MI vs KKR: 550 ಸಿಕ್ಸರ್ಗಳು..! ಇತಿಹಾಸ ನಿರ್ಮಿಸಿದ ರೋ‘ಹಿಟ್’ ಶರ್ಮಾ
2026 ರ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಅವರಿಂದ ಅವರ ಅಭಿಮಾನಿಗಳು ಯಾವ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಿದ್ದರೋ ಅದೇ ರೀತಿಯ ಪ್ರದರ್ಶನ ಮೊದಲ ಪಂದ್ಯದಲ್ಲೇ ಮೂಡಿಬಂದಿದೆ. ಈ ಆವೃತ್ತಿಯಲ್ಲಿ ಮೊದಲ ಪಂದ್ಯವನ್ನಾಡುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅಬ್ಬರಿಸಿ ಬೊಬ್ಬಿರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಆರಂಭದಿಂದಲೇ…