BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ: ಅಂತಾರಾಜ್ಯ ಕಳ್ಳರಿಗೆ ಬಿಗ್ ಶಾಕ್ ಕೊಟ್ಟ ಖಾಕಿ – Kannada News | Bengaluru Police Arrest Three for BSNL Copper Wire and Module Theft
ಬೆಂಗಳೂರು, ಏಪ್ರಿಲ್ 24: ಯಶವಂತಪುರ ಪೊಲೀಸರು ಬಿಎಸ್‌ಎನ್‌ಎಲ್ ಮಾಡ್ಯೂಲ್‌ಗಳು ಮತ್ತು ಕಾಪರ್ ವೈರ್‌ಗಳನ್ನು ಕದಿಯುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದವರಾದ ರವಿ ಚೌಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂಬುವವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಈ ಖದೀಮರು ಬಿಎಸ್‌ಎನ್‌ಎಲ್ ಸಿಬ್ಬಂದಿಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದರು. ಕಳ್ಳತನಕ್ಕಾಗಿ ನೀಲಿ ಸಮವಸ್ತ್ರವನ್ನು ಧರಿಸಿ ರಿಪೇರಿ ಕೆಲಸದ ನೆಪದಲ್ಲಿ ಬರುತ್ತಿದ್ದರು. ಫುಟ್‌ಪಾತ್‌ಗಳಲ್ಲಿ ಅಳವಡಿಸಿದ್ದ ಬಿಎಸ್‌ಎನ್‌ಎಲ್ ಟೆಲಿಫೋನ್ ಮತ್ತು ಇಂಟರ್ನೆಟ್ LAN ಕೇಬಲ್‌ಗಳನ್ನು ಹೊಂದಿದ್ದ ಕಬ್ಬಿಣದ ಪಿಲ್ಲರ್‌ಗಳನ್ನು ಪಿಕಾಸಿ, ಸುತ್ತಿಗೆ,…