ಕನಕಪುರದಲ್ಲಿ ಕಾಡಾನೆ ದಾಳಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ದಾರುಣ ಸಾವು: ಅತ್ತ ಚಾಮರಾಜನಗರದಲ್ಲಿಯೂ ಮುಂದುವರಿದ ಒಂಟಿ ಸಲಗದ ಕಾಟ – Kannada News | Elephant Attack Kills Man in Cheelandawadi Village, Kanakapura
ರಾಮನಗರ/ ಚಾಮರಾಜನಗರ, ಏಪ್ರಿಲ್ 26: ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಕನಕಪುರದ ಪ್ರವಾಸಿ ಸ್ಥಳ ಸಂಗಮದಲ್ಲಿ ಮಹಿಳೆಯೋರ್ವರ ಮೇಲೆ ಕಾಡಾನೆ ಇತ್ತೀಚೆಗಷ್ಟೇ ದಾಳಿ ನಡೆಸಿತ್ತು. ಏಕಾಏಕಿ ಬಂದ ಕಾಡಾನೆ ಕಂಡು ಪ್ರಾಣ ಭೀತಿಯಿಂದ ಜನರು ದಿಕ್ಕಾಪಾಲಾಗಿ ಓಡುವ ವಿಡಿಯೋ ವೈರಲ್ ಆಗಿತ್ತು. ಆ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೋರ್ವರ ಬಲಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…