All posts by nagaraj11081993

Somnath Temple: ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Somnath Swabhiman Parv PM Modi offers prayers at Somnath temple

ಸೋಮನಾಥ, ಜನವರಿ 10: ಸೋಮನಾಥ ಸ್ವಾಭಿಮಾನ ಪರ್ವದಲ್ಲಿ (Somnath Swabhiman Parv) ಭಾಗವಹಿಸಲು ಗುಜರಾತಿನ ಸೋಮನಾಥಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ರಾತ್ರಿ ನಡೆಯಲಿರುವ ಶೌರ್ಯ ಪರ್ವ ಯಾತ್ರೆಗೂ ಮುನ್ನ ಸೋಮನಾಥ ದೇವಾಲಯಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ಸೋಮನಾಥ ದೇವಾಲಯದಲ್ಲಿ 1000 ವರ್ಷಗಳ ನಂಬಿಕೆಯನ್ನು ಮತ್ತು ಭಾರತದ ಇತಿಹಾಸವನ್ನು ಪವಿತ್ರ ದೇವಾಲಯದಲ್ಲಿ ಆಚರಿಸಲಾಗುತ್ತಿದೆ. ನಾಳೆ (ಭಾನುವಾರ) ಸೋಮನಾಥ ಸ್ವಾಭಿಮಾನ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಸೋಮನಾಥಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.

ನಮ್ಮ ನಾಗರಿಕತೆಯ ಧೈರ್ಯದ ಹೆಮ್ಮೆಯ ಸಂಕೇತವಾದ ಸೋಮನಾಥಕ್ಕೆ ಆಗಮಿಸಿರುವುದಕ್ಕೆ ಧನ್ಯನೆನಿಸುತ್ತಿದೆ. “1026ರಲ್ಲಿ ಸೋಮನಾಥ ದೇವಾಲಯದ ಮೇಲೆ ನಡೆದ ಮೊದಲ ದಾಳಿಯ ಸಾವಿರ ವರ್ಷಗಳನ್ನು ಆಚರಿಸಲು ಇಡೀ ರಾಷ್ಟ್ರವು ಒಟ್ಟಾಗಿ ಸೇರಿದ #SomnathSwabhimanParv (ಸೋಮನಾಥ ಸ್ವಾಭಿಮಾನ ಪರ್ವ) ಆಚರಿಸುತ್ತಿದೆ. ಇಲ್ಲಿನ ಜನರಿಗೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ಕೃತಜ್ಞತೆಗಳು” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಯಾರು? – Kannada News | Muslim Man held for trying to offer Namaz at Ayodhya Ram Temple

ಅಯೋಧ್ಯೆ, ಜನವರಿ 10: ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. 55 ವರ್ಷದ ವ್ಯಕ್ತಿಯನ್ನು ಅಬ್ದುಲ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಅವರು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ. ಆ ವ್ಯಕ್ತಿ ಶುಕ್ರವಾರ ರಾಮ ಮಂದಿರಕ್ಕೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಆವರಣವನ್ನು ಪ್ರವೇಶಿಸಿದ ನಂತರ, ಸೀತಾ ರಸೋಯಿ ಬಳಿ ಕುಳಿತು ನಮಾಜ್ ಮಾಡಲು ಸಿದ್ಧರಾದಾಗ ಅದನ್ನು ಕಂಡ ಭದ್ರತಾ ಪಡೆಯ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಆ ವ್ಯಕ್ತಿಯನ್ನು ನಂತರ ವಿಚಾರಣೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕೆಲವು ಮೂಲಗಳ ಪ್ರಕಾರ, ಆ ವ್ಯಕ್ತಿಯನ್ನು ವಶಕ್ಕೆ ಪಡೆದಾಗ ಮುಸ್ಲಿಂ ಪರ ಘೋಷಣೆಗಳನ್ನು ಕೂಗಿದ್ದಾರೆ. ಆದರೆ, ಈ ಹೇಳಿಕೆಯನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ಈ ಘಟನೆಯ ನಂತರ ಗುಪ್ತಚರ ಸಂಸ್ಥೆಗಳು, ಸ್ಥಳೀಯ ಪೊಲೀಸರು ಮತ್ತು ಹಿರಿಯ ಆಡಳಿತ ಅಧಿಕಾರಿಗಳಿಗೆ ತಕ್ಷಣವೇ ಎಚ್ಚರಿಕೆ ನೀಡಲಾಯಿತು. ಅವರನ್ನು ವಶಕ್ಕೆ ಪಡೆದ ನಂತರ, ಪೊಲೀಸರು ಅವರ ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ. ಅವರ ಕೃತ್ಯದ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಸಂಪೂರ್ಣ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ವಿಜಯಪುರ: 56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!

ಆರಂಭಿಕ ತನಿಖೆಯಲ್ಲಿ, ಅವರು ರಾಮ ಮಂದಿರದ ಸುತ್ತ ಗೋಡಂಬಿ ಮತ್ತು ಒಣದ್ರಾಕ್ಷಿ ಮುಂತಾದ ವಸ್ತುಗಳನ್ನು ಮಾರುತ್ತಿರುವುದು ಕಂಡುಬಂದಿದೆ. ಆ ವ್ಯಕ್ತಿ, ತಾನು ಅಜ್ಮೀರ್‌ಗೆ ಹೋಗುತ್ತಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾರೆಂ ಎನ್ನಲಾಗಿದೆ. ಈ ಘಟನೆಯ ನಂತರ, ಭದ್ರತಾ ಅಧಿಕಾರಿಗಳು ಮತ್ತು ಗುಪ್ತಚರ ಸಂಸ್ಥೆಗಳು ದೇವಾಲಯದಲ್ಲಿನ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಪ್ರಾರಂಭಿಸಿವೆ. ಅಧಿಕಾರಿಗಳು ಇಲ್ಲಿಯವರೆಗೆ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ರಾಮ ಮಂದಿರದ ಸುತ್ತ ಆಲ್ಕೋಹಾಲ್, ಮಾಂಸಾಹಾರ ಸೇವನೆ ನಿಷೇಧ

ದೇವಾಲಯದ ಆವರಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದ ನಂತರ, ಗುಪ್ತಚರ ಸಂಸ್ಥೆಗಳಿಗೆ ಮಾಹಿತಿ ನೀಡಲಾಯಿತು. ಅವರು ಕಾಶ್ಮೀರದಲ್ಲಿ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಭದ್ರತಾ ಸಿಬ್ಬಂದಿ ಶೋಪಿಯಾನ್‌ನಲ್ಲಿರುವ ಅಬ್ದುಲ್ ಅವರ ಮನೆಗೆ ತೆರಳಿ ಅವರ ಕುಟುಂಬದೊಂದಿಗೆ ಮಾತನಾಡಿದರು. ಆ ವ್ಯಕ್ತಿಯ ಮಗ ಇಮ್ರಾನ್, ತನ್ನ ತಂದೆ ಅಯೋಧ್ಯೆಗೆ ಏಕೆ ಹೋದರು ಅಥವಾ ಅಲ್ಲಿ ಏನಾಯಿತು ಎಂಬುದರ ಕುರಿತು ತನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಅವರ ತಂದೆ ಸುಮಾರು 5 ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಅವರು ಮಾನಸಿಕ ಅಸ್ವಸ್ಥರಾಗಿದ್ದು, ಪ್ರಸ್ತುತ ಶ್ರೀನಗರದ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಸಿಎಲ್ 2026: ವೇಳಾಪಟ್ಟಿ ಬಿಡುಗಡೆ, ಸುದೀಪ್ ಆಡುತ್ತಾರಾ?

ಭಾರತದಲ್ಲಿ ಕ್ರಿಕೆಟ್ (Cricket) ಮತ್ತು ಸಿನಿಮಾ ಅತಿ ದೊಡ್ಡ ಎಂಟರ್ಟೈನರ್​​ಗಳು. ಅತಿ ದೊಡ್ಡ ಉದ್ಯಮಗಳೂ ಸಹ ಹೌದು. ಕ್ರಿಕೆಟ್ಟಿಗರು ಸಿನಿಮಾ ರಂಗದವರನ್ನು ಮದುವೆ ಆಗುವುದು, ಸಿನಿಮಾಗಳಲ್ಲಿ ನಟಿಸುವುದು ಸಾಮಾನ್ಯ. ಸಿನಿಮಾ ರಂಗದವರು ತಮ್ಮ ಸಿನಿಮಾ ಪ್ರಚಾರಕ್ಕೆ ಕ್ರಿಕೆಟ್ಟಿಗರನ್ನು ಅವಲಂಬಿಸುವುದು ಸಾಮಾನ್ಯ. ಸಿನಿಮಾದವರೇ ಕ್ರಿಕೆಟ್ಟಿಗರಾಗಿಬಿಟ್ಟರೆ? ಇದೇ ಆಲೋಚನೆಯಿಂದ ಹುಟ್ಟಿದ್ದೆ ಸಿಸಿಎಲ್. ಸೆಲೆಬ್ರಿಟಿ ಕ್ರಿಕೆಟ್ ಲೀಗ್, ಭಾರತದಲ್ಲಿ ನಡೆಯುವ ಪ್ರಮುಖ ಕ್ರಿಕೆಟ್ ಲೀಗ್​​ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, 11 ಸೀಸನ್ ಮುಗಿಸಿ ಇದೀಗ 12ನೇ ಸೀಸನ್​​ಗೆ ಕಾಲಿಟ್ಟಿದೆ.

ಭಾರತದ ಬೇರೆ ಬೇರೆ ಚಿತ್ರರಂಗದವರೆಲ್ಲ ಸೇರಿ ಕ್ರಿಕೆಟ್ ಆಡುವ ಜೊತೆಗೆ ಪ್ರೇಕ್ಷಕರಿಗೆ ಮನೊರಂಜನೆ ಕೊಡುವುದೇ ಸಿಸಿಎಲ್. ಕರ್ನಾಟಕದಿಂದ ‘ಕರ್ನಾಟಕ ಬುಲ್ಡೋಜರ್ಸ್’ ತಂಡ ಸಿಸಿಎಲ್​​ನಲ್ಲಿ ಭಾಗವಹಿಸುತ್ತಾ ಬಂದಿದ್ದು, ಈ ತಂಡವನ್ನು ಕಿಚ್ಚ ಸುದೀಪ್ ಮುನ್ನಡೆಸುತ್ತಿದ್ದಾರೆ. ನಮ್ಮ ತಂಡಕ್ಕೆ ಕ್ರೇಜ್ ಜಾಸ್ತಿನೇ ಇರುತ್ತೆ. ಕೆಲವು ಸೀಸನ್​​ಗಳನ್ನು ಗೆದ್ದು ಚಾಂಪಯನ್ ಸಹ ಆಗಿದ್ದಾರೆ. ಇದೀಗ ಸಿಸಿಎಲ್​​ನ 12ನೇ ಸೀಸನ್ ಪ್ರಾರಂಭ ಆಗುತ್ತಿದ್ದು, ಶೆಡ್ಯೂಲ್ ಬಿಡುಗಡೆ ಆಗಿದೆ.

ಈ ಬಾರಿ ಸಹ 8 ತಂಡಗಳು ಸಿಸಿಎಲ್ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಕರ್ನಾಟಕ ಬುಲ್ಡೋಜರ್ಸ್, ಚೆನ್ನೈ ಕಿಂಗ್ಸ್, ಕೇರಳ ಸ್ಟ್ರೈಕರ್ಸ್, ಮುಂಬೈ ಹೀರೋಸ್, ತೆಲುಗು ವಾರಿಯರ್ಸ್, ಭೋಜ್‌ಪುರಿ ಡಬ್ಬಂಗ್ಸ್, ಪಂಜಾಬ್ ಡಿ ಶೇರ್ ಮತ್ತು ಬೆಂಗಾಲ್ ಟೈಗರ್ಸ್ ತಂಡಗಳು ಕ್ರಿಕೆಟ್ ಆಡಿ ರಂಜಿಸಲಿದ್ದಾರೆ. ಕಳೆದ ವರ್ಷ ಪಂಜಾಬ್ ಡಿ ಶೇರ್ ತಂಡ ಚಾಂಪಿಯನ್ ಆಗಿತ್ತು. ಕರ್ನಾಟಕದಲ್ಲಿ ಸುದೀಪ್, ಡಾರ್ಲಿಂಗ್ ಕೃಷ್ಣ, ಗಣೇಶ್, ಜೆಕೆ, ಪೆಟ್ರೊಲ್ ಪ್ರಸನ್ನ ಇನ್ನೂ ಕೆಲವು ಅದ್ಭುತ ಆಟಗಾರರಿದ್ದಾರೆ.

ಇದನ್ನೂ ಓದಿ: ‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್

2026ರ ಸಿಸಿಎಲ್ 16 ಜನವರಿಯಿಂದ ಪ್ರಾರಂಭ ಆಗಲಿದ್ದು ಫೆಬ್ರವರಿ 1ಕ್ಕೆ ಮುಕ್ತಾಯ ಆಗಲಿದೆ. ಮೊದಲ ಪಂದ್ಯ ಕರ್ನಾಟಕ ಬಿಲ್ಡೋಜರ್ಸ್ ಮತ್ತು ಪಂಜಾಬ್ ನಡುವೆ ಇರಲಿದೆ. ವೈಜಾಗ್, ಮಥುರ ಮತ್ತು ಹೈದರಾಬಾದ್​​​ನಲ್ಲಿ ಪಂದ್ಯಗಳು ನಡೆಯಲಿವೆ. ಪ್ರತಿ ತಂಡಗಳಿಗೆ ಆರಂಭಿಕ ಹಂತದಲ್ಲಿ ತಲಾ ಮೂರು ಪಂದ್ಯಗಳು ಇರಲಿವೆ. ಫೆಬ್ರವರಿ 1ರಂದು ಫೈನಲ್ ನಡೆಯಲಿದೆ.

ಕರ್ನಾಟಕ ಬುಲ್ಡೋಜರ್ಸ್ ತಂಡ ಈಗಾಗಲೇ ತಯಾರಿ ಆರಂಭ ಮಾಡಿದೆ. ಆದರೆ ತಂಡದ ಪ್ರಮುಖ ಆಟಗಾರ ಆಗಿರುವ ಸುದೀಪ್ ಅವರು ಇನ್ನೂ ತಂಡವನ್ನು ಸೇರಿಕೊಂಡಂತಿಲ್ಲ. ಅಲ್ಲದೆ ಮುಂದಿನ ವಾರ ಬಿಗ್​​ಬಾಸ್ ಫಿನಾಲೆ ಬೇರೆ ಇದೆ. ಆದರೆ 16ರಿಂದಲೇ ಮ್ಯಾಚ್​​ಗಳು ಪ್ರಾರಂಭ ಆಗುತ್ತಿವೆ. ಸುದೀಪ್ ಅವರು ಭಾಗವಹಿಸುತ್ತಾರೊ ಇಲ್ಲವೋ ಎಂಬ ಅನುಮಾನ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್​​ಗೆ ಅಶೋಕ್ ಟಾಂಗ್ – Kannada News | R. Ashoka Sparks on KC Venugopal Over Malayalam Language Bill

ಬೆಂಗಳೂರು, ಜನವರಿ 10: ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ದರೆ ಕಾಗೆ ಆಗ್ತೀಯಾ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್​​ಗೆ ವಿಪಕ್ಷ ನಾಯಕ ಆರ್​.ಅಶೋಕ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಕೋಗಿಲು ಕೂಗಿದ ತಕ್ಷಣ ಇಲ್ಲಿ ಎಲ್ಲ ದಾಖಲೆಗಳು ಚೇಂಜ್ ಆದವು. ಆದರೆ, ಕೇರಳದಲ್ಲಿ ಕನ್ನಡ ಬಂದಾಗ ಆ ಕೋಗಿಲೆ ಕೂಗಲೇ ಇಲ್ಲ. ದೆಹಲಿಯಲ್ಲೇ ಸ್ಟ್ರಕ್ ಆಗೋಗಿದೆ, ಇವಾಗ ಕೂಗಪ್ಪ. ನೀನು ಕಾಗೆನೋ ಕೋಗಿಲೆನೋ ಅಂತಾ ಗೊತ್ತಾಗಬೇಕು. ಕನ್ನಡಿಗರಿಗೆ ದ್ರೋಹ ಎಸಗಿದರೆ ನೀನು ಕಾಗೇನೆ ಆಗ್ತೀಯಾ ಎಂದು ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓಡಲು ಇಲ್ಲಿ ಕ್ಲಿಕ್ ಮಾಡಿ.

Source link

ತನ್ನ 11 ತಿಂಗಳ ಮಗುವಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ! – Kannada News | After Fight With Husband Hyderabad Woman Poisons her 11 month old Son Then died by suicide

ಹೈದರಾಬಾದ್, ಜನವರಿ 10: ಮನೆಯಲ್ಲಿ ದೀರ್ಘ ಸಮಯದಿಂದ ನಡೆಯುತ್ತಿದ್ದ ಕೌಟುಂಬಿಕ ಜಗಳಗಳಿಂದ ಬೇಸತ್ತ ಮಹಿಳೆಯೊಬ್ಬರು ತನ್ನ 11 ತಿಂಗಳ ಮಗನಿಗೆ ವಿಷ ನೀಡಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲಂಗಾಣದ (Telangana) ರಾಜಧಾನಿ ಹೈದರಾಬಾದ್‌ನಲ್ಲಿ ಈ ದುರಂತ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದ ನಂತರ ಮಹಿಳೆಯೊಬ್ಬರು ತನ್ನ ಮಗನಿಗೆ ವಿಷಪ್ರಾಶನ ಮಾಡಿ ನಂತರ ತಾವೂ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನೂ ಪ್ರಾರಂಭಿಸಿದ್ದಾರೆ. ಮೃತ ಮಹಿಳೆಯ ಕುಟುಂಬಸ್ಥರು ಕೊಲೆ ಆರೋಪವನ್ನು ಹೊರಿಸಿದ್ದರೆ, ಆಕೆಯ ಪತಿ ಈ ಆರೋಪಗಳನ್ನು ತೀವ್ರವಾಗಿ ನಿರಾಕರಿಸಿದ್ದಾರೆ. ಹೈದರಾಬಾದ್‌ನ ಮೀರಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಹಸ್ತಿನಾಪುರಂ ಪ್ರದೇಶದಲ್ಲಿ ಯಶವಂತ್ ರೆಡ್ಡಿ ಅವರ ಪತ್ನಿ ಸುಷ್ಮಿತಾ (27) ತಮ್ಮ 11 ತಿಂಗಳ ಮಗ ನಂದನಿಗೆ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು!

ಸುಷ್ಮಿತಾ 2 ವರ್ಷದ ಹಿಂದೆ ಯಶವಂತ್ ಅವರನ್ನು ವಿವಾಹವಾಗಿದ್ದರು. ಅಂದಿನಿಂದ, ಯಶವಂತ್ ನಮ್ಮ ಮಗಳೊಂದಿಗೆ ಮಾತನಾಡಲು ನಮಗೆ ಅವಕಾಶ ನೀಡಲಿಲ್ಲ. ಅವರು ನಮ್ಮಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದರು. ನಾವು ನಮ್ಮ ಮಗಳೊಂದಿಗೆ ಫೋನ್‌ನಲ್ಲಿ ಮಾತನಾಡಲು ಸಹ ಸಾಧ್ಯವಾಗಲಿಲ್ಲ. ಅವರು ನಿರಂತರವಾಗಿ ಸುಷ್ಮಿತಾಗೆ ಬೈಯುತ್ತಿದ್ದರು. ಅವರ ನಡುವೆ ಕೌಟುಂಬಿಕ ಕಲಹವಿತ್ತು. ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾವು ನಂಬುವುದಿಲ್ಲ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಮರೆಮಾಡಲಾಗಿದೆ. ನಮ್ಮ ಅಳಿಯನೇ ಈ ಕೊಲೆ ಮಾಡಿರಬಹುದು ಎಂಬ ಅನುಮಾನವಿದೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಪೊಲೀಸರು ಕೂಡ ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!

ಮಗಳು ಮತ್ತು ಮೊಮ್ಮಗು ಸತ್ತಿರುವುದನ್ನು ನೋಡಿದ ಮೃತ ಮಹಿಳೆಯ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರ ಪ್ರಕಾರ, ಸುಷ್ಮಿತಾ ಬೆಡ್​ ರೂಂನಲ್ಲಿ ಮಗುವಿನ ಜೊತೆ ತಾವೂ ಮೃತಪಟ್ಟಿದ್ದಾರೆ. ರಾತ್ರಿ ಆಕೆಯ ಗಂಡ ಯಶವಂತ್ ರೆಡ್ಡಿ ಕೆಲಸದಿಂದ ಮನೆಗೆ ಮರಳಿದಾಗ ಬೆಡ್ ರೂಂ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ಬಾಗಿಲು ಒಡೆದು ನೋಡಿದಾಗ ಪತ್ನಿ ಮತ್ತು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಏನೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಭಾರತ- ಕಿವೀಸ್ ಏಕದಿನ ಸರಣಿ ಆರಂಭ; ಮೊದಲ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | IND vs NZ ODI Series: 1st Match Schedule, Where to Watch and Team News

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಏಕದಿನ ಸರಣಿ ನಾಳೆಯಿಂದ ಅಂದರೆ ಜನವರಿ 11 ರಿಂದ ಆರಂಭವಾಗುತ್ತಿದೆ. ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಒಟ್ಟು 3 ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಯೊಂದಿಗೆ ನಾಯಕ ಶುಭಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ಇಬ್ಬರೂ ತಂಡಕ್ಕೆ ಮರಳಿದ್ದಾರೆ. ಅನುಭವಿ ಜೋಡಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಈ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅದಕ್ಕೂ ಮುನ್ನ ಈ ಪಂದ್ಯ ಎಲ್ಲಿ ಎಷ್ಟು ಗಂಟೆಗೆ ಆರಂಭವಾಗುತ್ತದೆ ಮತ್ತು ಈ ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಜನವರಿ 11 ರ ಭಾನುವಾರದಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ವಡೋದರಾದ ಕೋಟಂಬಿಯ ಬಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ನೋಡಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಭಾರತ ಮತ್ತು ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯವನ್ನು ಮೊಬೈಲ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಉಭಯ ತಂಡಗಳು

ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.

ನ್ಯೂಜಿಲೆಂಡ್ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಜ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟ್ರಸ್ಟ್ ಮಾಡುವ ನೆಪದಲ್ಲಿ ಮಠದ ಆಸ್ತಿ ಲೂಟಿ? ಪೀಠಾಧಿಪತಿ ಹುಟ್ಟುಹಬ್ಬದಂದೇ ಗಲಾಟೆ, ಹೈಡ್ರಾಮಾ – Kannada News | Chikkaballapur Matha Property Row: Swamiji Accused of Land Grab

ಚಿಕ್ಕಬಳ್ಳಾಪುರ, ಜನವರಿ 10: ಪ್ರತಿಷ್ಠಿತ ಮಠದ ಸಾದ್ವಿ ವೃದ್ಧೆಯ ಸೇವೆಗೆಂದು ಬಂದ ವ್ಯಕ್ತಿಯೋರ್ವ ಮಠ ಮುನ್ನಡೆಸಿಕೊಂಡು ಹೋಗುತ್ತೇನೆಂದು ಮಠದ ಪೀಠಾಧಿಪತಿಯಾಗಿದ್ದ. ಕೊನೆಗೆ ಮಠದ ಅಭಿವೃದ್ಧಿಗೆ ಟ್ರಸ್ಟ್ ಒಂದನ್ನು ಮಾಡುತ್ತೇನೆ ಅಂತೇಳಿ ಟ್ರಸ್ಟ್ ನೋಂದಣಿ ನೆಪದಲ್ಲಿ ಮಠಕ್ಕೆ ಸೇರಿದ ಆಸ್ತಿಗಳನ್ನು (Property) ತನ್ನ ಹೆಸರಿಗೆ ಮಾಡಿಕೊಂಡಿದ್ದಾನೆಂದು ಆರೋಪಿಸಿ ಸಾದ್ವಿಯ ಸಂಬಂಧಿಕರು ಇಂದು ಮಠಕ್ಕೆ ನುಗ್ಗಿ, ಸ್ವಾಮೀಜಿಯನ್ನು ಹಿಡಿದು ಎಳೆದಾಡಿ ತಳ್ಳಾಡಿ, ನೂಕುನುಗ್ಗಲಾಗಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರದ ಬಳಿ ಇರುವ ಓಂಕಾರ ಜ್ಯೋತಿ ಮಠ. ಬೆಂಗಳೂರಿನ ಬಿಬಿಎಂಪಿಯ ಕ್ಲಾಸ್-1 ಗುತ್ತಿಗೆದಾರ ಮರಿಯಪ್ಪಸ್ವಾಮಿ ಅವರ ಪತ್ನಿ ಜಯಮ್ಮ ಚಿಕ್ಕಬಳ್ಳಾಪುರದ ಬಳಿ ಜಮೀನು ಖರೀದಿಸಿ ಆಶ್ರಮ ಹಾಗೂ ಮಠ ನಡೆಸುತ್ತಿದ್ದರು. ಮರಿಯಪ್ಪಸ್ವಾಮಿ ನಿಧನದ ನಂತರ ಅವರ ಪತ್ನಿ ಜಯಮ್ಮ ಸಾದ್ವಿಯಾಗಿ ಮಠ, ಆಸ್ತಿಯನ್ನು ಮುನ್ನಡೆಸುತ್ತಿದ್ದರು. ಅವರ ಸೇವೆಗೆಂದು ಬಂದ ಉಮೇಶ್ ವೆಂಕಟರಮಣಪ್ಪ ಆಚಾರ್, ಮಠದಲ್ಲಿ ದೀಕ್ಷೆ ಪಡೆದು ಪಾರ್ಥಸಾರಥಿ ಸ್ವಾಮೀಜಿಯಾಗಿ ಪೀಠಾಧಿಪತಿಯಾಗಿದ್ದ. ಮಠಕ್ಕೆ ಸಂಬಂಧಿಸಿದ ಟ್ರಸ್ಟ್ ನೋಂದಣಿ ಮಾಡಿಸುವ ನೆಪದಲ್ಲಿ ಮಠ ಹಾಗೂ ಮಠಕ್ಕೆ ಸೇರಿದ ಕೋಟ್ಯಂತರ ರೂ ಮೌಲ್ಯದ ಜಮೀನನ್ನು ತನ್ನ ಹೆಸರಿಗೆ ದಾನ ಪತ್ರ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.

ಸ್ವಾಮೀಜಿಯ ಹುಟ್ಟುಹಬ್ಬದಂದೇ ಗಲಾಟೆ

ಇನ್ನು ಓಂಕಾರ ಜ್ಯೋತಿ ಆಶ್ರಮ ಹಾಗೂ ಮಠದ ಸಾದ್ವಿ ಜಯಮ್ಮ ಹೆಸರಿನಲ್ಲಿ ಒಂದು ಎಕರೆ ಹತ್ತು ಗುಂಟೆ ಜಮೀನು, ಆಶ್ರಮ ಕಟ್ಟಡವಿದೆ. ಇದೆಲ್ಲವನ್ನು ಉಮೇಶ್ ಅಲಿಯಾಸ್ ಪಾರ್ಥಸಾರಥಿ ಜಯಮ್ಮ ಅವರಿಗೆ ಅರಿವಿಲ್ಲದ ಹಾಗೆ ತನ್ನ ಹೆಸರಿಗೆ ಗಿಫ್ಟ್ ಡೀಡ್ ಮಾಡಿಕೊಂಡಿದ್ದಾನೆಂದು ಜಯಮ್ಮ ಸಂಬಂಧಿಗಳು ಇಂದು ಮಠಕ್ಕೆ ನುಗ್ಗಿ ಪಾರ್ಥ ಸ್ವಾಮೀಜಿಯ ಹುಟ್ಟುಹಬ್ಬದ ದಿನವೇ ಕೆಲವು ಮಠಾಧೀಶರ ಸಮ್ಮುಖದಲ್ಲೇ ಸ್ವಾಮೀಜಿಯನ್ನು ಹಿಡಿದು ಎಳೆದಾಡಿ, ನೂಕುನುಗ್ಗಲು ಮಾಡಿದರು. ಇದರಿಂದ ಮಠದಲ್ಲಿ ಕೆಲಕಾಲ ಉದ್ವಿಘ್ನ ಪರಿಸ್ಥಿತಿ ಉಂಟಾಯಿತು.

ನಾನು ಯಾರಿಗೂ ಮೋಸ ಮಾಡಿಲ್ಲ: ಪಾರ್ಥಸಾರಥಿ ಸ್ವಾಮೀಜಿ

ಸಾದ್ವಿ ಜಯಮ್ಮ ಅವರಿಂದ ದೀಕ್ಷೆ ಸ್ವೀಕರಿಸಿದ್ದ ಉಮೇಶ್ ಅಲಿಯಾಸ್ ಪಾರ್ಥಸಾರಥಿ ಸ್ವಾಮೀಜಿ, ತಾನು ಯಾರಿಗೂ ಮೋಸ ಮಾಡಿಲ್ಲ, ಅನ್ಯಾಯ ಮಾಡಿಲ್ಲ. ಸ್ವತಃ ಜಯಮ್ಮ ಸೂಚನೆ ಮೇರೆಗೆ ಟ್ರಸ್ಟ್ ನೋಂದಣಿ ಹಾಗೂ ಟ್ರಸ್ಟ್​​ಗೆ ಆಸ್ತಿಯನ್ನು ಗಿಫ್ಟ್ ಡೀಡ್ ಮಾಡಿಕೊಂಡಿದ್ದೇನೆ. ಸ್ವತಃ ಸಾದ್ವಿ ಜಯಮ್ಮನವರೇ ಬಂದು ಮಾಡಿಕೊಟ್ಟಿದ್ದಾರೆಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ?

ಒಟ್ಟಿನಲ್ಲಿ ಸಾದ್ವಿ ಸೇವೆಗೆಂದು ಬಂದ ಸಾಮಾನ್ಯ ವ್ಯಕ್ತಿಯೋರ್ವ ಮಠದ ಪೀಠಾಧಿಪತಿಯಾಗಿ ಕೊನೆಗೆ ಟ್ರಸ್ಟ್​​ನ ನೋಂದಣಿ ನೆಪದಲ್ಲಿ ಮಠದ ಸಾದ್ವಿಯ ಆಸ್ತಿಯನ್ನು ಟ್ರಸ್ಟ್​ಗೆ ಮಾಡಿಸಿಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಸಿದ್ದರಾಮಯ್ಯ – Kannada News | Karnataka Political Rivalry Intensifies: DK Shivakumar and HD Kumaraswamy Exchange Barbs and Debate Challenges

ಬೆಂಗಳೂರು, ಜ.10: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಬಳ್ಳಾರಿ ಗಲಾಟೆ ವಿಚಾರದಿಂದ ಆರಂಭವಾದ ಈ ಸಮರ ಇದೀಗ ಅನುಭವದ ಕದನದ ಹಂತಕ್ಕೆ ತಲುಪಿದೆ. ಡಿಕೆ ಶಿವಕುಮಾರ್ ಅವರ ಅಧಿಕಾರದ ವ್ಯಾಪ್ತಿಯ ಬಗ್ಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಆಡಳಿತದಲ್ಲಿ ತಾನು ಕುಮಾರಸ್ವಾಮಿಗಿಂತ ಹೆಚ್ಚು ಅನುಭವಿ ಎಂದು ಹೇಳಿಕೊಂಡಿದ್ದಾರೆ ಮತ್ತು ಕುಮಾರಸ್ವಾಮಿಯವರಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಅಲ್ಲದೆ, ವಿಧಾನಸಭೆಯಲ್ಲಿ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ. ಈ ಸವಾಲನ್ನು ಕುಮಾರಸ್ವಾಮಿ ಸ್ವೀಕರಿಸಿದ್ದಾರೆ. ಈ ಮಧ್ಯೆ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೀಸ್ ಬೇಸ್ಡ್ ಸಿಎಂ ಎಂದು ಕರೆದಿದ್ದು, ಇದಕ್ಕೆ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ. ಸಿಡಿ ಫ್ಯಾಕ್ಟರಿ ಕುರಿತಾದ ಆರೋಪ-ಪ್ರತ್ಯಾರೋಪಗಳು ಸಹ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತುಪ್ಪ ಸುರಿದಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ರಾಜಾ ಸಾಬ್’ ಮೂಲಕ ಅಪರೂಪದ ದಾಖಲೆ ಬರೆದ ಪ್ರಭಾಸ್ – Kannada News | Prabhas’s six movies collects 100 crore rs on first of its release

ಪ್ಯಾನ್ ಇಂಡಿಯಾ (Pan India) ಸೂಪರ್ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು ಮೊದಲ ದಿನವೇ ವಿಶ್ವಾದ್ಯಂತ ₹100 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ‘ದಿ ರಾಜಾ ಸಾಬ್’ ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದರೂ ಸಹ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ ಸಿನಿಮಾ. ‘ರಾಜಾ ಸಾಬ್’ ಸಿನಿಮಾದ ಮೂಲಕ ನಟ ಪ್ರಭಾಸ್ ಒಂದು ಅಪರೂಪದ ದಾಖಲೆಯನ್ನು ಬರೆದಿದ್ದಾರೆ. ತಾವು ಭಾರತದ ನಂಬರ್ 1 ಪ್ಯಾನ್ ಇಂಡಿಯಾ ಸ್ಟಾರ್ ಎಂಬುದನ್ನು ಖಾತ್ರಿ ಪಡಿಸಿದ್ದಾರೆ.

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಮೊದಲ ದಿನ 100 ಕೋಟಿ ಗಳಿಕೆ ಮಾಡುವ ಮೂಲಕ ಪ್ರಭಾಸ್ ನಟನೆಯ ಸತತ ಆರು ಸಿನಿಮಾಗಳು ಮೊದಲ ದಿನವೇ 100 ಕೋಟಿ ಗಳಿಕೆ ಮಾಡಿದಂತಾಗಿದೆ. ಈ ಅಪರೂಪದ ದಾಖಲೆ ಪ್ರಭಾಸ್ ಹೊರತಾಗಿ ಭಾರತದ ಇನ್ಯಾವ ನಟರ ಬಳಿಯೂ ಇಲ್ಲ ಎಂಬುದು ವಿಶೇಷ. ಪ್ರಭಾಸ್ ನಟನೆಯ ‘ಬಾಹುಬಲಿ 2’ ಮೂಲಕ ಶುರುವಾದ ಈ 100 ಕೋಟಿ ಕಲೆಕ್ಷನ್ ಈದ ‘ದಿ ರಾಜಾ ಸಾಬ್’ ವರೆಗೆ ಬಂದಿದೆ. ಸಿನಿಮಾ ಹೇಗೇ ಇರಲಿ, ಪ್ರಭಾಸ್ ಸಿನಿಮಾ ಮೊದಲ ದಿನ 100 ಕೋಟಿ ಗಳಿಸುವುದು ಖಾತ್ರಿ ಎಂಬಂತಾಗಿದೆ.

ಪ್ರಭಾಸ್ ನಟನೆಯ ‘ಬಾಹುಬಲಿ 2’ ‘ಕಲ್ಕಿ 2898 AD’, ‘ಸಲಾರ್’, ‘ಸಾಹೋ’ ಮತ್ತು ‘ಆದಿಪುರುಷ್’ ಚಿತ್ರಗಳು ಮೊದಲ ದಿನವೇ 100 ಕೋಟಿ ಕ್ಲಬ್ ಸೇರಿ ಇತಿಹಾಸ ನಿರ್ಮಿಸಿದ್ದವು. ಈಗ ‘ದಿ ರಾಜಾ ಸಾಬ್’ ಈ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಪ್ರಭಾಸ್ ಅವರ ಜನಪ್ರಿಯತೆ ಮತ್ತು ಮಾರುಕಟ್ಟೆ ಮೌಲ್ಯ ಎಷ್ಟು ಬೃಹತ್ ಆದುದು ಎಂಬುದು ಇಡೀ ಭಾರತೀಯ ಚಿತ್ರರಂಗಕ್ಕೆ ಮತ್ತೊಮ್ಮೆ ತಿಳಿದಂತಾಗಿದೆ.

ಇದನ್ನೂ ಓದಿ:‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ

ಅಸಲಿಗೆ ‘ಸಾಹೊ’, ‘ಆದಿಪುರುಷ್’ ಸಿನಿಮಾಗಳು ನಿರೀಕ್ಷಿತ ಮಟ್ಟಿಗೆ ಯಶಸ್ವಿ ಆಗಲಿಲ್ಲ. ಆದರೂ ಸಹ ಆ ಸಿನಿಮಾಗಳು ಸಹ ಪ್ರಭಾಸ್ ಇದ್ದರು ಎಂಬ ಏಕೈಕ ಕಾರಣಕ್ಕೆ ಭಾರಿ ಕಲೆಕ್ಷನ್ ಅನ್ನೇ ಮಾಡಿದ್ದವು. ಈಗ ‘ದಿ ರಾಜಾ ಸಾಬ್’ ಸಿನಿಮಾದ ಕತೆಯೂ ಹಾಗೆಯೇ ಆಗಿದೆ. ಕೇವಲ ಪ್ರಭಾಸ್ ಇದ್ದಾರೆಂಬ ಕಾರಣಕ್ಕೆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮುನ್ನುಗ್ಗಿಕೊಂಡು ಸಾಗುತ್ತಿದೆ.

‘ದಿ ರಾಜಾ ಸಾಬ್’ನಲ್ಲಿ ಪ್ರಭಾಸ್ ಹಾರರ್-ಕಾಮಿಡಿ ಸಿನಿಮಾಕ್ಕೆ ಕೈ ಹಾಕಿದ್ದರು. ಬಹಳ ವರ್ಷಗಳ ಬಳಿಕ ಹಾಸ್ಯಕ್ಕೆ ಪ್ರಾಧಾನ್ಯತೆ ಇರುವ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದರು. ಆದರೆ ಸಿನಿಮಾದ ಟ್ರೈಲರ್ ಬಿಡುಗಡೆ ಬಳಿಕ ಸಿನಿಮಾದ ವಿಎಫ್​​ಎಕ್ಸ್ ಸಾಧಾರಣವಾಗಿರುವುದು, ಕ್ಲೀಷೆ ಹಾರರ್​ ಸಿನಿಮಾದ ಟ್ರಿಕ್ಸ್​​ಗಳು ಇರುವ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಈಗಲೂ ಸಹ ‘ದಿ ರಾಜಾ ಸಾಬ್’ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಒಳ್ಳೆಯ ಅಭಿಪ್ರಾಯಗಳಿಲ್ಲ. ಆದರೂ ಸಹ ಪ್ರಭಾಸ್ ಇದ್ದಾರೆಂಬ ಕಾರಣಕ್ಕೆ ಜನ ಸಿನಿಮಾ ವೀಕ್ಷಿಸುತ್ತಿದ್ದು, ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಆಗುತ್ತಲೇ ಇದೆ.

ಪ್ರಭಾಸ್​ ಲೈನಪ್​​ನಲ್ಲಿ ಇದ್ದ ತುಸು ಟೊಳ್ಳು ಸಿನಿಮಾ ಎಂದರೆ ‘ರಾಜಾ ಸಾಬ್’ ಆಗಿತ್ತು. ಆದರೆ ಅದು ಸಹ ಮೊದಲ ದಿನ 100 ಕೋಟಿ ಗಳಿಕೆ ಮಾಡಿದ ಬಳಿಕ ಪ್ರಭಾಸ್ ನಟಿಸಲಿರುವ ಮುಂದಿನ ನಾಲ್ಕು ಸಿನಿಮಾಗಳು ಪಕ್ಕಾ ಬ್ಲಾಕ್ ಬಸ್ಟರ್ ಎಂದು ಈಗಲೇ ಪ್ರಭಾಸ್ ಅಭಿಮಾನಿಗಳು ಲೆಕ್ಕ ಹಾಕಿಬಿಟ್ಟಿದ್ದಾರೆ. ಮುಂಬರುವ ಎರಡು ವರ್ಷಗಳಲ್ಲಿ ಪ್ರಭಾಸ್ ಅವರ ‘ಸ್ಪಿರಿಟ್’, ‘ಕಲ್ಕಿ 2’, ‘ಸಲಾರ್ 2’ ಮತ್ತು ‘ಫೌಜಿ’ ಚಿತ್ರಗಳು ಸಾಲಾಗಿ ಬರಲಿದ್ದು, ಈ ನಾಲ್ಕೂ ಸಿನಿಮಾಗಳು ಪಕ್ಕಾ ಬ್ಲಾಕ್ ಬಸ್ಟರ್ ಆಗುವ ಸಿನಿಮಾಗಳು ಎನ್ನಲಾಗುತ್ತಿವೆ. ಮೊದಲ ದಿನವೇ 100 ಕೋಟಿ ಗಳಿಸುವ ಹತ್ತು ಸಿನಿಮಾಗಳನ್ನು ಹೊಂದಿದ ಏಕೈಕ ಭಾರತೀಯ ನಟ ಎಂಬ ಕೀರ್ತಿಗೆ ಅವರು ಪಾತ್ರರಾಗಲಿರುವುದು ಖಾಯಂ ಎನ್ನುತ್ತಿದ್ದಾರೆ ಅಭಿಮಾನಿಗಳು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಮತ್ತೋರ್ವ ಹಿಂದೂಗೆ ಥಳಿಸಿ, ವಿಷ ಹಾಕಿ ಹತ್ಯೆ – Kannada News | Bangladesh Violence Another Hindu beaten and poisoned to death

ಢಾಕಾ, ಜನವರಿ 10: ನೆರೆಯ ದೇಶ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಮುಂದುವರೆದಿದೆ. ಬಾಂಗ್ಲಾದೇಶದಲ್ಲಿ (Bangladesh) ಮತ್ತೊಬ್ಬ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಹತ್ಯೆಯಾದ ಯುವಕನನ್ನು ಜಾಯ್ ಮಹಾಪಾತ್ರೋ ಎಂದು ಗುರುತಿಸಲಾಗಿದೆ. ಆತ ಸುನಮ್‌ಗಂಜ್ ಜಿಲ್ಲೆಯ ಭಂಗದೋಹೋರ್ ಗ್ರಾಮದ ನಿವಾಸಿಯಾಗಿದ್ದ. ಈ ಘಟನೆ ಗುರುವಾರ ನಡೆದಿದ್ದು, ಆತನನ್ನು ಸ್ಥಳೀಯ ಅಂಗಡಿಯೊಂದಕ್ಕೆ ಕರೆಸಲಾಯಿತು. ಅಲ್ಲಿ ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದರು.

ಬಳಿಕ ಆತನನ್ನು ಸಿಲ್ಹೆಟ್ ಎಂಎಜಿ ಉಸ್ಮಾನಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಲಾಯಿತು. ಜಾಯ್‌ಗೆ ಅಮಿರುಲ್ ಇಸ್ಲಾಂ ಎಂಬ ವ್ಯಕ್ತಿ ವಿಷಪ್ರಾಶನ ಮಾಡಿಸಿದ್ದಾನೆ ಎಂದು ಆ ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿ ಹಾಕಿ, ಕೂದಲು ಕತ್ತರಿಸಿದ ದುರುಳರು

ಫೆಬ್ರವರಿ 12ರಂದು ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದ ತೀವ್ರಗಾಮಿ ಭಾರತ ವಿರೋಧಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಸಾಮಾನ್ಯವಾಗಿದೆ. ಮೊದಲನೆಯದಾಗಿ, ಮೈಮೆನ್ಸಿಂಗ್ ಜಿಲ್ಲೆಯಲ್ಲಿ 27 ವರ್ಷದ ಯುವಕ ದೀಪು ಚಂದ್ರ ದಾಸ್ ಅವರನ್ನು ಥಳಿಸಿ ಕೊಲ್ಲಲಾಯಿತು. ಡಿಸೆಂಬರ್ 24ರಂದು ರಾಜ್ಬರಿಯ ಅಮೃತ್ ಮೊಂಡಲ್ ಅವರನ್ನು ಗುಂಪೊಂದು ಹೊಡೆದು ಕೊಂದಿತು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು

ನಂತರ, ಮೈಮೆನ್ಸಿಂಗ್‌ನಲ್ಲಿ 42 ವರ್ಷದ ಬಜೇಂದ್ರ ಬಿಸ್ವಾಸ್ ಎಂಬ ವ್ಯಕ್ತಿಯನ್ನು ಅವರ ಸಹೋದ್ಯೋಗಿ ಗುಂಡಿಕ್ಕಿ ಕೊಂದರು. ಬಳಿಕ ಶರಿಯತ್‌ಪುರ ಜಿಲ್ಲೆಯಲ್ಲಿ 50 ವರ್ಷದ ಖೋಕೋನ್ ದಾಸ್ ಅವರಿಗೆ ಬೆಂಕಿ ಹಚ್ಚಲಾಯಿತು. ಜನವರಿ 5ರಂದು ಜೆಸ್ಸೋರ್ ಜಿಲ್ಲೆಯಲ್ಲಿ ಪತ್ರಕರ್ತ ರಾಣಾ ಪ್ರತಾಪ್ ಬೈರಾಗಿ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅದಾದ ಒಂದು ದಿನದ ನಂತರ, ನರಸಿಂಗ್ಡಿ ಜಿಲ್ಲೆಯಲ್ಲಿ ಶರತ್ ಮಣಿ ಚಕ್ರವರ್ತಿ ಎಂಬ 40 ವರ್ಷದ ವ್ಯಕ್ತಿಯನ್ನು ಕೊಲ್ಲಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link