ಅಬ್ಬರದ ಶತಕ ಸಿಡಿಸಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಡೇವಿಡ್ ವಾರ್ನರ್
ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಬಳಿಕ ಟಿ20 ಲೀಗ್ಗಳಲ್ಲಿ ನಿರತರಾಗಿರುವ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದಾರೆ. ಬಿಗ್ ಬ್ಯಾಷ್ ಲೀಗ್ 2025-26 ರ 37 ನೇ ಪಂದ್ಯದಲ್ಲಿ, ಸಿಡ್ನಿ ಥಂಡರ್ ನಾಯಕ ಡೇವಿಡ್ ವಾರ್ನರ್ ಸಿಡ್ನಿ ಸಿಕ್ಸರ್ಸ್ ವಿರುದ್ಧ ಸ್ಫೋಟಕ ಶತಕ ಬಾರಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಥಂಡರ್ ತಂಡದ ಪರ ಅಬ್ಬರಿಸಿದ…