ಶಿಕ್ಷಣ ಸಚಿವರಿಲ್ಲದೆ ಇಲಾಖೆಯ ಚಟುವಟಿಕೆಗಳಿಗೆ ಅಡ್ಡಿ: ಸರ್ಕಾರಿ ಶಾಲೆಯ 30 ಸಾವಿರ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – Kannada News | Karnataka Academic Year Begins in Chaos: Delayed Cabinet Expansion Leaves Education Department Ministerless for Two Weeks
ಸಾಂದರ್ಭಿಕ ಚಿತ್ರImage Credit source: Karnataka Education Department ಬೆಂಗಳೂರು, ಜೂನ್ 16: ರಾಜ್ಯದಲ್ಲಿ 2026ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ವಾರಗಳು ಕಳೆದಿದ್ದರೂ ಇಲಾಖೆಗೆ ಶಿಕ್ಷಣ ಸಚಿವರೇ (Education Minister) ಇಲ್ಲದಿರುವುದು ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಸಚಿವರ ಅನುಪಸ್ಥಿತಿಯಿಂದಾಗಿ ಹೊಸ ಶಿಕ್ಷಣ ನೀತಿಗಳ ಅನುಷ್ಠಾನ, ಶಿಕ್ಷಕರ ನೇಮಕಾತಿ ಮತ್ತು ಶಾಲಾ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಮುಖ ನೀತಿ ನಿರ್ಧಾರಗಳನ್ನು ಕೈಗೊಳ್ಳಲು ಅಧಿಕಾರಿಗಳು ತಡಕಾಡುತ್ತಿದ್ದಾರೆ. ಇದರ ನೇರ ಪರಿಣಾಮವಾಗಿ…