ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Narendra Modi called West Bengal phase 1 polling is beginning of end for TMCs jungle raj
ಕೊಲ್ಕತ್ತಾ, ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ದಾಖಲೆಯ ಮತದಾನವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಜಂಗಲ್ ರಾಜ್ನ ಅಂತ್ಯದ ಆರಂಭ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರರೆ. ಮೇ 4ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ಖಂಡಿತವಾಗಿಯೂ ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಿಳಾ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಟಿಎಂಸಿಯನ್ನು ಮಹಿಳಾ ವಿರೋಧಿ ಪಕ್ಷ ಎಂದು ಮೋದಿ ಟೀಕಿಸಿದ್ದಾರೆ. ಚುನಾವಣಾ…