Bheemanna Khandre passes away: ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ನಿಧನ – Kannada News | Veteran Congress Leader and Former Minister Bheemanna Khandre Passes Away at 102 in Bidar
ಬೀದರ್, ಜನವರಿ 17: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) (Bheemanna Khandre) ವಯೋಸಹಜ ಅನಾರೋಗ್ಯದಿಂದ ಬೀದರ್ನ (Bidar) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಸೋಮವಾರ ಅವರನ್ನು ಮನೆಗೆ ಕರೆದೊಯ್ದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ…