Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 19ರ ದಿನಭವಿಷ್ಯ
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾಕಾದರೂ ಈ ಕೆಲಸ ಒಪ್ಪಿಕೊಂಡೆನೋ ಎಂಬಷ್ಟು ರೇಜಿಗೆ ಈ ದಿನ ನಿಮಗೆ ಆಗಲಿದೆ. ಒಬ್ಬೊಬ್ಬರು ಒಂದು ರೀತಿ ಹೇಳುತ್ತಾ, ಒಂದು ಕೆಲಸವನ್ನು ನಾಲ್ಕೈದು ಬಾರಿ, ನಾಲ್ಕೈದು ರೀತಿಯಲ್ಲಿ ಮಾಡುವಂತೆ ಆಗಲಿದೆ. ಎಲ್ಲರಿಗೂ ಒಳ್ಳೆಯವರಾಗಿರಬೇಕು ಎಂಬ ಆಲೋಚನೆಯನ್ನು ಬಿಟ್ಟು, ಹೊರಗೆ ಬನ್ನಿ. ನೀವು ಹೇಳಬೇಕು ಅಂದುಕೊಂಡ ವಿಚಾರವನ್ನು ನೇರವಾಗಿ ಹೇಳುವುದಕ್ಕೆ ಪ್ರಯತ್ನಿಸಿ. ಹಣಕಾಸು ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರ ಆಕ್ಷೇಪಕ್ಕೆ…