RR vs SRH: 36 ಎಸೆತ, 12 ಸಿಕ್ಸರ್..! ವೇಗದ ಶತಕ ಸಿಡಿಸಿ ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record 36 Ball Century for RR, Claims Orange Cap!
ಐಪಿಎಲ್ 2026 (IPL 2026) ರ 36 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ ಸ್ಫೋಟಕ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಶತಕವನ್ನು ಸಿಡಿಸಿದರು. ತಮ್ಮ ಈ ಶತಕದ ಇನ್ನಿಂಗ್ಸ್ನಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್ಗಳನ್ನು ಬಾರಿಸಿದ ವೈಭವ್ ಕೇವಲ ಬೌಂಡರಿಗಳಿಂದಲೇ 92 ರನ್ ಕಲೆಹಾಕಿದರು. ಅಂದರೆ ವೈಭವ್ ಕೇವಲ 17 ಎಸೆತಗಳಲ್ಲಿ ಬರೋಬ್ಬರಿ 92…