ಕುಂದಾಪುರದಲ್ಲಿ 5 ಕೋತಿಗಳ ಸಾವು: ಮಲೆನಾಡಲ್ಲಿ ಮಂಗನ ಕಾಯಿಲೆ ಆತಂಕ – Kannada News | Kundapur: Five Monkeys Die, Raising Fears of Monkey Disease in Malnad Region
ಉಡುಪಿ, ಜನವರಿ 08: ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (Monkeypox virus) ಆತಂಕ ಹೆಚ್ಚುತ್ತಿರುವ ನಡುವೆ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಭಾಗದಲ್ಲಿ ಮಂಗಗಳ ಮೃತ ದೇಹ ಪತ್ತೆಯಾಗಿದೆ. ಇದರಿಂದ ಕಳೆದ ಒಂದು ವಾರದಲ್ಲಿ ಆ ಪ್ರದೇಶದಲ್ಲಿ ಸಾವನ್ನಪ್ಪಿದ ಮಂಗಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿ ಸ್ಯಾಂಪಲ್ ಕಲೆ ಹಾಕಿದೆ. ಆದರೆ ಇದುವರೆಗೂ ಮಂಗಗಳ ಸಾವಿಗೆ ನಿಖರ ಕಾರಣ ಪತ್ತೆಯಾಗದ ಹಿನ್ನಲೆ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ರಾಜ್ಯದಲ್ಲಿ…