ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ – Kannada News | CET Exam Janivara Controversy: Students Forced to Remove Sacred Thread in Bengaluru College
ಬೆಂಗಳೂರು, ಏಪ್ರಿಲ್ 23: ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷ ಜನಿವಾರದ ವಿಷಯದಲ್ಲಿ ವಿರೋಧಗಳು ವ್ಯಕ್ತವಾಗಿ, ವಿಷಯ ಹೈಕೋರ್ಟ್ ಮೆಟ್ಟಿಲೇರಿ ಮುಖ್ಯಮಂತ್ರಿಗಳು ಕೂಡ ಜನಿವಾರ ತೆಗೆಸದಂತೆ ಸೂಚನೆ ನೀಡಿದ್ದರು. ಆದರೂ, ನಿನ್ನೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಪರೀಕ್ಷಾ ಕೇಂದ್ರದ ಸಿಬ್ಬಂದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಒಬ್ಬ ವಿದ್ಯಾರ್ಥಿಯ ಪ್ರಕಾರ, ಪ್ರವೇಶದ ವೇಳೆ ಜನಿವಾರವನ್ನು ಪರಿಶೀಲಿಸಿದ ಸಿಬ್ಬಂದಿ, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ. ಇದು ಕೇವಲ…