ರಾಯಚೂರು: ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ರಾಯಚೂರು, ಜೂನ್ 16: ರಾಯಚೂರು ತಾಲ್ಲೂಕಿನ ವಿಜಯನಗರ ಕ್ಯಾಂಪ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಮಕ್ಕಳು ಜೀವಭಯದಲ್ಲೇ ಪಾಠ ಕಲಿಯುವಂತಾಗಿದೆ. 2002ರಲ್ಲಿ ನಿರ್ಮಾಣಗೊಂಡ ಈ ಕಟ್ಟಡ ಕೇವಲ 24 ವರ್ಷಗಳಲ್ಲೇ ಕುಸಿಯುವ ಹಂತಕ್ಕೆ ಬಂದಿದೆ. ಶಾಲೆಯ ಮೇಲ್ಛಾವಣಿ ಪದೇ ಪದೇ ಕುಸಿಯುತ್ತಿದ್ದು, ಸಣ್ಣ ಮಳೆ ಬಂದರೂ ನೀರು ಸೋರುತ್ತದೆ. ಇದರಿಂದ ಮಕ್ಕಳು ಹಾಗೂ ಶಿಕ್ಷಕರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಕರು ಅವರನ್ನು ಶಾಲಾ ಕೊಠಡಿಗಳಿಂದ ಹೊರಗೆ, ಮರದ ಕೆಳಗೆ…