ಗಿಲ್ಲಿಗೆ ಒಳ್ಳೆಯದಾಗಲಿ, ಅವನ ಹೆಸರಲ್ಲಿ ನಡೆಯುತ್ತಿರುವ ದೊಂಬರಾಟಕ್ಕಲ್ಲ; ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ – Kannada News | Gilli’s Popularity Exploited? Chandrachud Condemns “Drama” in His Name
ಯಾರಾದರೂ ಒಬ್ಬರು ಹೆಸರು ಮಾಡುತ್ತಿದ್ದಾರೆ ಎಂದರೆ ಅದರ ಲಾಭ ಪಡೆಯಲು ಕೆಲವರು ಮುಂದಾಗುತ್ತಾರೆ. ಅವರ ಜನಪ್ರಿಯತೆಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ನಡೆಯುತ್ತದೆ. ಗಿಲ್ಲಿ ವಿಷಯದಲ್ಲಿ ಹೀಗೆಯೇ ಆಗುತ್ತಿದೆ ಎಂದು ಸುದೀಪ್ (Sudeep) ಆಪ್ತ, ಬಿಗ್ ಬಾಸ್ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದಾರೆ.ಗಿಲ್ಲಿಗೆ ಒಳ್ಳೆಯದಾಗಲಿ ಎಂದು ಹಾರೈಸಿರೋ ಅವರು, ಗಿಲ್ಲಿ ಹೆಸರಲ್ಲಿ ನಡೆಯುತ್ತಿರುವ ದೊಂಬರಾಟವನ್ನು ಖಂಡಿಸಿದ್ದಾರೆ. ಇದೇ ಮೊದಲ ಬಾರಿಗೆ ತಮ್ಮದೇ ಯೂಟ್ಯೂಬ್ ಚಾನೆಲ್ ಪಾಡ್ಕಾಸ್ಟ್ನಲ್ಲಿ ಚಕ್ರವರ್ತಿ ಮಾತನಾಡಿದ್ದಾರೆ. ‘ಕಾಲಾಪತ್ಥರ್ ಸಿನಿಮಾದಲ್ಲಿ ಗಿಲ್ಲಿ ನನ್ನ ಜೊತೆ…