ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ ಆರೋಪ: ಸಂತ್ರಸ್ತೆ ಹೇಳಿದ್ದೇನು? – Kannada News | Police Complaint Filed Against Bhadravathi Principal Over Harassment of Dalit Guest Lecturer
ಶಿವಮೊಗ್ಗ, ಜನವರಿ 13: ಭದ್ರಾವತಿಯ ಎನ್ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶ್ರೀಪಾದ್ ಹೆಗಡೆ ವಿರುದ್ಧ ಸಂತ್ರಸ್ತೆ ಜಾತಿ ನಿಂದನೆ ಆರೋಪವನ್ನೂ ಮಾಡಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕ ಮಹನೀಯರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆಂದೇ ಸ್ಥಾಪಿಸಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಶಿಕ್ಷಣ ಸಂಸ್ಥೆಯಲ್ಲೇ ಇಂತಹ ಆರೋಪ ಕೇಳಿಬಂದಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಸಂತ್ರಸ್ತ ಉಪನ್ಯಾಸಕಿ…