಸರ್ ಪ್ರಮುಖವಾಗಿದೆ. ಕ್ಯಾನ್ಸರ್ ಎಂಬ ಹೆಸರು ಕೇಳಿದ ಕೂಡಲೇ ಜನ ಚಿಕಿತ್ಸೆಯ ಬಗ್ಗೆ ಯೋಚಿಸುವುದಕ್ಕಿಂತ ಹೆಚ್ಚಾಗಿ ಭಯಭೀತರಾಗುತ್ತಾರೆ. ಇಂದಿನ ವೈದ್ಯಕೀಯ ಲೋಕದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಬಂದಿದ್ದರೂ ಸಹ, ಕ್ಯಾನ್ಸರ್ ಕುರಿತ ಭೀತಿ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಅದರಲ್ಲೂ ಮಕ್ಕಳಲ್ಲಿ ಕ್ಯಾನ್ಸರ್ ಕಾಣಿಸಿಕೊಂಡಾಗ ಕುಟುಂಬಗಳಿಗೆ ದೊಡ್ಡ ಆತಂಕ ಎದುರಾಗುತ್ತದೆ. ಬೆಂಗಳೂರಿನ ಸಂಪಂಗಿರಾಮನಗರದಲ್ಲಿರುವ ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯು ಮಕ್ಕಳಲ್ಲಿನ ಕ್ಯಾನ್ಸರ್ ಚಿಕಿತ್ಸೆಗೆ ಅತ್ಯಾಧುನಿಕ ವಿಧಾನಗಳನ್ನು ಒದಗಿಸುತ್ತಿದೆ. ಸರಿಯಾದ ಮಾಹಿತಿ ಮತ್ತು ಸಮಯೋಚಿತ ಚಿಕಿತ್ಸೆಯೊಂದಿಗೆ ಈ ಭಯವನ್ನು ನಿವಾರಿಸಬಹುದು ಮತ್ತು ಕ್ಯಾನ್ಸರ್ ಅನ್ನು ಗುಣಪಡಿಸಲು ಸಾಧ್ಯವಿದೆ ಎಂದು ತಜ್ಞರು ತಿಳಿಸಿದ್ದಾರೆ.

ಮತ್ತಷ್ಟು ಓದಿ: 2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; 11 ಮಕ್ಕಳ ಸಾವಿನ ಬಳಿಕ ಕೇಂದ್ರ ಸರ್ಕಾರ ಎಚ್ಚರಿಕೆ

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

Source link

ಹೊಸ ತಂತ್ರ: ಟ್ರಂಪ್ ನಡವಳಿಕೆ ಅಧ್ಯಯನ ಮಾಡಲು ಮನಃಶಾಸ್ತ್ರಜ್ಞರ ನೇಮಿಸಿದ ಇರಾನ್ – Kannada News | Iran’s Diplomatic Breakthrough: Psychologists Analyze Trump for US Iran Peace Talks

ಟೆಹ್ರಾನ್, ಜೂನ್ 16: ಅಮೆರಿಕ ಮತ್ತು ಇರಾನ್ ನಡುವಿನ ಸುದೀರ್ಘ ಸಂಘರ್ಷವನ್ನು ಕೊನೆಗೊಳಿಸಲು ಇರಾನ್ ಸರ್ಕಾರವು ಅತ್ಯಂತ ವಿಭಿನ್ನ ಹಾಗೂ ರಹಸ್ಯ ರಾಜತಾಂತ್ರಿಕ ತಂತ್ರವೊಂದನ್ನು ಬಳಸಿರುವುದು ಬೆಳಕಿಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ವಿಶಿಷ್ಟ ನಿರ್ಧಾರಗಳು ಮತ್ತು ವರ್ತನೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಅದಕ್ಕೆ ತಕ್ಕಂತೆ ಮಾತುಕತೆಯ ಕಾರ್ಯತಂತ್ರವನ್ನು ರೂಪಿಸಲು ಇರಾನ್ ತನ್ನ ರಾಜತಾಂತ್ರಿಕ ತಂಡಕ್ಕೆ ಇಬ್ಬರು ಹಿರಿಯ ಮನಶ್ಶಾಸ್ತ್ರಜ್ಞರನ್ನು (Psychologists) ಸೇರಿಸಿಕೊಂಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಮನಃಶಾಸ್ತ್ರಜ್ಞರ ಸಲಹೆಯಂತೆ ಬದಲಾದ ಸಂದೇಶ
ಇರಾನಿನ ಅಧಿಕಾರಿಯೊಬ್ಬರ ಪ್ರಕಾರ, ಏಪ್ರಿಲ್‌ನಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸುತ್ತಿನ ಪರೋಕ್ಷ ಮಾತುಕತೆಯ ನಂತರ ಈ ಇಬ್ಬರು ಹಿರಿಯ ಮನಃಶಾಸ್ತ್ರಜ್ಞರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಡೊನಾಲ್ಡ್ ಟ್ರಂಪ್ ಅವರ ವರ್ತನೆಯ ಮಾದರಿಯನ್ನು ಅಧ್ಯಯನ ಮಾಡಿ, ಅಮೆರಿಕಕ್ಕೆ ಕಳುಹಿಸುವ ಲಿಖಿತ ಪತ್ರಗಳು ಹಾಗೂ ಸಂದೇಶಗಳನ್ನು ಯಾವ ಶೈಲಿಯಲ್ಲಿ ರೂಪಿಸಬೇಕು ಎಂದು ಈ ತಜ್ಞರು ಇರಾನ್ ತಂಡಕ್ಕೆ ಮಾರ್ಗದರ್ಶನ ನೀಡಿದರು. ವಿಶೇಷವೆಂದರೆ, ಈ ಬದಲಾವಣೆಗಳನ್ನು ಜಾರಿಗೆ ತಂದ ನಂತರ ಟ್ರಂಪ್ ಅವರಿಂದ ಬಂದ ಪ್ರತಿಕ್ರಿಯೆಗಳು ಹೆಚ್ಚು ಸಕಾರಾತ್ಮಕ ಮತ್ತು ರಚನಾತ್ಮಕವಾಗಿದ್ದವು ಎಂದು ಮೂಲಗಳು ತಿಳಿಸಿವೆ.

ಮಾತುಕತೆಯ ವೇಳೆ ಉಭಯ ದೇಶಗಳ ನಡುವೆ ವಿನಿಮಯವಾಗುವ ಪ್ರತಿಯೊಂದು ಪಠ್ಯ ಮತ್ತು ಪತ್ರಗಳು ಭವಿಷ್ಯದಲ್ಲಿ ಐತಿಹಾಸಿಕ ದಾಖಲೆಗಳಾಗಲಿವೆ ಎಂಬುದನ್ನು ಇರಾನ್ ಗಮನದಲ್ಲಿಟ್ಟುಕೊಂಡಿದೆ. ಮುಂದಿನ ದಿನಗಳಲ್ಲಿ ಇವು ಸಾರ್ವಜನಿಕವಾಗಿ ಬಿಡುಗಡೆಯಾದಾಗ, ಇರಾನ್ ಎಷ್ಟು ಜಾಣ್ಮೆ ಮತ್ತು ಅತ್ಯಾಧುನಿಕ ರಾಜತಾಂತ್ರಿಕ ತಂತ್ರದಿಂದ ಮಾತುಕತೆ ನಡೆಸಿತ್ತು ಎಂಬುದು ಜಗತ್ತಿಗೆ ತಿಳಿಯಲಿ ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ವಿವರಿಸಿದ್ದಾರೆ.

ಮತ್ತಷ್ಟು ಓದಿ: ನಾಳೆಯೇ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ; ತಕ್ಷಣವೇ ಹಾರ್ಮುಜ್ ತೆರೆಯಲಾಗುವುದು ಎಂದ ಟ್ರಂಪ್

ಜೂನ್ 19 ರಂದು ಶಾಂತಿ ಒಪ್ಪಂದಕ್ಕೆ ಸಹಿ
ಈ ರಾಜತಾಂತ್ರಿಕ ಪ್ರಯತ್ನಗಳು ಈಗ ಯಶಸ್ಸಿನ ಹಾದಿಗೆ ಬಂದಿವೆ. ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಂಘರ್ಷವನ್ನು ಕೊನೆಗೊಳಿಸಲು ಡೊನಾಲ್ಡ್ ಟ್ರಂಪ್ ಹಾಗೂ ಇರಾನ್ ಅಧಿಕಾರಿಗಳು ಪ್ರಾಥಮಿಕ ತಿಳುವಳಿಕೆ ಒಪ್ಪಂದಕ್ಕೆ (MoU) ಒಪ್ಪಿಗೆ ಸೂಚಿಸಿದ್ದಾರೆ. ಜೂನ್ 19 ರಂದು ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ಈ ಐತಿಹಾಸಿಕ ಒಪ್ಪಂದಕ್ಕೆ ಉಭಯ ದೇಶಗಳು ಅಧಿಕೃತವಾಗಿ ಸಹಿ ಹಾಕುವ ನಿರೀಕ್ಷೆಯಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ವೈದ್ಯಕೀಯ ತಪಾಸಣೆಯಲ್ಲಿ ಬರೋಬ್ಬರಿ 22 ವೈದ್ಯಕೀಯ ತಜ್ಞರು ಭಾಗವಹಿಸಿದ್ದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಇದು ಹಿಂದಿನ ತಪಾಸಣೆಗಳಿಗಿಂತ ದುಪ್ಪಟ್ಟು ಸಂಖ್ಯೆಯಾಗಿದ್ದು, ಅಮೆರಿಕ ಅಧ್ಯಕ್ಷರ ಆರೋಗ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದ ಮೇಲಿರುವ ಜಾಗತಿಕ ನಿಗಾವನ್ನು ತೋರಿಸುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶ್ರೀಮುರಳಿ, ವಿಜಯ್ ರಾಘವೇಂದ್ರ ತಾಯಿಯ ಅಂತಿಮ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ನಟರಾದ ವಿಜಯ್ ರಾಘವೇಂದ್ರ (Vijay Raghavendra) , ಶ್ರೀಮುರಳಿ ಅವರ ತಾಯಿ ಜಯಮ್ಮ ಇಂದು (ಜೂನ್ 16) ನಿಧನ ಹೊಂದಿದ್ದಾರೆ. ಜಯಮ್ಮನವರ ಅಂತಿಮ ದರ್ಶನ ನಡೆಯುತ್ತಿದ್ದು ಚಿತ್ರರಂಗದ ಕೆಲವು ಗಣ್ಯರು, ಶ್ರೀಮುರಳಿ ಮತ್ತು ವಿಜಯ್ ರಾಘವೇಂದ್ರ ಅವರ ಗೆಳೆಯರು ಜಯಮ್ಮನವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ದೊಡ್ಮನೆಯ ಸಂಬಂಧಿಕರೂ ಆಗಿರುವ ಕಾರಣ ದೊಡ್ಮನೆಯ ಸದಸ್ಯರು ಸಹ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಸಹ ಆಗಮಿಸಿ ಜಯಮ್ಮನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇಬ್ಬರು ಅಲಭ್ಯ: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಸಾಧ್ಯತೆ – Kannada News | India playing 11 for 2nd odi against afghanistan

ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಬುಧವಾರ (ಜೂನ್ 17) ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿರುವ ಶುಭ್‌ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ, ಸದ್ಯ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ನಾಳೆಯ ಪಂದ್ಯವನ್ನು ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ವಿರಾಟ್ ಕೊಹ್ಲಿ, ಹಾರ್ದಿಕ್ ಅಲಭ್ಯ:

ಗಾಯದ ಸಮಸ್ಯೆಯಿಂದಾಗಿ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಇಬ್ಬರು ಸ್ಟಾರ್ ಆಟಗಾರರು ದ್ವಿತೀಯ ಏಕದಿನ ಪಂದ್ಯದಲ್ಲೂ ಕಾಣಿಸಿಕೊಳ್ಳುವುದಿಲ್ಲ.

ಇತ್ತ ವಿರಾಟ್ ಕೊಹ್ಲಿ ತಂಡದಲ್ಲಿ ಇಲ್ಲದ ಕಾರಣ 2ನೇ ಏಕದಿನ ಪಂದ್ಯದಲ್ಲೂ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್​ರೌಂಡರ್ ಆಗಿ ನಿತೀಶ್ ಕುಮಾರ್ ರೆಡ್ಡಿ ಈ ಮ್ಯಾಚ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್:

ಧರ್ಮಶಾಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಅವರನ್ನು ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿದೆ. ಅವರ ಬದಲಿಗೆ ಪ್ರಿನ್ಸ್​ ಯಾದವ್​ಗೆ ಚಾನ್ಸ್ ನೀಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ರೋಹಿತ್ ಶರ್ಮಾ
  2.  ಶುಭ್‌ಮನ್ ಗಿಲ್ (ನಾಯಕ)
  3. ಇಶಾನ್ ಕಿಶನ್
  4. ಶ್ರೇಯಸ್ ಅಯ್ಯರ್
  5.  ಕೆ.ಎಲ್. ರಾಹುಲ್ (ವಿಕೆಟ್ ಕೀಪರ್)
  6.  ನಿತೀಶ್ ಕುಮಾರ್ ರೆಡ್ಡಿ
  7.  ವಾಷಿಂಗ್ಟನ್ ಸುಂದರ್
  8.  ಹರ್ಷ್ ದುಬೆ
  9.  ಅರ್ಷದೀಪ್ ಸಿಂಗ್
  10.  ಗುರ್ನೂರ್ ಬ್ರಾರ್
  11.  ಪ್ರಿನ್ಸ್ ಯಾದವ್

ಪಂದ್ಯದ ವಿವರಗಳು:

  • ದಿನಾಂಕ: ಜೂನ್ 17, 2026 (ಬುಧವಾರ)
  •  ಸಮಯ: ಮಧ್ಯಾಹ್ನ 1:30 ಕ್ಕೆ (ಟಾಸ್ 1:00 ಗಂಟೆಗೆ)
  • ಮೈದಾನ: ಏಕನಾ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಲಕ್ನೋ.
  • ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಮತ್ತು ‘ಜಿಯೋಹಾಟ್‌ಸ್ಟಾರ್’ ಆ್ಯಪ್/ವೆಬ್.

ಇದನ್ನೂ ಓದಿ: 500, 1000, 2000 ಮತ್ತು 14000… ದಾಖಲೆಗಳ ಮೇಲೆ ಕಣ್ಣಿಟ್ಟಿರುವ ರೂಟ್

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

Published On – 2:29 pm, Tue, 16 June 26

Source link

ಟಿವಿ9 ವರದಿಯ ಇಂಪ್ಯಾಕ್ಟ್: ಮಾವಿನ ಹಣ್ಣು ತಿಂದು ಮೃತಪಟ್ಟ ಅಕ್ಕ-ತಂಗಿಯ ಮೂವರು ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್ – Kannada News | TV9 Kannada Impact: MLA Prabhu Chauhan Adopts 3 Sisters of Two Girls Die of Suspected Food Poisoning after eating Mangos

ಮೃತ ಬಾಲಕಿಯರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಪ್ರಭು ಚೌಹಾಣ್Image Credit source: tv9

ಬೀದರ್, ಜೂನ್ 16: ಮಾವಿನ ಹಣ್ಣು ಸೇವಿಸಿದ ಬಳಿಕ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಹಠಾತ್ ಮೃತಪಟ್ಟ ಹೃದಯವಿದ್ರಾವಕ ಘಟನೆಗೆ ಸಂಬಂಧಿಸಿದಂತೆ ‘ಟಿವಿ9’ ಕನ್ನಡ ಬಿತ್ತರಿಸಿದ ವರದಿ ದೊಡ್ಡ ಮಟ್ಟದ ಪ್ರಭಾವ ಬೀರಿದೆ. ವರದಿಗೆ ತಕ್ಷಣವೇ ಸ್ಪಂದಿಸಿರುವ ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌಹಾಣ್, ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸಂತ್ರಸ್ತ ಕುಟುಂಬದ ಮನೆಗೆ ಖುದ್ದಾಗಿ ಭೇಟಿ ನೀಡಿದ್ದಾರೆ. ಅಲ್ಲದೆ, ತಂಗಿಯರನ್ನು ಕಳೆದುಕೊಂಡು ಕಣ್ಣೀರಲ್ಲಿ ಮುಳುಗಿರುವ ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳನ್ನು ದತ್ತು ತೆಗೆದುಕೊಳ್ಳುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಮುಖ್ಯಾಂಶಗಳು

  • ಟಿವಿ9 ಕನ್ನಡ ವಿಶೇಷ ವರದಿಯ ಇಂಪ್ಯಾಕ್ಟ್
  • ಮೂವರು ಹೆಣ್ಣು ಮಕ್ಕಳನ್ನು ದತ್ತು ಪಡೆದ ಶಾಸಕ
  • ಶಿಕ್ಷಣ, ಮದುವೆ ಹಾಗೂ ಉಚಿತ ಮನೆ ಭರವಸೆ

ಘಟನೆಯ ಹಿನ್ನೆಲೆ

ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಒಂದೇ ಕುಟುಂಬದ ಆರು ಜನ ಸದಸ್ಯರು ಜೂನ್ 7 ರಂದು ಮಾವಿನ ಹಣ್ಣು ಸೇವಿಸಿದ ಬಳಿಕ ತೀವ್ರವಾಗಿ ಅಸ್ವಸ್ಥರಾಗಿದ್ದರು. ತಾಯಿ ಇಂದುಮತಿ ಸೇರಿದಂತೆ ಐವರು ಹೆಣ್ಣು ಮಕ್ಕಳು ತೀವ್ರ ವಾಂತಿ-ಭೇದಿಯಿಂದ ನರಳಾಡಿದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ದಾಖಲಿಸಲಾಗಿತ್ತಾದರೂ, ಜೂನ್ 8 ರಂದು ಚಿಕಿತ್ಸೆ ಫಲಕಾರಿಯಾಗದೆ ಸಹೋದರಿಯರಾದ ಭವಾನಿ (17) ಮತ್ತು ಸಂಧ್ಯಾರಾಣಿ (14) ಸಾವನ್ನಪ್ಪಿದ್ದರು. ಮತ್ತೊಬ್ಬ ಸಹೋದರಿ ವಿಜಯಶ್ರೀ ಇಂದಿಗೂ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದ ಕುರಿತು ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬದ ನೆರವಿಗೆ ಧಾವಿಸಿದ ಶಾಸಕರು

ದುರಂತ ಸಂಭವಿಸಿದ ಬಳಿಕ ದಯನೀಯ ಸ್ಥಿತಿಯಲ್ಲಿದ್ದ ಆ ಬಡ ಕುಟುಂಬದ ಬಗ್ಗೆ ‘ಟಿವಿ9’ ಕನ್ನಡ ಸವಿಸ್ತಾರವಾದ ವರದಿಯನ್ನು ಪ್ರಸಾರ ಮಾಡಿ ಸರ್ಕಾರದ ಗಮನ ಸೆಳೆದಿತ್ತು. ವರದಿಯನ್ನು ನೋಡಿ ತಕ್ಷಣವೇ ಶಾಸಕ ಪ್ರಭು ಚೌಹಾಣ್, ಶೆಂಬೆಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಷ್ಟೇ ಅಲ್ಲದೆ, ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ಹಾಗೂ ಅವರ ಮದುವೆಯ ಜವಾಬ್ದಾರಿಯನ್ನು ತಾವೇ ವೈಯಕ್ತಿಕವಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದರ ಜೊತೆಗೆ, ಇದೇ ವರ್ಷದಲ್ಲಿ ಸರ್ಕಾರದ ವತಿಯಿಂದ ಆ ಕುಟುಂಬಕ್ಕೆ ಒಂದು ಸುಸಜ್ಜಿತವಾದ ನೂತನ ಮನೆಯನ್ನು ನಿರ್ಮಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದ್ದು, ಶಾಸಕರ ಈ ಮಾನವೀಯ ಕಾರ್ಯಕ್ಕೆ ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ? – Kannada News | Actress Samantha Warns on Maa Inti Bangaram Stage

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಕಾರ್ಯಕ್ರಮವೊಂದರಲ್ಲಿ ಹಳದಿ ಸೀರೆಯಲ್ಲಿ ಕಂಗೊಳಿಸಿದ ಸಮಂತಾ, ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಅಭಿಮಾನಿಗಳ ಸೀಟಿ, ಚಪ್ಪಾಳೆ ಮುಗಿಲು ಮುಟ್ಟಿತ್ತು. ಇದೇ ಖುಷಿಯಲ್ಲಿ ಮಾತನಾಡಿದ ಸಮಂತಾ, ತಮ್ಮ ಸಿನಿಮಾದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾ ತೆಲುಗಿನಲ್ಲಿ ಖಡಕ್ ಡೈಲಾಗ್ ಒಂದನ್ನು ಹೊಡೆದಿದ್ದಾರೆ. ‘ಈ ಸಿನಿಮಾದಿಂದ ನಾವು ಒಬ್ಬೊಬ್ಬರಿಗೂ ಕೊಡ್ತೀವಿ ನೋಡಿ (ಒಕ್ಕೊಕ್ಕರಿನಿ ಕೊಡ್ತಾಮ್ ಚೂಡು)’ ಎಂದು ಸಮಂತಾ ಮಾಸ್ ಶೈಲಿಯಲ್ಲಿ ಡೈಲಾಗ್ ಹೇಳಿದ್ದಾರೆ. ತಕ್ಷಣವೇ ನಗುತ್ತಾ, ‘ಪ್ರೀತಿಯಿಂದ ಅಪ್ಪಾ’ಎಂದು ಹೇಳುವ ಮೂಲಕ ಅಲ್ಲಿದ್ದವರ ಮುಖದಲ್ಲಿ ನಗು ತರಿಸಿದ್ದಾರೆ. (Source: Maa Inti Bangaram Team)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – Kannada News | RSS Members are Hindutvavadis, Not Hindus: Minister Yathindra Siddaramaiah Backs Priyank Kharge on Registration Row

ಮೈಸೂರು, ಜೂನ್ 16: ಆರ್‌ಎಸ್‌ಎಸ್‌ ಸದಸ್ಯರು ಹಿಂದುಗಳಲ್ಲ, ಬದಲಿಗೆ ಹಿಂದುತ್ವವಾದಿಗಳು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್‌ಎಸ್‌ಎಸ್‌ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಬದಲಾಗಿ, ಇದು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ರಾಜಕೀಯ ಸಂಸ್ಥೆಯಾಗಿದೆ. ಆರ್‌ಎಸ್‌ಎಸ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು. ಎಲ್ಲರಿಗೂ ಒಂದೇ ಕಾನೂನು ಇರಬೇಕು. ಯಾವುದೇ ಸಂಘಟನೆ ತನ್ನನ್ನು ‘ಹಿಂದೂ ಧರ್ಮ’ದ ನೆರಳಲ್ಲಿ ಬಚ್ಚಿಟ್ಟುಕೊಂಡು, ಕಾನೂನಿನಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಗೃಹ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ನೋಂದಣಿಗೆ ಕೇಳಿರುವುದು ಕಾನೂನು ಪ್ರಕಾರ ಸರಿಯಾಗಿದೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅದೊಂದು ರಾಜಕೀಯ ಸಂಘಟನೆ. ಅದು ಪ್ರತಿಯೊಂದು ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತದೆ. ಆದ್ದರಿಂದ, ಆರ್‌ಎಸ್‌ಎಸ್‌ ದೇಶದ ಕಾನೂನುಗಳನ್ನು ಪಾಲಿಸಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತ vs ಶ್ರೀಲಂಕಾ ಪಂದ್ಯವಲ್ಲ, ಅದೊಂದು ‘ನಾಟಕೀಯ ರಂಗಭೂಮಿ’! – Kannada News | Ashwin Reacts to India ‘A’ vs SL ‘A’ No Ball Drama

ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ತಂಡಗಳ ನಡುವೆ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಪಂದ್ಯವು ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಹಾಗೂ ವಿವಾದಾತ್ಮಕ ಅಧ್ಯಾಯವಾಗಿ ಉಳಿಯುವಂತಾಗಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಈ ಪಂದ್ಯವು ಅಂತಿಮವಾಗಿ ಸೂಪರ್ ಓವರ್‌ಗೆ ತಲುಪಿದಾಗ, ಅಲ್ಲಿ ನಡೆದ ಘಟನೆಗಳು ಕೇವಲ ಕ್ರಿಕೆಟ್ ಆಟವಾಗಿ ಉಳಿಯದೆ, ಆಟಗಾರರ ನಡುವಿನ ಮಾನಸಿಕ ಯುದ್ಧವಾಗಿ ಮಾರ್ಪಟ್ಟಿತು. ಹೀಗಾಗಿಯೇ ಈ ಪಂದ್ಯವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಬಣ್ಣಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಅವರು ಈ ಮ್ಯಾಚ್​ ಅನ್ನು “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಕರೆಯಲು ಮುಖ್ಯ ಕಾರಣ ಪಂದ್ಯದ ವೇಳೆ ಕಂಡು ಬಂದ ಟ್ವಿಸ್ಟ್ ಹಾಗೂ ಅವ್ಯವಸ್ಥೆ.

ಏಕೆಂದರೆ ಈ ಪಂದ್ಯವು ಟೈ ಆಗಿ ಸೂಪರ್ ಓವರ್‌ಗೆ ತಲುಪಿದಾಗ ಉಭಯ ತಂಡಗಳಲ್ಲಿ ತೀವ್ರ ಒತ್ತಡವಿತ್ತು. ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರಿಗೆ ಮತ್ತು ವೀಕ್ಷಕರಿಗೆ ಇದು ಯಾವುದೇ ರೋಮಾಂಚಕ ನಾಟಕ ಅಥವಾ ಸಿನಿಮಾಗೆ ಕಮ್ಮಿ ಇರಲಿಲ್ಲ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಅದರಲ್ಲೂ ಸೂಪರ್ ಓವರ್‌ನಲ್ಲಿ ಬಂದ ‘ನೋ ಬಾಲ್’ ತೀರ್ಪು ಪಂದ್ಯದ ಅತಿ ದೊಡ್ಡ ಟ್ವಿಸ್ಟ್ ಆಗಿತ್ತು. ಯಾವುದೇ ನಿಖರ ತಂತ್ರಜ್ಞಾನವಿಲ್ಲದೆ ಅಂಪೈರ್ ನೀಡಿದ ಈ ತೀರ್ಪು ನಾಟಕವೊಂದರ ವಿವಾದಾತ್ಮಕ ಸನ್ನಿವೇಶದಂತೆ ಇಡೀ ಪಂದ್ಯದ ದಿಕ್ಕನ್ನೇ ಬದಲಿಸಿತು ಎಂದು ಎಂಬುದು ಅಶ್ವಿನ್ ಅವರ ಅಭಿಪ್ರಾಯ.

ಇನ್ನು ಕತ್ತಲಾಗುತ್ತಿದ್ದ ಸಂದರ್ಭವನ್ನು ಬಳಸಿಕೊಂಡು ಶ್ರೀಲಂಕಾ ಆಟಗಾರರು ಕ್ರೀಸ್‌ಗೆ ಬರಲು ತಡ ಮಾಡಿದ್ದು ಪಕ್ಕಾ ಚಿತ್ರಕಥೆಯ ವಿಲನ್ ತಂತ್ರಗಳಂತೆ ಕಾಣಿಸಿತು. ಇದು ಭಾರತೀಯ ಆಟಗಾರರಲ್ಲಿ ತೀವ್ರ ಹತಾಶೆ ಮತ್ತು ಆಕ್ರೋಶವನ್ನು ಹುಟ್ಟುಹಾಕಿತು.

ಹಾಗೆಯೇ ಪಂದ್ಯದ ಕ್ಲೈಮ್ಯಾಕ್ಸ್‌ನಲ್ಲಿ ಯುವ ಆಟಗಾರರಾದ ವೈಭವ್ ಸೂರ್ಯವಂಶಿ ಮತ್ತು ವಿಶೇನ್ ಹಲಂಬಾಗೆ ಪರಸ್ಪರ ಮೈದಾನದಲ್ಲೇ ತಳ್ಳಾಡಿಕೊಂಡಿದ್ದು ಆಟದಲ್ಲಿದ್ದ ತೀವ್ರ ಮಾನಸಿಕ ಒತ್ತಡ ಮತ್ತು ಭಾವನೆಗಳ ಸ್ಫೋಟವನ್ನು ತೋರಿಸಿದೆ ಎಂದು ಅಶ್ವಿನ್ ಹೇಳಿದ್ದಾರೆ.

ಕ್ರೀಡಾ ಸ್ಫೂರ್ತಿಯ ದೃಷ್ಟಿಯಿಂದ ಇದು ಸರಿಯಲ್ಲದಿದ್ದರೂ, ವೀಕ್ಷಕರಿಗೆ ಮತ್ತು ಕ್ರಿಕೆಟ್ ಪ್ರಿಯರಿಗೆ ಇದೊಂದು ಮರೆಯಲಾಗದ, ಅತ್ಯಂತ ರೋಮಾಂಚಕ “ನಾಟಕೀಯ ಪಂದ್ಯವಾಗಿತ್ತು” ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.

ಇದನ್ನೂ ಓದಿ: ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ!

ಶ್ರೀಲಂಕಾ ತಂಡಕ್ಕೆ ಸೂಪರ್ ಗೆಲುವು:

ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 49.2 ಓವರ್​ಗಳಲ್ಲಿ 265 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ಎ ತಂಡ 50 ಓವರ್​ಗಳಲ್ಲಿ 265 ರನ್ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಂಡರು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಶ್ರೀಲಂಕಾ 16 ರನ್ ಬಾರಿಸಿದರು. 17 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 6 ಎಸೆತಗಳಲ್ಲಿ ಕೇವಲ 9 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು.

Source link