ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ! – Kannada News | Good News for Bengaluru B Khata Holders: A Khata Approval Likely for Lakhs of Apartments
ಬೆಂಗಳೂರು, ಜನವರಿ 10: ಬೆಂಗಳೂರು (Bangalore) ನಗರದ ಬಡಾವಣೆಗಳಲ್ಲಿನ ಬಿ-ಖಾತಾ ನಿವೇಶನ, ಕಟ್ಟಡಗಳಿಗೆ ಮತ್ತು ನಗರ ಪಾಲಿಕೆಗಳ ವ್ಯಾಪ್ತಿಯ ಅಧಿಕೃತ ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಎ-ಖಾತಾ ಸೌಲಭ್ಯ ಸಿಗಲಿದೆ. ಕಾಯ್ದೆ 1961 ಅನ್ನು ಉಲ್ಲಂಘಿಸಿ ನಿರ್ಮಿಸಿರುವ ಅಧಿಕೃತ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಮಾತ್ರ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗುತ್ತದೆ. ಜೊತೆಗೆ ಸುಮಾರು 10 ಲಕ್ಷ ಬಿ ಖಾತಾ ಆಸ್ತಿಗಳಿವೆ. ಜಿಬಿಎ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ನಿಯಮಗಳನ್ನೇ ಉಳಿದ ಕಡೆಗಳಿಗೂ ಅನ್ವಯಿಸಲಾಗುವುದು ಎನ್ನಲಾಗಿದೆ. ಒತ್ತುವರಿ ಮತ್ತು ಉಲ್ಲಂಘನೆಯ ಪ್ರಮಾಣಕ್ಕೆ ಅನುಗುಣವಾಗಿ…