ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್ – Kannada News | ‘Don’t Speak Kannada Here: AMC College Hostel Warden’s Remark Sparks Outrage at Prestigious College Near Bengaluru
ಆನೇಕಲ್, ಜನವರಿ 5: ಕರ್ನಾಟಕದಲ್ಲಿ ಕನ್ನಡ ಮಾತನಾಡುವಂತಿಲ್ಲವೇ? ಇಂಥದ್ದೊಂದು ಪ್ರಶ್ನೆ ಮೂಡಿಸುವಂತಹ ಘಟನೆ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ರಸ್ತೆ ಸಮೀಪದ ಕಲ್ಕೆರೆ ಬಳಿ ಇರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಹಾಸ್ಟೆಲ್ ವಾರ್ಡನ್ ಒಬ್ಬರು, ‘ಕನ್ನಡ ಮಾತನಾಡಬೇಡಿ’ ಎಂದು ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬನ್ನೇರುಘಟ್ಟದಲ್ಲಿರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬಾತ, ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಪರಸ್ಪರ ಕನ್ನಡದಲ್ಲಿ ಮಾತನಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ‘ಕನ್ನಡ ಮಾತನಾಡುವುದು ಇಲ್ಲಿ ಸರಿಯಲ್ಲ, ಕನ್ನಡ ಮಾತನಾಡಬೇಕಾದರೆ ಮನೆಯಲ್ಲೇ…