11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?
‘ಧುರಂಧರ್ 2’ ಸಿನಿಮಾ ರಿಲೀಸ್ ಆಗುವಾಗ ಎಷ್ಟು ನಿರೀಕ್ಷೆಗಳು ಇದ್ದವು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ಮತ್ತೊಂದು ಸಿನಿಮಾ ತೆರೆಗೆ ಬರಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಆದಾಗ್ಯೂ ಇಂತಹ ಚಾಲೆಂಜ್ ಅನ್ನು ‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ಸ್ವೀಕರಿಸಿತು. ಈ ಚಿತ್ರ ಫ್ಯಾಮಿಲಿ ಆಡಿಯನ್ಸ್ಗೆ ಇಷ್ಟ ಆಗಿದೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಎರಡನೇ ಭಾನುವಾರವೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ‘ಧುರಂಧರ್ 2’…