nagaraj11081993

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು. ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ…

Read More

ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು,…

Read More

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ಮಾಡುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಸ್ವಚ್ಛತೆಯ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು…

Read More

IDBI Bank Recruitment 2026: ಆಕರ್ಷಕ ವೇತನದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ

ಐಡಿಬಿಐ ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ತಜ್ಞ ಅಧಿಕಾರಿ (Specialist Officer) ಹುದ್ದೆಗಳ ಭರ್ತಿಗೆ ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಮೂಲಕ ಅವಕಾಶ ಕಲ್ಪಿಸಲಾಗಿದೆ. ಒಟ್ಟು 33 ತಜ್ಞ ಅಧಿಕಾರಿ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಐಟಿ & ಎಂಐಎಸ್ ವಿಭಾಗಕ್ಕೆ 19 ಹುದ್ದೆಗಳು, ಭದ್ರತಾ ಅಧಿಕಾರಿ (ಗ್ರೇಡ್-ಡಿ)…

Read More

Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದ ಮೂಲಕವೇ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೇವಲ 38 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಬರೆದಿರುವ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… 4000 ರನ್​: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ 4000 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ…

Read More

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ಬಾಗಲಕೋಟೆ, ಮಾರ್ಚ್​​ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ…

Read More

Tamil Nadu Elections: ತಮಿಳುನಾಡು ಚುನಾವಣೆ: ಟಿವಿಕೆ ಮತ್ತು ಡಿಎಂಕೆ ನಡುವೆ ನೇರ ಹಣಾಹಣಿ, ಎರಡು ಕ್ಷೇತ್ರಗಳಲ್ಲಿ ದಳಪತಿ ವಿಜಯ್ ಸ್ಪರ್ಧೆ

ಚೆನ್ನೈ, ಮಾರ್ಚ್​ 29: ತಮಿಳುನಾಡು ಚುನಾವಣೆ(Tamil Nadu Election)ಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜತೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಸಿ ಜೋಸೆಫ್ ವಿಜಯ್ ಅವರು ಚೆನ್ನೈನ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವದಿಂದ ಸ್ಪರ್ಧಿಸಲಿದ್ದಾರೆ, ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೂ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಟಿ ನಗರದಿಂದ ಎನ್…

Read More

‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಶನ್‌ನ ಬಹುನಿರೀಕ್ಷಿತ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಘೋಷಿಸಿದಂತೆ ಏಪ್ರಿಲ್ 10ರಂದು ತೆರೆಗೆ ಬರಬೇಕಿದ್ದ ಈ ಚಿತ್ರ, ಈಗ ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ ಎಂಬ ಮಾಹಿತಿ ಕೇಳಿಬಂದಿದೆ. ಅಂದಹಾಗೆ, ಈ ಬದಲಾವಣೆಗೆ ಕಾರಣ ಆಗಿರುವುದು ‘ಧುರಂಧರ್ 2’ (Dhurandhar 2) ಸಿನಿಮಾದ ಅಬ್ಬರ. ಈ ಸಿನಿಮಾದ ಆರ್ಭಟಕ್ಕೆ ಅಕ್ಷಯ್ ಕುಮಾರ್ ಅವರಂತಹ…

Read More

ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ಭೀಕರ ರಸ್ತೆ ಅಪಘಾತ: ಆರು ಬಂದಿ ಸಾವು

ಬೆಂಗಳೂರು, ಮಾರ್ಚ್​ 29: ರಾಜ್ಯದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accidents) ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ಟ್ಯಾಕ್ಟರ್ ಅಪಘಾತದಲ್ಲಿ ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಹಾಗೂ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಇಬ್ಬರು ಸೇರಿ ಒಟ್ಟೂ ಆರು ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಅವಘಡ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನಾಲ್ಕು ಮೈಲ್ ಕ್ಯಾಂಪ್ ಸಮೀಪ ಅಪಘಾತ ನಡೆದಿದೆ. ಜಮೀನಿಗೆ ತಿಪ್ಪೆಗೊಬ್ಬರ…

Read More

ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಯಾದಗಿರಿ, ಮಾರ್ಚ್​​ 29: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್​​​(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಒಟ್ಟಾಗಿ ಈಜಲು ಹೋಗಿದ್ದರು ಎನ್ನಲಾಗಿದೆ. ಈಜಲು ಹೋಗಿ 4 ಮಕ್ಕಳು ಜಲಸಮಾಧಿ ವಿಷಯ ತಿಳಿದು ಪೋಷಕರು ಮತ್ತು ಸಂಬಂಧಿಕರಿಗೆ ತೀವ್ರ ಆಘಾತವಾಗಿದೆ. ಮೃತ ಮಕ್ಕಳೆಲ್ಲರೂ ತೀರಾ ಚಿಕ್ಕ ವಯಸ್ಸಿನವರಾಗಿದ್ದು,…

Read More