ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain
ಬೆಂಗಳೂರು, ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ…