LSG vs RR IPL 2026 Live Score: ಸೂಪರ್ ಜೈಂಟ್ಸ್ಗೆ ರಾಯಲ್ಸ್ ಸವಾಲು
ಇಂಡಿಯನ್ ಪ್ರೀಮಿಯರ್ ಲೀಗ್ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಎರಡೂ ತಂಡಗಳು ಕಳೆದ ಎರಡು ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮೊದಲಾರ್ಧವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ…