ಎಸ್.ಕೆ. ಉಮೇಶ್ ಬರೆದ ‘ಐ ವಿಟ್ನೆಸ್’ ಕೃತಿ ಆಧಾರಿತ ಸಿನಿಮಾ ‘ಚಾರ್ಜ್‌ಶೀಟ್ 03-08’ – Kannada News | Chargesheet 03 08 Kannada movie based on Eye Witness book by SK Umesh
ನಿಜ ಜೀವನದಲ್ಲಿ ನಡೆದ ಕ್ರೈಂ ಘಟನೆಗಳನ್ನು ಆಧರಿಸಿದ ‘ಚಾರ್ಜ್‌ಶೀಟ್ 03-08’ (Chargesheet 03-08) ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಈ ಸಿನಿಮಾದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಬೆಚ್ಚಿಬೀಳಿಸುವ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ (Kannada Cinema) ನಿರ್ಮಾಣ ಆಗುತ್ತಿದೆ. ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ (SK Umesh) ಬರೆದ ‘ಐ ವಿಟ್ನೆಸ್’ ಕೃತಿ ಆಧರಿಸಿ ಈ ಸಿನಿಮಾವನ್ನು ಮಾಡಲಾಗುತ್ತಿದೆ. 2003ರಲ್ಲಿ ಬೆಂಗಳೂರಿನಲ್ಲಿ ನಡೆದ ನಿಜ…