ಮಹಾರಾಷ್ಟ್ರ: ಆಟವಾಡುತ್ತಿದ್ದಾಗ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ಸಾವು – Kannada News | Maharashtra: 5 Year Old Dies in Open Septic Tank; Urgent Call for Child Safety
ಭೀವಂಡಿ, ಜೂನ್ 16: ಆಟವಾಡುವಾಗ ಐದು ವರ್ಷದ ಬಾಲಕ(Boy) ತೆರೆದಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಅಹ್ಮದ್ ಮೃತ ಬಾಲಕ. ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್ ಆಗಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯದಲ್ಲಿ ಕಟ್ಟಡದ ಆವರಣದಲ್ಲಿ ಕೆಲವು ಮಕ್ಕಳು ಆಟವಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಸೆಪ್ಟಿಕ್ ಟ್ಯಾಂಕ್ ಬಳಿ ಬಂದ ಬಾಲಕ ಮೊಹಮ್ಮದ್, ಟ್ಯಾಂಕ್‌ನ ಮುಚ್ಚಳವನ್ನು ಸರಿಯಾಗಿ ಮುಚ್ಚದ ಕಾರಣ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು…