ಬಾಬರ್ ಆಝಂ ವಿಶ್ವ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್
ಭಾರತ ಏಕದಿನ ತಂಡದಿಂದ ಹೊರಬಿದ್ದಿರುವ ಪ್ರತಿಭಾವಂತ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ನಾಯಕನಾಗಿ ಮಹಾರಾಷ್ಟ್ರ ತಂಡವನ್ನು ಮುನ್ನಡೆಸುತ್ತಿರುವ ರುತುರಾಜ್, ಗೋವಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದರು. ಈ ಪಂದ್ಯದಲ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದ್ದು ಮಾತ್ರವಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ರುತುರಾಜ್ ತಂಡವನ್ನು ಸಂಕಷ್ಟದಿಂದ ಹೊರತಂದರು. ಏಕೆಂದರೆ ಅರ್ಧದಷ್ಟು ತಂಡ ಕೇವಲ 52 ರನ್‌ಗಳಿಗೆ ಪೆವಿಲಿಯನ್ ಸೇರಿಕೊಂಡಿದ್ದ ಸಮಯದಲ್ಲಿ ಕಣಕ್ಕಿಳಿದ ರುತುರಾಜ್ ಶತಕ ಬಾರಿಸುವುದರೊಂದಿಗೆ ಮಹಾರಾಷ್ಟ್ರವನ್ನು…