ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ – Kannada News | Vijayapura: CM Siddaramaiah Throws Away Sweet Offered by DK Shivakumar, Video Goes Viral
ವಿಜಯಪುರ, ಜನವರಿ 10: ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು. ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್…