All posts by nagaraj11081993

ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ: ಬೆಂಗಳೂರಿನ ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ – Kannada News | Bengaluru Anekal College Row: Protests Erupt After Hostel Warden Threatens Students for Speaking Kannada

ಬೆಂಗಳೂರು, ಜನವರಿ 5: ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿದವು. ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಇಂದು ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿದೆ.

ಕನ್ನಡ ಮಾತನಾಡಿದ ವಾರ್ಡನ್ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ‘ಕರ್ನಾಟಕದ ಖಾಸಗಿ ಕಾಲೇಜುಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಿಲ್ಲಬೇಕು. ಉಪನ್ಯಾಸಕರ ಮೇಲಿನ ದಬ್ಬಾಳಿಕೆ ನಿಲ್ಲಬೇಕು’ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್​ನಲ್ಲಿ ಉಚಿತ ನ್ಯಾಯಸೇತು ಚಾಟ್​ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp

ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್​ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್​ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ.

ಯಾವ ರೀತಿಯ ಕಾನೂನು ಸೇವೆಗಳು ಲಭ್ಯ?

ವಾಟ್ಸಾಪ್​ನಲ್ಲಿ ಲಭ್ಯ ಇರುವ ನ್ಯಾಯಸೇತು ಸೇವೆಯಲ್ಲಿ ಕಾನೂನು ಸಲಹೆ, ನೆರವು ಮತ್ತು ಸಮಾಲೋಚನೆಗಳನ್ನು ಪಡೆಯಬಹುದು. ಯಾವುದಾದರೂ ವ್ಯಾಜ್ಯ ಇದ್ದಲ್ಲಿ ಅದಕ್ಕೆ ಸಂಬಂಧಿಸಿದ ಕಾನೂನುಗಳು ಏನಿವೆ ಎಂಬ ಮಾಹಿತಿ ತಿಳಿಯಬಹುದು. ಅಥವಾ, ಆ ವ್ಯಾಜ್ಯದಲ್ಲಿ ನಿಮಗೆ ಯಾವ್ಯಾವ ಕಾನೂನು ಅವಕಾಶಗಳು, ಮಾರ್ಗಗಳು ಇವೆ ಎನ್ನುವ ಸಮಾಲೋಚನೆಗಳನ್ನು ಪಡೆಯಬಹುದು.

ಇದನ್ನೂ ಓದಿ: ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ

ವಾಟ್ಸಾಪ್​ನಲ್ಲಿ ನ್ಯಾಯಸೇತು ಸ್ಕೀಮ್​ಗೆ ಹೇಗೆ ನೊಂದಾಯಿಸುವುದು?

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಟ್ವೀಟ್ ಮಾಡಿದ್ದು, 7217711814 ವಾಟ್ಸಾಪ್ ನಂಬರ್ ಕೊಟ್ಟಿದೆ. ಯಾರು ಬೇಕಾದರೂ ಈ ನಂಬರ್ ಅನ್ನು ಸೇವ್ ಮಾಡಿಕೊಳ್ಳಬಹುದು. ಅಥವಾ ಆ ನಂಬರ್​ಗೆ ಹೈ ಮೆಸೇಜ್ ಕಳುಹಿಸಿದರೂ ಸಾಕು. ಟೆಲಿ-ಲಾ (Tele-Law) ಹೆಸರಿನಲ್ಲಿ ಸ್ವಯಂ ಆಗಿ ಸೇವ್ ಆಗುತ್ತದೆ.

ಮೂಲತಃ ಇದು ಒಂದು ಚಾಟ್​ಬೋಟ್ (Chatbot) ಆಗಿರುತ್ತದೆ. ನಿಮಗೆ ಮೂಲ ಕಾನೂನು ಸಲಹೆಗಳನ್ನು ಮತ್ತು ಮಾರ್ಗದರ್ಶನವನ್ನು ಇದು ಒದಗಿಸುತ್ತದೆ. ವರದಕ್ಷಿಣ ಕಿರುಕುಳ ಇತ್ಯಾದಿ ಕೌಟುಂಬಿಕ ಸಮಸ್ಯೆ ಇದ್ದರೆ ಅದಕ್ಕೆ ಸಂಬಂಧಿಸಿದ ಕಾನೂನುಗಳು ಏನಿವೆ, ಯಾವ ಕ್ರಮವನ್ನು ತೆಗೆದುಕೊಳ್ಳಬಹುದು ಇತ್ಯಾದಿ ಸಲಹೆಯನ್ನು ಪಡೆಯಬಹುದು.

ಇದನ್ನೂ ಓದಿ: ಎಟಿಎಂಗಳಲ್ಲಿ ಮಾರ್ಚ್ ನಂತರ 500 ರೂ ನೋಟು ಸಿಗಲ್ವಾ? ಸರ್ಕಾರದ ಸ್ಪಷ್ಟನೆ ಇದು

ಈ ಚಾಟ್​ಬೋಟ್ ಕೇವಲ ಕಾನೂನು ಸಲಹೆ ಮತ್ತು ಮಾರ್ಗಗಳನ್ನು ತಿಳಿಸುತ್ತದೆ. ಅದರೆ, ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಇತ್ಯಾದಿ ಕೆಲಸಗಳಿಗೆ ವೃತ್ತಿಪರ ವಕೀಲರ ನೆರವನ್ನು ಪಡೆಯಲೇಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ – Kannada News | Super Smash: First Ever Double Retirement In Men’s T20

ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಟೂರ್ನಿಯ 10ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಾರ್ದರ್ನ್ ನೈಟ್ಸ್ vs ಒಟಾಗೋ ತಂಡಗಳು ಮುಖಾಮುಖಿಯಾಗಿದ್ದವು.

ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಒಟಾಗೋ ತಂಡ 20 ಓವರ್​ಗಳಲ್ಲಿ 166 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನಾರ್ದರ್ನ್ ನೈಟ್ಸ್ 10 ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. ಆದರೆ ಬಳಿಕ ಇಬ್ಬರು ಪ್ರಮುಖ ದಾಂಡಿಗರು ರನ್​ ಕಲೆಹಾಕಲು ಪರದಾಡಿದರು.

17ನೇ ಓವರ್‌ನ ಮೊದಲ ಎಸೆತದ ನಂತರ ಜೀತ್ ರಾವಲ್ (23) ಅವರನ್ನು ನಿವೃತ್ತರಾಗಿ ಹಿಂತಿರುಗುವಂತೆ ನಾರ್ದರ್ನ್ ನೈಟ್ಸ್ ಸೂಚಿಸಿದರು. ಮುಂದಿನ ಓವರ್‌ನ ಮೊದಲ ಎಸೆತದಲ್ಲೇ ಕ್ಸೇವಿಯರ್ ಬೆಲ್ (9) ಅವರನ್ನು ಕೂಡ ವಾಪಸ್ ಕರೆಸಲಾಯಿತು. ಈ ಮೂಲಕ ನಾರ್ದರ್ನ್ ನೈಟ್ಸ್ ತಂಡವು ಟಿ20 ಕ್ರಿಕೆಟ್​ನಲ್ಲಿ ಇಬ್ಬರು ಆಟಗಾರರನ್ನು ರಿಟೈರ್ಡ್​ ಔಟ್ ಮಾಡಿದ ಮೊದಲ ತಂಡ ಎನಿಸಿಕೊಂಡಿತು.

ಇದಾದ ಬಳಿಕ ಹೋರಾಟ ಮುಂದುವರೆಸಿದ ನಾರ್ದರ್ನ್ ನೈಟ್ಸ್ ತಂಡವು ಕೊನೆಯ ಓವರ್​ನಲ್ಲಿ 18 ರನ್​ಗಳಿಸುವ ಮೂಲಕ ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸಿದರು. ವಿಶೇಷ ಎಂದರೆ ಸೂಪರ್ ಸ್ಮ್ಯಾಶ್ ಲೀಗ್​ನಲ್ಲಿ ಸೂಪರ್ ಓವರ್ ಆಡಿಸಲಾಗುತ್ತಿಲ್ಲ. ಹೀಗಾಗಿ ಉಭಯ ತಂಡಗಳು ತಲಾ 2 ಅಂಕಗಳನ್ನು ಹಂಚಿಕೊಂಡಿದೆ.

 

 

Source link

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ – Kannada News | Bengaluru Om Shakti Stone Pelting: Minister Zameer Khan Demands Action on Chamarajpet Incident

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ರಥದ ಮೇಲೆ ಕಲ್ಲು ಎಸೆದ ಘಟನೆಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಕೇವಲ ಅಪ್ರಾಪ್ತರು ಮಾತ್ರ ಈ ಕೃತ್ಯ ನಡೆಸಿದ್ದಾರೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲವೆಂದ ಜಮೀರ್, ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚುವಂತೆ ಡಿಸಿಪಿಗೆ ಆದೇಶಿಸಲಾಗಿದೆ. ಚಾಮರಾಜಪೇಟೆಯಲ್ಲಿ ಹಿಂದೂ–ಮುಸ್ಲಿಂರು ಸಹೋದರರಂತೆ ಬದುಕುತ್ತಿದ್ದು, ಈ ರೀತಿಯ ಘಟನೆ ಹಿಂದೆ ನಡೆದಿಲ್ಲ. ಈ ಪ್ರದೇಶದಲ್ಲಿ ಗಾಂಜಾ ಸಮಸ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಿರುವುದು ಸತ್ಯವಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ತಪ್ಪು ಮಾಡಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ – Kannada News | Spandana Somanna Talks About Boyfriend and Marriage plan

ಸ್ಪಂದನಾ ಸೋಮಣ್ಣ ಅವರು ಬಾಯ್​ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು ಎನ್ನಲಾಗಿತ್ತು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವ ಅನ್ನೋದನ್ನು ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್​​ನ ಎಂಜಾಯ್ ಮಾಡ್ತೀನಿ’ ಎಂದಿದ್ದಾರೆ ಸ್ಪಂದನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಳ್ಳಾರಿ ಗಲಭೆ ಬಗ್ಗೆ ಹೆಚ್​​ಡಿಕೆ ಹೊಸ ಬಾಂಬ್​: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ – Kannada News | Ballari clash Case: Two Postmortems Trigger Political Storm, HD Kumaraswamy Makes Explosive Allegations

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು, ಜನವರಿ 5: ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಹಲವು ಅನುಮಾನಗಳು ಮತ್ತು ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂಬ ಸ್ಫೋಟಕ ಆರೋಪ ಮಾಡಿದ ಕುಮಾರಸ್ವಾಮಿ, ಈ ನಡೆ ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

‘ಎರಡು ಬಾರಿ ಶವ ಪರೀಕ್ಷೆ ಮಾಡಿದ್ದೀರಿ? ಮೊದಲ ಬಾರಿ ಏನು ವರದಿ ಬಂತು? ಎರಡನೇ ಬಾರಿ ಯಾರು ಒತ್ತಾಯ ಮಾಡಿದರು? ಯಾರ ಅನುಮತಿಯಲ್ಲಿ ಮತ್ತೆ ಶವ ಪರೀಕ್ಷೆ ನಡೆಸಲಾಯಿತು? ಯಾರನ್ನು ಮೆಚ್ಚಿಸಲು ಈ ಆದೇಶ’ ಎಂದು ಕುಮಾರಸ್ವಾಮಿ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ತೆಗೆಯಲಾಗಲಿಲ್ಲ ಎಂಬ ಮಾಹಿತಿ ಇದೆ. ಇದಕ್ಕೆ ಕಾರಣವೇನು? ಇದನ್ನು ಸಮಗ್ರವಾಗಿ ತನಿಖೆ ಮಾಡುತ್ತೀರಾ ಅಥವಾ ನ್ಯಾಯವನ್ನು ಮರೆಮಾಚುತ್ತೀರಾ? ರಾಜ್ಯದ ಜನರಿಗೆ ರಕ್ಷಣೆ ನೀಡುವ ಜವಾಬ್ದಾರಿ ಸರ್ಕಾರಕ್ಕಿಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯನ್ನೇ ಪ್ರತಿಷ್ಠೆಯ ವಿಚಾರವನ್ನಾಗಿ ಮಾಡಿಕೊಂಡ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆಯಾಗಿದೆ. ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯನ್ನು ಬಂಧಿಸಿದ್ದೀರಾ ಅಥವಾ ರಾಜಾತಿಥ್ಯ ನೀಡಿ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೀರಾ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ನಿಜವಾದ ಹೊಣೆಗಾರರು ಯಾರು ತಿಳಿಸಿ: ಕುಮಾರಸ್ವಾಮಿ ಆಗ್ರಹ

ಗಲಭೆ ಪ್ರಕರಣದಲ್ಲಿ ಬಳ್ಳಾರಿ ಎಸ್‌ಪಿಯನ್ನು ಮಾತ್ರ ಅಮಾನತು ಮಾಡಲಾಗಿದೆ. ಐಜಿ, ಎಎಸ್ಪಿ, ಡಿವೈಎಸ್‌ಪಿ ಅವರಿಗೆ ಬಳ್ಳಾರಿಯ ಹಿನ್ನೆಲೆ ಗೊತ್ತಿರಲಿಲ್ಲವೇ? ಅವರನ್ನು ಯಾಕೆ ಅಮಾನತು ಮಾಡಿಲ್ಲ ಎಂದು ಹೆಚ್​ಡಿಕೆ ಪ್ರಶ್ನಿಸಿದರು. ಯಾವ ಅಧಿಕಾರಿಗಳು ನಿಜವಾದ ಹೊಣೆಗಾರರು ಎಂಬುದನ್ನು ಸರ್ಕಾರ ಜನರ ಮುಂದೆ ಇಡಬೇಕು ಎಂದು ಅವರು ಆಗ್ರಹಿಸಿದರು.

ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಪ್ರವೇಶಕ್ಕೆ ಅನುಮತಿ ನೀಡಿದ ಬಳಿಕ ಎಷ್ಟು ಗಲಭೆಗಳು ನಡೆದಿವೆ ಎಂಬ ವಿವರಗಳನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದರು. ಜನವರಿ 3ರಂದು ನಡೆದ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿತ್ತೇ? ಅನುಮತಿ ಇಲ್ಲದಿದ್ದರೆ ಯಾವ ಅಧಿಕಾರದ ಆಧಾರದ ಮೇಲೆ ಕಾರ್ಯಕ್ರಮ ನಡೆಸಲಾಯಿತು ಎಂದು ಅವರು ಪ್ರಶ್ನಿಸಿದರು.

ಮೂಟೆಯಲ್ಲಿ ತೆಗೆದುಕೊಂಡು ಹೋಗಿ ಕೊಟ್ಟಿದ್ದು‌ ಯಾರ ಹಣ: ಕುಮಾರಸ್ವಾಮಿ ಪ್ರಶ್ನೆ

ಮೃತ ರಾಜಶೇಖರ್ ಕುಟುಂಬಕ್ಕೆ ಮೂಟೆಯಲ್ಲಿ ತೆಗೆದುಕೊಂಡು ಹೋಗಿ ಕೊಟ್ಟ‌ 25 ಲಕ್ಷ ರೂಪಾಯಿ ಯಾರ ಹಣ? ಸರ್ಕಾರದ ಹಣವೇ ಅಥವಾ ಖಾಸಗಿ ಹಣವೇ? ಆದಾಯ ತೆರಿಗೆ ಇಲಾಖೆ ಏನು ಮಾಡುತ್ತಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ

ಈ ಪ್ರಕರಣದಲ್ಲಿ ಸಿಬಿಐ ತನಿಖೆ ಹೊರತುಪಡಿಸಿ ಬೇರೆ ಯಾವುದೇ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ವಿಪಕ್ಷ ನಾಯಕರು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಆದರೆ ಡಿಸಿಎಂ ಶಾಸಕರ ಬೆಂಬಲಕ್ಕೆ ನಿಂತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಬಳ್ಳಾರಿ ಗಲಭೆ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಪತ್ನಿ, ಗನ್​​ಮ್ಯಾನ್​​ಗಳ ಬಗ್ಗೆ ಜನಾರ್ದನ ರೆಡ್ಡಿ ಏನಂದ್ರು ನೋಡಿ

‘ರಾಜ್ಯ ಸರ್ಕಾರ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಇತಿಹಾಸ ನಿಮ್ಮ ಆಡಳಿತವನ್ನು ಹೇಗೆ ದಾಖಲಿಸಲಿದೆ ಎಂಬುದನ್ನು ನೀವು ಯೋಚಿಸಬೇಕು’ ಎಂದು ಕುಮಾರಸ್ವಾಮಿ ಕಾಂಗ್ರೆಸ್​​ಗೆ ಎಚ್ಚರಿಕೆ ನೀಡಿದರು. ಬಳ್ಳಾರಿ ಗಲಭೆ ಪ್ರಕರಣದಲ್ಲಿ ಐಜಿ, ಎಎಸ್ಪಿ ಹಾಗೂ ಡಿವೈಎಸ್‌ಪಿಯನ್ನು ಕೂಡ ಅಮಾನತು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಾಜಿ ಪ್ರಧಾನಿ ಮಗನ ಮನೆಗೆ ನುಗ್ಗಿ ಅರೆಸ್ಟ್ ಮಾಡಿದ್ದೀರಿ: ಹೆಚ್​ಡಿಕೆ ಕಿಡಿ

ಬಳ್ಳಾರಿ ಗಲಭೆ ಪ್ರಕರಣ ಸಂಬಂಧ ಇಬ್ಬರನ್ನು ಹೋಟೆಲ್​ನಲ್ಲಿ ಇಟ್ಟುಕೊಂಡು ತನಿಖೆ ಮಾಡುತ್ತಿದ್ದಾರಂತೆ. ಮಾಜಿ ಪ್ರಧಾನಿ ಮಗನ್ನು (ಹೆಚ್​ಡಿ ರೇವಣ್ಣ ಬಂಧಿಸಿದ್ದ ಬಗ್ಗೆ ಪರೋಕ್ಷವಾಗಿ ಉಲ್ಲೇಖಿಸಿ) ಮನೆಗೆ ನುಗ್ಗಿ ಅರೆಸ್ಟ್ ಮಾಡಿಸಿದ್ದೀರಿ. ಅವರೇನು ಅಂತಹ ತಪ್ಪು ಮಾಡಿದ್ದರು? ಎಲ್ಲಾ ನೆನಪು ಇಟ್ಟುಕೊಂಡಿದ್ದೇನೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇದು ವಿನಾಶದ ಕಥೆಯಲ್ಲ,ಭಾರತದ ಸ್ವಾಭಿಮಾನದ ಗಾಥೆ, ಸೋಮನಾಥ ದೇವಾಲಯ ದಾಳಿಯ ಬಗ್ಗೆ ಮೋದಿ ಭಾವನಾತ್ಮಕ ಬ್ಲಾಗ್ – Kannada News | PM Modi Highlights Somnath Temple’s Millennium Long Legacy

ನವದೆಹಲಿ, ಜನವರಿ 05: ಸೋಮನಾಥ ದೇವಾಲಯ(Somnath Temple) ದ ಮೇಲಿನ ದಾಳಿಯು ಇತಿಹಾಸದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ನಲ್ಲಿ ಬರೆದಿದ್ದಾರೆ. ಮೊಹಮ್ಮದ್ ಘಜ್ನಿ ಲೂಟಿ ಮಾಡಿ ಹೊರಟುಹೋದ, ಆದರೆ ಅವನಿಗೆ ಸೋಮನಾಥನ ಮೇಲಿನ ನಮ್ಮ ಭಕ್ತಿಯನ್ನು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಜರಾತ್‌ನ ಪ್ರಭಾಸ್ ಪಟನ್‌ನಲ್ಲಿರುವ ಸೋಮನಾಥ ದೇವಾಲಯವು ಭಾರತೀಯ ನಂಬಿಕೆ ಮತ್ತು ನಾಗರಿಕತೆಯ ಶಾಶ್ವತ ಸಂಕೇತವಾಗಿದೆ. ಈ ದೇವಾಲಯವು ಪದೇ ಪದೇ ವಿದೇಶಿ ಆಕ್ರಮಣಗಳು ಮತ್ತು ವಿನಾಶಗಳನ್ನು ಎದುರಿಸಿದೆ, ಆದರೆ ಪ್ರತಿ ಬಾರಿಯೂ ಅದನ್ನು ಪುನರ್ನಿರ್ಮಿಸಿ ಅದರ ಪೂರ್ಣ ವೈಭವವನ್ನು ಪುನರುಜ್ಜೀವನಗೊಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ತಮ್ಮ ಬ್ಲಾಗ್‌ನಲ್ಲಿ ಸೋಮನಾಥದ 1,000 ವರ್ಷಗಳಷ್ಟು ಹಳೆಯದಾದ ಕಥೆಯನ್ನು ಹಂಚಿಕೊಂಡಿದ್ದಾರೆ, ಅದರ ಆಧ್ಯಾತ್ಮಿಕ ಮಹತ್ವ, ಪುನರಾವರ್ತಿತ ಆಕ್ರಮಣಗಳ ಸ್ಪೂರ್ತಿದಾಯಕ ಕಥೆ ಮತ್ತು ಸ್ವತಂತ್ರ ಭಾರತದಲ್ಲಿ ಅದರ ಪುನರ್ನಿರ್ಮಾಣವನ್ನು ವಿವರಿಸಿದ್ದಾರೆ. ಈ ದೇವಾಲಯವು ಲಕ್ಷಾಂತರ ಭಕ್ತರಿಗೆ ನಂಬಿಕೆಯ ಕೇಂದ್ರ ಮಾತ್ರವಲ್ಲ, ನಮ್ಮ ನಾಗರಿಕತೆ, ಶಕ್ತಿ ಮತ್ತು ಆತ್ಮ ವಿಶ್ವಾಸದ ಶಾಶ್ವತ ಸಂಕೇತವಾಗಿದೆ ಎಂದು ಬರೆದಿದ್ದಾರೆ.

ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿರುವ ಈ ದೇವಾಲಯವು ಹಿಂದೂ ಧರ್ಮದ 12 ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದು. ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರದಲ್ಲಿ ಇದರ ವಿವರಣೆಯು ಸೌರಾಷ್ಟ್ರ ಸೋಮನಾಥಂ ಚ ಈ ಸಾಲಿನಿಂದ ಪ್ರಾರಂಭವಾಗುತ್ತದೆ. ಅಂದರೆ ಸೋಮನಾಥವು ಜ್ಯೋತಿರ್ಲಿಂಗಗಳಲ್ಲಿ ಅತ್ಯಂತ ಪ್ರಮುಖ ಸ್ಥಾನವನ್ನು ಹೊಂದಿದೆ ಎಂದರ್ಥ.

ಮತ್ತಷ್ಟು ಓದಿ: ಏಷ್ಯಾದ ಅತಿದೊಡ್ಡ ಗಣಪತಿ ದೇವಾಲಯವಿದು; 56 ಅಡಿ ಎತ್ತರದ ಗಣೇಶನಿಗೆ ಇಲ್ಲಿ ವಿಶೇಷ ಪೂಜೆ

ಸೋಮನಾಥಕ್ಕೆ ಭೇಟಿ ನೀಡುವುದರಿಂದ ಎಲ್ಲಾ ಪಾಪಗಳಿಂದ ಮುಕ್ತಿ ಸಿಗುತ್ತದೆ ಮತ್ತು ಆಸೆಗಳನ್ನು ಈಡೇರಿಸುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ.
ಸೋಮನಾಥ ದೇವಾಲಯವು ಇತಿಹಾಸದುದ್ದಕ್ಕೂ ಹಲವಾರು ವಿನಾಶಗಳನ್ನು ಕಂಡಿದೆ. ಮೊದಲ ಮತ್ತು ಅತ್ಯಂತ ಮಹತ್ವದ ದಾಳಿ ಕ್ರಿ.ಶ. 1026 ರಲ್ಲಿ ಮೊಹಮ್ಮದ್ ಘಜ್ನಿಯಿಂದ ನಡೆದಿತ್ತು. ಅವನು ದೇವಾಲಯದ ಪವಿತ್ರ ಜ್ಯೋತಿರ್ಲಿಂಗವನ್ನು ನಾಶಪಡಿಸಿ ಅದನ್ನು ಲೂಟಿ ಮಾಡಿದ್ದ.

ಇನ್ನೂ ಹಲವರ ದಾಳಿ
ಅಲಾವುದ್ದೀನ್ ಖಲ್ಜಿ (1299)

ಜಾಫರ್ ಖಾನ್ (1395)

ಔರಂಗಜೇಬ್ (1706)

ಈ ದಾಳಿಗಳು ಕೇವಲ ಧಾರ್ಮಿಕ ಸ್ಥಳಗಳನ್ನು ನಾಶಮಾಡುವ ಗುರಿಯನ್ನು ಹೊಂದಿಲ್ಲ, ಬದಲಾಗಿ ನಮ್ಮ ಸಮಾಜ ಮತ್ತು ನಾಗರಿಕತೆಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. ಪ್ರತಿ ಬಾರಿ ದೇವಾಲಯದ ಮೇಲೆ ದಾಳಿಯಾದಾಗ, ನಮ್ಮ ಪೂರ್ವಜರು ಅದನ್ನು ಪುನರ್ನಿರ್ಮಿಸಿ ಮತ್ತೆ ಜೀವಂತಗೊಳಿಸಿದರು.

ಮೋದಿ ಪೋಸ್ಟ್​

ಆಧ್ಯಾತ್ಮಿಕ ಮತ್ತು ಆರ್ಥಿಕ ಮಹತ್ವ

ಸೋಮನಾಥವು ಅಪಾರ ಆಧ್ಯಾತ್ಮಿಕ ಮತ್ತು ಆರ್ಥಿಕ ಮಹತ್ವವನ್ನು ಹೊಂದಿತ್ತು. ಈ ದೇವಾಲಯವು ಹೆಚ್ಚಿನ ಸಂಖ್ಯೆಯ ಜನರನ್ನು ಆಕರ್ಷಿಸಿತು. ಸಮುದ್ರಯಾನ ವ್ಯಾಪಾರಿಗಳು ಮತ್ತು ನಾವಿಕರು ಅದರ ವೈಭವ ಮತ್ತು ವೈಭವದ ಕಥೆಗಳನ್ನು ದೂರದವರೆಗೆ ಹರಡಿದರು.
ಈ ದಾಳಿಗಳ ಹೊರತಾಗಿಯೂ, ಸೋಮನಾಥ ದೇವಾಲಯವು ಕೇವಲ ವಿನಾಶದ ಸಂಕೇತವಲ್ಲ, ಇದು ಭಾರತ ಮಾತೆಯ ಲಕ್ಷಾಂತರ ಮಕ್ಕಳ ಸ್ವಾಭಿಮಾನ ಮತ್ತು ಅಚಲ ನಂಬಿಕೆಯ ಕಥಾವಸ್ತುವಾಗಿದೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ಸ್ವಾತಂತ್ರ್ಯ ನಂತರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ನೇತೃತ್ವದಲ್ಲಿ ಸೋಮನಾಥ ದೇವಾಲಯವನ್ನು ಪುನರ್ನಿರ್ಮಿಸಲಾಯಿತು. 1947 ರ ದೀಪಾವಳಿಯ ಸಮಯದಲ್ಲಿ, ಸರ್ದಾರ್ ಪಟೇಲ್ ದೇವಾಲಯಕ್ಕೆ ಭೇಟಿ ನೀಡಿ ಅದನ್ನು ನವೀಕರಿಸಲು ಸಂಕಲ್ಪ ಮಾಡಿದ್ದರು.
ದೇವಾಲಯದ ಭವ್ಯ ಉದ್ಘಾಟನೆಯು ಮೇ 11, 1951 ರಂದು ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಸಮ್ಮುಖದಲ್ಲಿ ನಡೆಯಿತು. ಈ ದಿನ ಸರ್ದಾರ್ ಪಟೇಲ್ ಅವರ ಕನಸನ್ನು ನನಸಾಗಿಸಿದ ದಿನ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ನೆಹರು ಉತ್ಸಾಹ ತೋರಿರಲಿಲ್ಲ

ಆಗಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಈ ಸಮಾರಂಭದ ಬಗ್ಗೆ ಉತ್ಸಾಹ ತೋರಲಿಲ್ಲ, ಇದು ಭಾರತದ ಪ್ರತಿಷ್ಠೆಗೆ ಹಾನಿಕಾರಕ ಎಂದು ಕರೆದರೂ, ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ದೃಢವಾಗಿ ನಿಂತು ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

1890 ರ ದಶಕದಲ್ಲಿ ಸ್ವಾಮಿ ವಿವೇಕಾನಂದರು ಸೋಮನಾಥಕ್ಕೆ ಭೇಟಿ ನೀಡಿದ್ದರು ಎಂದು ಪ್ರಧಾನಿ ಮೋದಿ ತಮ್ಮ ಬ್ಲಾಗ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಅನುಭವ ಅವರ ಮೇಲೆ ತೀವ್ರ ಪರಿಣಾಮ ಬೀರಿತು. 1897 ರಲ್ಲಿ ಚೆನ್ನೈನಲ್ಲಿ ನಡೆದ ತಮ್ಮ ಉಪನ್ಯಾಸದಲ್ಲಿ, ಸೋಮನಾಥ ಮತ್ತು ದಕ್ಷಿಣ ಭಾರತದ ಪ್ರಾಚೀನ ದೇವಾಲಯಗಳು ಜ್ಞಾನದ ಬುತ್ತಿಯನ್ನು ಹೊಂದಿವೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿಗರಿಗೆ ಮತ್ತೊಂದು ಶಾಕ್​​: ಇನ್ಮುಂದೆ ರಸ್ತೆ ಬದಿ ವಾಹನ ಪಾರ್ಕಿಂಗ್ ಮಾಡಬೇಕಾದರೆ ಶುಲ್ಕ ಪಾವತಿಸಬೇಕು – Kannada News | Bengaluru Shock: New Parking Charges in CBD, Hebbal, Yelahanka by GBA – Know Rules

ಬೆಂಗಳೂರು, ಜ.5: ಬೆಂಗಳೂರಿಗರಿಗೆ ಮತ್ತೊಂದು ಶಾಕ್ (Bengaluru parking fees)​​ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ, ಸಿಕ್ಕ ಸಿಕ್ಕ ಕಡೆ ವಾಹನ ನಿಲುಗಡೆ ಮಾಡುವ ಮುನ್ನ ಈ ವಿಚಾರವನ್ನು ತಿಳಿದುಕೊಳ್ಳಲೇಬೇಕು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜನರಿಗೆ ಶುಲ್ಕ ವಿಧಿಸುವ ಮೂಲಕ ಬೆಂಗಳೂರು ಜನರಿಗೆ ಪಾರ್ಕಿಂಗ್​​​​​ ರೂಲ್ಸ್​​​ ಮಾಡುವ ನಿಯಮವನ್ನು ಹೇಳಿಕೊಡುವ ಕೆಲಸವನ್ನು ಮಾಡುತ್ತಿದೆ.  ಇನ್ಮುಂದೆ ಸಿಬಿಡಿ, ಹೆಬ್ಬಾಳ ಮತ್ತು ಯಲಹಂಕದಂತಹ ಪ್ರದೇಶಗಳಲ್ಲಿನ ಬೀದಿಗಳಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ವಿಧಿಸಲು ಪ್ರಾರಂಭಿಸಲಿದೆ. ವಿವಿಧ ವಾಹನಗಳ ಪಾರ್ಕಿಂಗ್ ಶುಲ್ಕಗಳು ನಿಗದಿ ಮಾಡಿದೆ. ಅವುಗಳು ಈ ಕೆಳಂಗಿನಂತಿದೆ.

ನಾಲ್ಕು ಚಕ್ರಗಳ ವಾಹನಗಳ ಪಾರ್ಕಿಂಗ್‌ಗೆ ಗಂಟೆಗೆ 30 ರೂ. ಶುಲ್ಕ ವಿಧಿಸಲಾಗಿದೆ. ದ್ವಿಚಕ್ರ ವಾಹನ ಮಾಲೀಕರು ಗಂಟೆಗೆ 15 ರೂ. ಪಾವತಿಸಬೇಕಾಗುತ್ತದೆ. ದೈನಂದಿನ ಪಾಸ್‌ಗೂ ಅರ್ಜಿ ಸಲ್ಲಿಸಬಹುದು, ಇದು ನಾಲ್ಕು ಚಕ್ರದ ವಾಹನಗಳು ಮತ್ತು ದ್ವಿಚಕ್ರ ವಾಹನಗಳಿಗೆ 150 ಮತ್ತು 75 ರೂ. ಎಂದು ನಿಗದಿ ಮಾಡಿದೆ. ಮಾಸಿಕ ಪಾಸ್‌ಗಳಿಗೆ, ನಾಲ್ಕು ಚಕ್ರಗಳ ವಾಹನ ನಿಲುಗಡೆಗೆ 3,000 ರೂ. ಮತ್ತು ದ್ವಿಚಕ್ರ ವಾಹನಗಳಿಗೆ 1,500 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ 2,000 ಫಾಲೋವರ್ಸ್‌ ಗಳಿಸಿದ ಮಹಿಳೆ: ಕೇಕ್​​ ಕಟ್​​ ಮಾಡಿ ಸಂಭ್ರಮಿಸಿದ ಬಾಸ್

ಎಕ್ಸ್​​​​ ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಪಾರ್ಕಿಂಗ್ ಶುಲ್ಕ ಸಂಗ್ರಹ ಮಾಡುವ ಪ್ರದೇಶಗಳು:

ಹೆಬ್ಬಾಳ ವಿಭಾಗದ ಟ್ಯಾಂಕ್ ಬಂಡ್ ರಸ್ತೆ, ತರಳಬಾಳು ರಸ್ತೆ ಮತ್ತು ಭೂಪಸಂದ್ರ ಮುಖ್ಯ ರಸ್ತೆ. ಯಲಹಂಕ ಹೊಸ ಪಟ್ಟಣದ ವಾರ್ಡ್ ಸಂಖ್ಯೆ 05 ರಲ್ಲಿ 1 ನೇ ಎ, 13 ನೇ ಎ ಮುಖ್ಯ ರಸ್ತೆಗಳು ಮತ್ತು 3 ನೇ ಬಿ, 16 ನೇ ಬಿ, 15 ನೇ ಎ ಅಡ್ಡ ರಸ್ತೆಗಳು ಮತ್ತು ಸಂದೀಪ್ ಉನ್ನಿಕೃಷ್ಣ ರಸ್ತೆ ಹಾಗೂ ಇತರ ಪ್ರದೇಶಗಳಿಗೂ ಇದನ್ನು ಮುಂದುವರಿಸಲಾಗುವುದು. ಈ ಮೂಲಕ ಸಿಕ್ಕ ಸಿಕ್ಕ ಕಡೆ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದನ್ನು ತಡೆಯುವುದು ಇದರ ಉದ್ದೇಶವಾಗಿದೆ. ಈಗಾಗಲೇ ಜನರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಕಿರುವ ತೆರಿಗೆ ಹೈರಾಣಾಗಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ಜನಪದ ಕಲಾವಿದರು: ಕಾರಣ ಇಲ್ಲಿದೆ – Kannada News | Uttara Karnataka Artists Demand Ban on Obscene Words in Janapada Songs

ಬಾಗಲಕೋಟೆ, ಜನವರಿ 05: ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿವೆ. ಆದರೆ, ಇತ್ತೀಚೆಗೆ ಹಾಡು, ನೃತ್ಯ ಮತ್ತು ನಾಟಕಗಳಲ್ಲಿ ಅಶ್ಲೀಲ ಪದಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಕಲಾವಿದರೇ ಆಕ್ರೋಶ ವ್ಯಕ್ತಪಡಿಸಿದ್ದು, ಅಶ್ಲೀಲತೆಗೆ ಕಡಿವಾಣ ಹಾಕುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮ್ಯೂಸಿಕ್ ಮೈಲಾರಿ ಬಂಧನದ ನಂತರ ಈ ವಿಷಯ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ. ಅವರ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ ಘಟನೆಗಳು ನಡೆದಿರುವುದು ವರದಿಯಾಗಿತ್ತು. ಈ ಬಂಧನವು ಎಲ್ಲ ಕಲಾವಿದರಿಗೆ ಒಂದು ಪಾಠವಾಗಬೇಕು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಆರ್ಕೆಸ್ಟ್ರಾ, ನಾಟಕ, ಆಲ್ಬಮ್ ಸಾಂಗ್, ನೃತ್ಯ ಮತ್ತು ಉಡುಪುಗಳಲ್ಲಿ ಅಶ್ಲೀಲತೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 5th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,37,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,25,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,305 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,595 ರೂ
  • ಚೆನ್ನೈ: 12,680 ರೂ
  • ಮುಂಬೈ: 12,595 ರೂ
  • ದೆಹಲಿ: 12,610 ರೂ
  • ಕೋಲ್ಕತಾ: 12,595 ರೂ
  • ಕೇರಳ: 12,595 ರೂ
  • ಅಹ್ಮದಾಬಾದ್: 12,600 ರೂ
  • ಜೈಪುರ್: 12,610 ರೂ
  • ಲಕ್ನೋ: 12,610 ರೂ
  • ಭುವನೇಶ್ವರ್: 12,595 ರೂ

ಇದನ್ನೂ ಓದಿ: ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 560 ರಿಂಗಿಟ್ (12,399 ರುಪಾಯಿ)
  • ದುಬೈ: 483.25 ಡಿರಾಮ್ (11,874 ರುಪಾಯಿ)
  • ಅಮೆರಿಕ: 134.50 ಡಾಲರ್ (12,138 ರುಪಾಯಿ)
  • ಸಿಂಗಾಪುರ: 173.50 ಸಿಂಗಾಪುರ್ ಡಾಲರ್ (12,159 ರುಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,921 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,815 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (12,013 ರುಪಾಯಿ)
  • ಕುವೇತ್: 39.34 ಕುವೇತಿ ದಿನಾರ್ (11,550 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 247 ರೂ
  • ಚೆನ್ನೈ: 265 ರೂ
  • ಮುಂಬೈ: 247 ರೂ
  • ದೆಹಲಿ: 247 ರೂ
  • ಕೋಲ್ಕತಾ: 247 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 247 ರೂ
  • ಜೈಪುರ್: 247 ರೂ
  • ಲಕ್ನೋ: 247 ರೂ
  • ಭುವನೇಶ್ವರ್: 265 ರೂ
  • ಪುಣೆ: 247

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link