Bomb Attack: ಮತದಾನದ ವೇಳೆ ಮುರ್ಷಿದಾಬಾದ್ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ – Kannada News | Violence Erupts During Voting in Murshidabad, Several Injured
ಮುರ್ಷಿದಾಬಾದ್, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ…