All posts by nagaraj11081993

MI vs KKR: 550 ಸಿಕ್ಸರ್​ಗಳು..! ಇತಿಹಾಸ ನಿರ್ಮಿಸಿದ ರೋ‘ಹಿಟ್’ ಶರ್ಮಾ

Source link

9 ವರ್ಷ ಹಳೆಯ ‘ಬಾಹುಬಲಿ 2’ ದಾಖಲೆ ಮುರಿದ ‘ಧುರಂಧರ್ 2’

ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಕ್ಷರಷಃ ಅಬ್ಬರಿಸುತ್ತಿದೆ. ಬಿಡುಗಡೆ ಆದ ಎಲ್ಲ ಸೆಂಟರ್​​ಗಳಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಹಿಂದಿ ಸಿನಿಮಾಗಳು ದಕ್ಷಿಣದಲ್ಲಿ ಓಡುವುದು ಕಡಿಮೆ, ಅದರಲ್ಲೂ ತಮಿಳುನಾಡು, ಆಂಧ್ರ, ಕೇರಳಗಳಲ್ಲಿ ಬಹಳ ಕಡಿಮೆ. ಆದರೆ ಅಲ್ಲಿಯೂ ಸಹ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದಲ್ಲಿ ಮಾತ್ರವೇ ಅಲ್ಲದೆ, ವಿದೇಶಗಳಲ್ಲಿಯೂ ದೊಡ್ಡ ಮೊತ್ತವನ್ನು ಗಳಿಕೆ ಮಾಡುತ್ತಿದೆ. ಹಳೆಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿಗಟ್ಟುತ್ತಿದೆ ‘ಧುರಂಧರ್ 2’ ಸಿನಿಮಾ. ಇದೀಗ ಒಂಬತ್ತು ವರ್ಷ ಹಳೆಯ ‘ಬಾಹುಬಲಿ 2’ ದಾಖಲೆಯೊಂದನ್ನು ಸಿನಿಮಾ ಮುರಿದಿದ್ದು, ‘ಬಾಹುಬಲಿ 2’ ನಿರ್ಮಾಪಕ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಎಲ್ಲರಿಗೂ ಗೊತ್ತಿರುವಂತೆ ‘ಬಾಹುಬಲಿ 2’ ಸಿನಿಮಾ ಭಾರತದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳಲ್ಲಿ ಹಲವು ವರ್ಷಗಳಿಂದಲ ಎರಡನೇ ಸ್ಥಾನದಲ್ಲಿದೆ. ಇನ್ನೂ ಈ ದಾಖಲೆಯನ್ನು ‘ಧುರಂಧರ್ 2’ ಸಿನಿಮಾಕ್ಕೆ ಮುರಿಯಲು ಆಗಿಲ್ಲ. ಆದರೆ ಉತ್ತರ ಅಮೆರಿಕದ ಬಾಕ್ಸ್ ಆಫೀಸ್‌ನಲ್ಲಿ ಕಳೆದ 9 ವರ್ಷಗಳಿಂದ ಅಚ್ಚಳಿಯದ ದಾಖಲೆ ಬರೆದಿದ್ದ ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರದ ದಾಖಲೆಯನ್ನು ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದ ರಿವೆಂಜ್’ ಮುರಿದಿದೆ.

ಎಸ್ಎಸ್ ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಉತ್ತರ ಅಮೆರಿಕದಲ್ಲಿ 20.19 ಮಿಲಿಯನ್ ಡಾಲರ್ (192 ಕೋಟಿ ರೂಪಾಯಿಗಳು) ಗಳಿಸಿ ದಾಖಲೆ ನಿರ್ಮಿಸಿತ್ತು. ಈಗ ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಈಗಾಗಲೇ 19.33 ಮಿಲಿಯನ್ ಡಾಲರ್ (183 ಕೋಟಿ ರೂಪಾಯಿಗಳು) ಗಳಿಸಿದ್ದು, ಅತಿ ಶೀಘ್ರದಲ್ಲೇ ಅಂದರೆ ಸೋಮವಾರದ ವೇಳೆಗೆ ಬಾಹುಬಲಿಯ ದಾಖಲೆಯನ್ನು ಹಿಂದಿಕ್ಕುವ ನಿರೀಕ್ಷೆಯಿದೆ. ‘ಬಾಹುಬಲಿ 2’ ಸಿನಿಮಾದ ಈ ಕಲೆಕ್ಷನ್ ದಾಖಲೆಯನ್ನು ಕಳೆದ ಒಂಬತ್ತು ವರ್ಷಗಳಿಂದ ಯಾರೂ ಸಹ ಮುರಿದಿರಲಿಲ್ಲ.

ಇದನ್ನೂ ಓದಿ:‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಈ ಸಾಧನೆಯ ಬಗ್ಗೆ ಟ್ವೀಟ್ ಮಾಡಿರುವ ‘ಬಾಹುಬಲಿ’ ಚಿತ್ರದ ನಿರ್ಮಾಪಕ ಶೋಭು ಯಾರ್ಲಗಡ್ಡ ಅವರು, ‘ನಿನ್ನೆ ನಾನು ‘ಧುರಂಧರ್ 2’ ಸಿನಿಮಾ ನೋಡಿದೆ, ಸಿನಿಮಾ ನನಗೆ ತುಂಬಾ ಇಷ್ಟವಾಯಿತು. ಈ ಚಿತ್ರವು ಭಾರತ ಮತ್ತು ವಿಶ್ವದಾದ್ಯಂತ ಹೊಸ ಬಾಕ್ಸ್ ಆಫೀಸ್ ದಾಖಲೆಗಳನ್ನು ನಿರ್ಮಿಸುತ್ತಿರುವುದು ಸಂತೋಷ ತಂದಿದೆ. ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ಬರೆದಿದ್ದಾರೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಇದೇ ನಾರ್ತ್ ಅಮೆರಿಕನಲ್ಲಿ 19.70 ಮಿಲಿಯನ್ ಡಾಲರ್ ಅಂದರೆ ಸುಮಾರು 184 ಕೋಟಿ ರೂಪಾಯಿಗಳನ್ನು ಗಳಿಸಿತ್ತು. ಆದರೆ ‘ಬಾಹುಬಲಿ 2’ ದಾಖಲೆಯನ್ನು ಅದಕ್ಕೆ ಮುರಿಯಲು ಆಗಿರಲಿಲ್ಲ. ಆದರೆ ಈಗ ‘ಧುರಂಧರ್ 2’ ಸಿನಿಮಾ ಸುಲಭವಾಗಿ ಆ ದಾಖಲೆಯನ್ನು ಮುರಿದಿದೆ.

2017 ರಲ್ಲಿ ಬಿಡುಗಡೆ ಆಗಿದ್ದ ‘ಬಾಹುಬಲಿ 2’ ಸಿನಿಮಾ ವಿಶ್ವದಾದ್ಯಂತ ಒಟ್ಟು ಸುಮಾರು 1800 ಕೋಟಿಗೂ ಹೆಚ್ಚು ಹಣ ಗಳಿಸಿದೆ. ‘ಧುರಂಧರ್ 2’ ಸಿನಿಮಾ ಈ ದಾಖಲೆಯನ್ನು ಮುರಿಯಲು ಮುನ್ನುಗ್ಗುತ್ತಿದೆ. ಸಿನಿಮಾ ಬಿಡುಗಡೆ ಆಗಿ 11 ದಿನಗಳಾಗಿದ್ದು ಈ ವರೆಗೆ 1200 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಸಿನಿಮಾ 1800 ಕೋಟಿ ಗಳಿಸುವ ನಿರೀಕ್ಷೆ ಇದೆ. ‘ಧುರಂಧರ್ 2’ ಸಿನಿಮಾ 1800 ಕೋಟಿ ಗಳಿಸಿದಲ್ಲಿ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕದಲ್ಲಿ ಎರಡನೇ ಸ್ಥಾನಕ್ಕೇರಲಿದೆ. ಮೊದಲ ಸ್ಥಾನಕ್ಕೇರಲು ‘ದಂಗಲ್’ ಸಿನಿಮಾವನ್ನು ಹಿಂದಿಕ್ಕಬೇಕಿದೆ. ಆ ಸಿನಿಮಾ ವಿಶ್ವದಾದ್ಯಂತ 2200 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ

ಬೆಂಗಳೂರು, (ಮಾರ್ಚ್ 29): ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ತುಮಕೂರು, ಮಾರ್ಚ್​ 29: ನಿಮ್ಮ ಬಳಿಯಿರುವ ಗ್ಯಾಸ್​ನ್ನು ವ್ಯರ್ಥ ಮಾಡಬೇಡಿ, 5 ಬಾರಿ ಚಿಂತಿಸಿ ಬಳಸಿ ಎಂದು ಸಿದ್ದಲಿಂಗಶ್ರೀ ಮನವಿ ಮಾಡಿದರು. ನಗರದ ಸಿದ್ಧಗಂಗಾ ಮಠದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ವಿದ್ಯುತ್, ನೀರು, ಎಲ್​ಪಿಜಿ, ತೈಲ ಅತ್ಯಂತ ಅಮೂಲ್ಯವಾದುದು. ನಮಗೆ ಸಿಕ್ಕಿದ್ದು ಮತ್ತೊಬ್ಬರಿಗೂ ಸಿಗಲಿ ಎಂದು ಉದಾರತೆ ಇರಲಿ. ಪ್ರತಿಯೊಂದು ವಸ್ತು ಬಳಸುವಾಗ 5 ಬಾರಿ ಯೋಚಿಸಿ ಬಳಸಿ. ನಮ್ಮ ಬಳಿ ಅಧಿಕವಾಗಿದ್ದರೂ ಮುಂದಿನ ದಿನಗಳಲ್ಲಿ ಕೊರತೆಯಾಗಬಹುದು. ಸಿದ್ಧಗಂಗಾ ಮಠದಲ್ಲಿ ಸೌದೆ, ಅಡಕೆ ಸಿಪ್ಪೆಯನ್ನು ಇಂಧನವಾಗಿ ಬಳಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗೋಬರ್ ಗ್ಯಾಸ್ ಘಟಕ ಅಳವಡಿಸುವ ಚಿಂತನೆಯಿದೆ. ಯುದ್ಧದಂತಹ ಅನಿಶ್ಚಿತ ಪರಿಸ್ಥಿತಿಯಲ್ಲಿ ಲಭ್ಯವಿರುವ ಸಂಪನ್ಮೂಲ ಮಿತವಾಗಿ ಬಳಸುವ ಮೂಲಕ ಸಂಕಷ್ಟ ಎದುರಿಸಲು ನಾವೆಲ್ಲರೂ ಸಿದ್ಧರಿರಬೇಕು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 221 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದ್ದು ಮಾತ್ರವಲ್ಲದೆ ಪವರ್‌ಪ್ಲೇನಲ್ಲಿಯೇ ತಂಡವನ್ನು 80 ರನ್​ಗಳ ಗಡಿ ಮುಟ್ಟಿಸಿದ್ದಾರೆ. ಇದೇ ವೇಳೆ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಅರ್ಧಶತಕವನ್ನು ಪೂರೈಸಿದರು.

ಈ ಐಪಿಎಲ್​ಗೆ ಭರ್ಜರಿ ತಯಾರಿ ಮಾಡಿಕೊಂಡು ಬಂದಿರುವ ರೋಹಿತ್ ಶರ್ಮಾ ದೈಹಿಕವಾಗಿಯೂ ಫಿಟ್ ಆಗಿ ಕಾಣುತ್ತಿದ್ದಾರೆ. ಅದರ ಪರಿಣಾಮ ಮೊದಲ ಪಂದ್ಯದಲ್ಲೇ ಕಂಡುಬಂದಿದೆ. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲೇ ಹೊಡಿಬಡಿ ಆಟಕ್ಕೆ ಮುಂದಾದರು. ಇದರ ಪರಿಣಾಮವಾಗಿ ರೋಹಿತ್ ಪವರ್‌ಪ್ಲೇನಲ್ಲಿಯೇ ತಮ್ಮ ಅರ್ಧಶತಕವನ್ನು ಪೂರೈಸಿದರು.

ಕೇವಲ 23 ಎಸೆತಗಳಲ್ಲಿ ಐದು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳ ಸಹಿತ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾಗೆ ಇದು ಅವರ ಐಪಿಎಲ್ ವೃತ್ತಿಜೀವನದಲ್ಲಿ ಅತಿ ವೇಗದ ಅರ್ಧಶತಕವಾಗಿದೆ. ರೋಹಿತ್ ಅರ್ಧಶತಕ ಬಾರಿಸುವುದರ ಜೊತೆಗೆ ರಿಕಲ್ಟನ್ ಜೊತೆಗೂಡಿ ಮೊದಲ 6 ಓವರ್​ಗಳಲ್ಲಿ 80 ರನ್​ಗಳ ಜೊತೆಯಾಟವನ್ನು ಕಟ್ಟಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತನ್ನ ಕಾರು ಡ್ರೈವರ್ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ

ದಳಪತಿ ವಿಜಯ್ (Thalapathy Vijay) ತಮಿಳುನಾಡು ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ. ತಮ್ಮ ಟಿವಿಕೆ ಪಕ್ಷದಿಂದ ಟಿಕೆಟ್ ವಿತರಣೆ ಆರಂಭಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಭರ್ಜರಿ ರ್ಯಾಲಿಗಳನ್ನು ಮಾಡುತ್ತಾ ಚುನಾವಣಾ ಪ್ರಚಾರವನ್ನು ಜೋರಾಗಿ ಮಾಡುತ್ತಿದ್ದಾರೆ. ಇದೀಗ ತಮ್ಮ ಬಳಿ ಹಲವು ವರ್ಷ ಡ್ರೈವರ್ ಆಗಿ ಕೆಲಸ ಮಾಡಿದ ವ್ಯಕ್ತಿಯ ಮಗನಿಗೆ ಚುನಾವಣಾ ಟಿಕೆಟ್ ಅನ್ನು ದಳಪತಿ ವಿಜಯ್ ನೀಡಿದ್ದು, ಡ್ರೈವರ್ ಪುತ್ರ, ಕಣ್ಣೀರು ಹಾಕುತ್ತಾ ವಿಜಯ್ ಕಾಲಿಗೆ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಬೆಂಗಳೂರು, (ಮಾರ್ಚ್ 29): ಪತ್ನಿಯ (Wife) ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (Husband) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆಗೆ  ಬೇಸತ್ತಿರುವ ಪತಿ,  ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ ಪತ್ನಿ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ವಿವರಿಸಿದ್ದಾರೆ.

ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ ವಿಕೃತವಾಗಿ ವರ್ತಿಸುತ್ತಾಳೆ. ಸ್ನೇಹಿತೆಯರ ಜೊತೆ ಸ್ವೀಟ್ ಮೆಮೋರಿ ಹಂಚಿಕೊಳ್ಳುವಂತೆ ಒತ್ತಾಯಿಸುತ್ತಾಳೆ. ಅಲ್ಲದೇ ಮದುವೆಗೂ ಮುನ್ನ ಆಕೆಯ ಸಂಬಂಧಗಳ ಬಗ್ಗೆ ಹೇಳಿ ಕಿರಿಕಿರಿ ಉಂಟುಮಾಡುತ್ತಾಳೆ.ಅಷ್ಟೇ ಅಲ್ಲ ಕುಡಿದು ಬರುವುದು, ಸ್ನೇಹಿತರ ಜೊತೆ ಅಲೆದಾಡುವುದು ಇಂದಿನ ಕಾಲದಲ್ಲಿ ಕಾಮನ್ ಎಂದು ಹೇಳಿ ವಿಕೃತವಾಗಿ ವರ್ತಿಸುತ್ತಾಳೆ. ವಿಕೃತ ದೈಹಿಕ ಸಂಪರ್ಕಕ್ಕೆ ಒಪ್ಪದೇ ಇದ್ದಾಗ ಕಿರುಕುಳ ನೀಡುತ್ತಾಳೆ ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾನೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಇನ್ನು ಪತ್ನಿಯ ಈ ಅಸಲಿ ಮುಖ ತಿಳಿಯುವ ಮುನ್ನವೇ ಆಕೆಗೆ ಒಡವೆಗಳನ್ನು ಕೊಟ್ಟಿದ್ದೇನೆ. ಆ ಒಡವೆಗಳನ್ನೂ ವಾಪಸ್ ನೀಡದೆ ಸತಾಯಿಸುತ್ತಿದ್ದಾಳೆ ಎಂದು ನೊಂದ ಪತಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ಹಾಸನ, ಮಾರ್ಚ್​ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿರುವಂತಹ ಘಟನೆ  ಹಾಸನದ ಅರಳೆಪೇಟೆಯ ಎಂಹೆಚ್​​ ಕನ್ವೆನ್ಷನ್​ಹಾಲ್​ನಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆನ್ಷನ್​ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

MI vs KKR: ಕಣಕ್ಕಿಳಿಯುವ ಮುನ್ನವೇ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸುನಿಲ್ ನರೈನ್

Source link

‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ ಬುದ್ಧಿ ಇಲ್ಲದ ಜನ, ಬಿಜೆಪಿ ಕಾರ್ಯಕರ್ತರು ಅದನ್ನು ನಂಬಿಕೊಂಡರೆ ಬೇಸರ ಇಲ್ಲ. ಆದರೆ ಶಿಕ್ಷಿತರು ಈ ಪ್ರೊಪೊಗಾಂಡಾಕ್ಕೆ ಒಳಗಾಗಬಾರದು’ ಎಂದಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link