All posts by nagaraj11081993

ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್ – Kannada News | ‘Don’t Speak Kannada Here: AMC College Hostel Warden’s Remark Sparks Outrage at Prestigious College Near Bengaluru

ಆನೇಕಲ್, ಜನವರಿ 5: ಕರ್ನಾಟಕದಲ್ಲಿ ಕನ್ನಡ ಮಾತನಾಡುವಂತಿಲ್ಲವೇ? ಇಂಥದ್ದೊಂದು ಪ್ರಶ್ನೆ ಮೂಡಿಸುವಂತಹ ಘಟನೆ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ರಸ್ತೆ ಸಮೀಪದ ಕಲ್ಕೆರೆ ಬಳಿ ಇರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಹಾಸ್ಟೆಲ್ ವಾರ್ಡನ್‌ ಒಬ್ಬರು, ‘ಕನ್ನಡ ಮಾತನಾಡಬೇಡಿ’ ಎಂದು ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬನ್ನೇರುಘಟ್ಟದಲ್ಲಿರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬಾತ, ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಪರಸ್ಪರ ಕನ್ನಡದಲ್ಲಿ ಮಾತನಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ‘ಕನ್ನಡ ಮಾತನಾಡುವುದು ಇಲ್ಲಿ ಸರಿಯಲ್ಲ, ಕನ್ನಡ ಮಾತನಾಡಬೇಕಾದರೆ ಮನೆಯಲ್ಲೇ ಮಾತನಾಡಿ’ ಎಂದು ಉದ್ಧಟತನದ ಮಾತುಗಳನ್ನಾಡಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದಲ್ಲದೆ, ‘ಕನ್ನಡ ಬೇಡ, ಹಿಂದಿಯಲ್ಲಿ ಮಾತನಾಡಿ’ ಎಂದು ವಾರ್ಡನ್ ಅವಾಜ್ ಹಾಕಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧಿತ ವಿಡಿಯೋ ಈಗ ವೈರಲ್ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್! – Kannada News | Home Minister Parameshwara on JJ Nagar Stone Pelting, Juvenile Arrest

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅವರು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು ಪ್ರಚೋದಿಸಿದ್ದಾರೆ ಅಥವಾ ಘಟನೆ ಹೇಗೆ ನಡೆಯಿತು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ಘಟನೆಗಳು ನಡೆದಾಗ ಬಿಜೆಪಿ ರಾಜಕೀಯ ಮಾಡಲು ಪ್ರಯತ್ನಿಸುತ್ತದೆ ಎಂಬ ಆರೋಪವನ್ನು ಮಾಡಿರುವ ಪರಮೇಶ್ವರ್, ಬಿಜೆಪಿ ಹೇಳಿಕೆ ನೀಡುವ ಮೊದಲೇ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಕಾನೂನು ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತದೆ ಮತ್ತು ಯಾರ ಪ್ರಚೋದನೆಗೂ ಒಳಗಾಗುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಮತೋಲನ ಕಳೆದುಕೊಂಡು ಸ್ಕೂಟಿಯಿಂದ ಬಿದ್ದ ಅಮ್ಮ-ಮಗಳು, ತಲೆ ಮೇಲೆ ಟ್ರಕ್ ಹರಿದು ಇಬ್ಬರೂ ಸಾವು – Kannada News | Chattisgarh: Mother and Daughter Killed in Road Accident After Scooter Loses Balance

ಛತ್ತೀಸ್​ಗಢ, ಜನವರಿ 05: ತರಕಾರಿ ತರಲೆಂದು ರಾತ್ರಿ ಮಾರ್ಕೆಟ್​ಗೆ ಹೋಗಿದ್ದ ಅಮ್ಮ-ಮಗಳು ಶವವಾಗಿ ಮನೆಗೆ ತಲುಪಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್​ಗಢದ ಕೋರ್ಬಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ  ಅಪಘಾತ(Accident) ನಡೆದಿದೆ. ಕೊರ್ಬಾದ ಕೊಹಾಡಿಯಾ ವಾರ್ಡ್ ನಿವಾಸಿ ರಾಮ್ ಕುಮಾರಿ ವರ್ಮಾ, ಭಾನುವಾರ ಸಂಜೆ ದರಿ ಮಾರುಕಟ್ಟೆಯಿಂದ ತರಕಾರಿ ಖರೀದಿಸಿ ಸ್ಕೂಟರ್‌ನಲ್ಲಿ ತನ್ನ ಮಗಳು ರೇಣು ವರ್ಮಾ ಜೊತೆ ಮನೆಗೆ ಹಿಂತಿರುಗುತ್ತಿದ್ದರು.

ದರಿ ಪಟ್ಟಣದ ಮುಖ್ಯ ರಸ್ತೆಯ ಮೂಲಕ ರಾತ್ರಿ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೈಕ್ ಸವಾರನೊಬ್ಬ ತಾಯಿ ಮತ್ತು ಮಗಳಿದ್ದ ಸ್ಕೂಟಿ ಎದುರು ವೇಗವಾಗಿ ಹೋಗಿದ್ದರಿಂದ ಬ್ರೇಕ್ ಹಾಕಲಾಗದೆ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ.
ಅದೇ ಸಮಯದಲ್ಲಿ, ವೇಗವಾಗಿ ಬಂದ ಹೆವಿ ಡ್ಯೂಟಿ ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ.

ವಾಹನದ ಚಕ್ರ ಅವರ ತಲೆಯ ಮೇಲೆ ಹಾದು ಹೋಗಿದೆ. ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ, ಭಾರೀ ವಾಹನದ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಕಾರ್ ಮತ್ತು ಚಿಗರಿ ಬಸ್ ನಡುವೆ ಅಪಘಾತ; ಎದೆ ಝಲ್ಲೆನಿಸುವ ದೃಶ್ಯ ಕಾರ್ ಡ್ಯಾಶ್ ಕ್ಯಾಮರಾದಲ್ಲಿ ಸೆರೆ

ಕೋಪಗೊಂಡ ಜನರು ಜಮಾಯಿಸಿ ರಸ್ತೆ ತಡೆ ನಡೆಸಿದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ದರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುವಂತಾಯಿತು.

ಸಾರ್ವಜನಿಕರ ಆಕ್ರೋಶವನ್ನು ಗಮನಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಆಗಮಿಸಿದರು ಮತ್ತು ಸುಮಾರು ಮೂರು ಗಂಟೆಗಳ ನಂತರ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿತು. ಜಿಲ್ಲಾ ಪೊಲೀಸರು ರಸ್ತೆ ಸುರಕ್ಷತಾ ಮಾಸವನ್ನು ಆಚರಿಸುತ್ತಿದ್ದ ಮತ್ತು ಸಂಚಾರ ನಿರ್ವಹಣೆಯನ್ನು ಸುಧಾರಿಸಲು ಕೆಲಸ ಮಾಡುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.

ದರಿ ಪ್ರದೇಶದ ಜನರು ಬಹಳ ಹಿಂದಿನಿಂದಲೂ ಭಾರೀ ವಾಹನಗಳ ವೇಗವನ್ನು ನಿಯಂತ್ರಿಸುವುದಲ್ಲದೆ, ಅವುಗಳ ಸಂಚಾರ ಮಾದರಿಯಲ್ಲಿ ಸುಧಾರಣೆಗಳನ್ನು ಸಹ ಒತ್ತಾಯಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಓವರ್‌ಲೋಡ್ ಮತ್ತು ಭಾರೀ ವಾಹನಗಳ ಸಂಚಾರವು ಸಾಮಾನ್ಯ ಜನರಿಗೆ ಪ್ರಯಾಣವನ್ನು ಕಷ್ಟಕರವಾಗಿಸಿದೆ. ಇದಲ್ಲದೆ, ಜಲ್ಲಿಕಲ್ಲು ಸಾಗಣೆಯಲ್ಲಿ ತೊಡಗಿರುವ ವಾಹನಗಳು ಜನರ ಜೀವವನ್ನು ಅಪಾಯಕ್ಕೆ ಸಿಲುಕಿಸುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:35 am, Mon, 5 January 26

Source link

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಾಲ್ಕನೇ ಬೆಕ್ಕನ್ನು ಹುಡುಕಬಲ್ಲಿರಾ – Kannada News | Optical Illusion: Find the hidden fourth cat in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಟ್ರಿಕ್ಕಿ ಒಗಟಿನ ಚಿತ್ರಗಳು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಆದರೆ ಈ ಚಿತ್ರಗಳನ್ನು ಬಿಡಿಸುವಾಗ ಹೆಚ್ಚಿನವರು ಹೆಚ್ಚು ಸಮಯ ತೆಗೆದು ಕೊಳ್ಳುತ್ತಾರೆ. ಕೆಲವರಿಗೆ ಉತ್ತರ ಕಂಡುಕೊಳ್ಳುವುದು ಕಷ್ಟವಾಗಲ್ಲ. ಇದೀಗ ನಿಮ್ಮ ಮೆದುಳಿಗೆ ಕೆಲಸ ನೀಡುವ ಹಾಗೂ ದೃಷ್ಟಿ ಸಾಮರ್ಥ್ಯ ಪರೀಕ್ಷಿಸುವ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಮೂರು ಬೆಕ್ಕುಗಳ ನಡುವೆ ನಾಲ್ಕನೇ ಬೆಕ್ಕು ಎಲ್ಲಿದೆ ಎನ್ನುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಲು ನಿಮಗಿರುವ ಕಾಲಾವಕಾಶ 7 ಸೆಕೆಂಡುಗಳು ಮಾತ್ರ ಎನ್ನುವುದು ನೆನಪಿರಲಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸುತ್ತದೆ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಗೊಂದಲಕ್ಕೀಡು ಮಾಡುವುದು ಸಹಜ. ಈ ಚಿತ್ರವು ಅದೇ ರೀತಿಯಿದ್ದು, ನಿಮಗೆ ಇಲ್ಲಿ ಮೂರು ಬೆಕ್ಕು ಕಾಣಿಸುತ್ತದೆ. ಆದರೆ ಈ ಚಿತ್ರದಲ್ಲಿ ನಾಲ್ಕು ಬೆಕ್ಕುಗಳಿವೆ. ಆ ನಾಲ್ಕನೇ ಬೆಕ್ಕನ್ನು ನೀವು ಕಂಡು ಹಿಡಿಯಬೇಕು. ನೀವು ಇದಕ್ಕೆ ಏಳು ಸೆಕೆಂಡುಗಳೊಳಗೆ ಉತ್ತರ ಕಂಡುಕೊಳ್ಳಲು ಸಾಧ್ಯವಾದರೆ ನಿಮ್ಮ ವೀಕ್ಷಣಾ ಕೌಶಲ್ಯ ಅತ್ಯುತ್ತಮವಾಗಿದೆ ಎಂದರ್ಥ.

ಇದನ್ನೂ ಓದಿ:ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ

ನಾಲ್ಕನೇ ಬೆಕ್ಕು ನಿಮ್ಮ ಕಣ್ಣಿಗೆ ಬಿದ್ದಿತೇ?

ಈ ಚಿತ್ರವನ್ನು ಎಷ್ಟೇ ಸೂಕ್ಷ್ಮವಾಗಿ ಗಮನಿಸಿದರೂ ನಾಲ್ಕನೇ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲವೇ. ಏಳು ಸೆಕೆಂಡುಗಳಲ್ಲಿ ಬೆಕ್ಕನ್ನು ಹುಡುಕುವುದು ಕಷ್ಟವಾಗಬಹುದು. ಕೆಲವರಿಗೆ ಮಾತ್ರ ಈ ಒಗಟು ಬಿಡಿಸಲು ಸಾಧ್ಯ. ನೀವು ಈ ಆಟದಲ್ಲಿ ವಿಫಲರಾಗಿದ್ದೀರಿ ಎಂದಾದರೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನಾಲ್ಕನೇ ಬೆಕ್ಕು ಎಲ್ಲಿದೆ ಎಂದು ನಾವೇ ಹೇಳುತ್ತೇವೆ. ಈ ಕೆಳಗಿನ ಚಿತ್ರವನ್ನೊಮ್ಮೆ ನೋಡಿ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂದಿನಿಂದ ಶುರು SSLC ಪೂರ್ವ ಸಿದ್ಧತಾ ಪರೀಕ್ಷೆ, ಮುಖ್ಯ ಪರೀಕ್ಷೆ ಯಾವಾಗ? – Kannada News | SSLC Preparatory Exams 2025 26: Karnataka KSEAB Timetable and Guidelines

ಇಂದಿನಿಂದ ಶುರು SSLC ಪೂರ್ವ ಸಿದ್ಧತಾ ಪರೀಕ್ಷೆ, ಮುಖ್ಯ ಪರೀಕ್ಷೆ ಯಾವಾಗ?

ಬೆಂಗಳೂರು, ಜನವರಿ 05: 2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪ್ರಿಪರೇಟರಿ ಪರೀಕ್ಷೆ ನಡೆಯಲಿದ್ದು, ಫೆಬ್ರುವರಿಯಲ್ಲಿ ಕೊನೆಯ ಹಂತದ ಪರೀಕ್ಷೆ ಮುಕ್ತಾಯಗೊಳ್ಳಲಿದೆ.

ಮೂರು ಹಂತದ ಪರೀಕ್ಷೆಯ ವೇಳಾಪಟ್ಟಿ ಇಲ್ಲಿದೆ

ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ಹೇಳಲಾಗಿದೆ. ಮೊದಲ ಹಂತದ ಪರೀಕ್ಷೆಯು ಇಂದಿನಿಂದ (ಜನವರಿ 5) ಆರಂಭವಾಗಿ, ಜನವರಿ 10ಕ್ಕೆ ಮುಕ್ತಾಯವಾದರೆ, ಎರಡನೇ ಹಂತದ ಪರೀಕ್ಷೆ ಜನವರಿ 27ರಿಂದ ಆರಂಭವಾಗಿ ಫೆಬ್ರುವರಿ 2ಕ್ಕೆ ಮುಗಿಯಲಿದೆ. ಕೊನೆಯ ಹಂತದ ಪರೀಕ್ಷೆ ಫೆಬ್ರುವರಿ 23ರಂದು ಆರಂಭವಾಗಲಿದ್ದು, ಅದೇ ತಿಂಗಳ 28ಕ್ಕೆ ಕೊನೆಗೊಳ್ಳಲಿದೆ.

ವೇಳಾಪಟ್ಟಿಯನ್ನು ಮಂಡಳಿಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಶಾಲೆಯ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಎಲ್ಲ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದ್ದು, ಪರೀಕ್ಷೆ ಕುರಿತ ಮಾಹಿತಿಯು ಎಲ್ಲ ವಿದ್ಯಾರ್ಥಿಗಳಿಗೆ ತಲುಪಲು ಕ್ರಮವಹಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಕಠಿಣ ಕ್ರಮ

ವೇಳಾಪಟ್ಟಿಯ ಅನುಸಾರ ಆಯಾ ದಿನದ ಪ್ರಶ್ನೆಪತ್ರಿಕೆಗಳನ್ನು ಮುಖ್ಯಶಿಕ್ಷಕರ ಲಾಗಿನ್‌ಗೆ ಅಪ್‌ಲೋಡ್ ಮಾಡಲಾಗುವುದು. ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಮುದ್ರಿಸಿ, ಪರೀಕ್ಷೆ ನಡೆಸಬೇಕು ಎಂದು ಹೇಳಲಾಗಿದೆ. ಮುಖ್ಯ ಪರೀಕ್ಷೆಯಂತೆಯೇ ಸಿದ್ಧತಾ ಪರೀಕ್ಷೆಯೂ ಪಾರದರ್ಶಕವಾಗಿ ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಮಾರ್ಗದರ್ಶನ ಮಾಡುವ ಹೊಣೆ ಜಿಲ್ಲಾ ಉಪನಿರ್ದೇಶಕರದ್ದಾಗಿದ್ದಾಗಿದೆ ಎನ್ನಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮತ್ತಿತರ ಪ್ರಕರಣಗಳು ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದ್ದು, ಪರೀಕ್ಷೆ ಮುಕ್ತಾಯವಾದ ಮರುದಿನವೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಪರೀಕ್ಷೆ ಮಾರ್ಚ್​ 18ರಿಂದ ಆರಂಭವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ – Kannada News | AI Helmet Revolutionizes Bangalore Traffic Enforcement: Viral Tech

ಬೆಂಗಳೂರು, ಜ.5: ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಗೆ ಸಂಬಂಧಿಸಿದಂತೆ ಹಲವು  ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕಿಗೆ ಬರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್​​ ಇಲಾಖೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ಜನ ಪೊಲೀಸರ ಕಣ್ತಪ್ಪಿಸಿ ಸಂಚಾರ ಉಲ್ಲಂಘನೆ ಮಾಡುತ್ತಾರೆ. ಆದರೆ ಇನ್ಮುಂದೆ ಇದು ಸಾಧ್ಯವಿಲ್ಲ, ಹೊಸ ತಂತ್ರಜ್ಞಾನವೊಂದು ಪರಿಚಯಿಸಿಲಾಗಿದೆ. ನಗರದಲ್ಲಿನ ಸಂಚಾರ ಶಿಸ್ತಿನ ಕಳಪೆ ಸ್ಥಿತಿಯಿಂದ ಬೇಸತ್ತ ಬೆಂಗಳೂರು ಮೂಲದ ತಂತ್ರಜ್ಞನೊಬ್ಬರು ಕೃತಕ ಬುದ್ಧಿಮತ್ತೆ ಮೂಲಕ ಹೆಲ್ಮೆಟ್​​ನ್ನು (AI helmet) ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ನಾನು ಪ್ರತಿದಿನ ಕೆಲವೊಂದು ಜನ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚಾರ ಮಾಡುವುದನ್ನು ನೋಡಿದ್ದೇನೆ. ಇದನ್ನು ನೋಡಿ ನೋಡಿ ಸಾಕಾಗಿದೆ. ಅದಕ್ಕಾಗಿ ನನ್ನ ಹೆಲ್ಮೆಟ್​​ನ್ನು ಎಐ ಸಾಧನವಾಗಿ ಪರಿವರ್ತನೆ ಮಾಡಿ, ಈ ಮೂಲಕ ಪೊಲೀಸರಿಗೆ ಸಂಚಾರ ನಿಯಮ ಉಲ್ಲಂಘಿಸಿದವರ ಮಾಹಿತಿ ನೀಡಲು ಸಹಾಯವಾಗುತ್ತದೆ ಎಂದು ಪಂಕಜ್ ತನ್ವರ್ ತನ್ನ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಎಐ ತಂತ್ರಜ್ಞಾನ ನೈಜ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಹಾಗೂ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದವರ ವಾಹನ ಹಾಗೂ ಮುಖವನ್ನು ಸೆರೆಹಿಡಿಯುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ?

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಈ ಸಾಧನವೂ ಸ್ಥಳ ಮತ್ತು ನಂಬರ್ ಪ್ಲೇಟ್‌ನೊಂದಿಗೆ ನೇರವಾಗಿ ಪೊಲೀಸರಿಗೆ ಸಂಪರ್ಕವನ್ನು ಸಾಧಿಸುತ್ತದೆ. ಬೆಂಗಳೂರಿನ ಜನರೇ, ಈಗ ಸುರಕ್ಷಿತವಾಗಿ ಸವಾರಿ ಮಾಡಿ ಎಂದು ಈ ಪೋಸ್ಟ್​​ನಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್​​ ಓಡಿಸುವವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಕೂಡ ಕಮೆಂಟ್​ ಮಾಡಿದ್ದಾರೆ. ಈ ಪೋಸ್ಟ್​ 1.5 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಇದೊಂದು ಉತ್ತಮ ತಂತ್ರಜ್ಞಾನ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ಇಂತಹ ತಂತ್ರಜ್ಞಾನಗಳು ಬರಬೇಕು. ಇದನ್ನು ಸರ್ಕಾರ ಬಳಸಿಕೊಂಡು ಸಂಚಾರ ನಿಮಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರುವಾಗಿದೆ ಭಯ – Kannada News | Bigg Boss Kannada: Rakshitha Shetty’s Secret Love for Gilli? Sudeep Questions Bond

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಪರವಾಗಿ ಮೊದಲಿನಿಂದಲೂ ನಿಲ್ಲುತ್ತಾ ಬಂದಿರೋದು ಗಿಲ್ಲಿ ನಟ. ಇದಕ್ಕಾಗಿ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಇಬ್ಬರ ಮಧ್ಯೆ ಈಗ ಉತ್ತಮ ಬಾಂಡಿಂಗ್ ಬೆಳೆದಿದೆ. ಗಿಲ್ಲಿ ನಟ ಅವರ ಮೇಲೆ ರಕ್ಷಿತಾಗೆ ಸೀಕ್ರೆಟ್ ಲವ್ ಬೆಳೆದಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಯನ್ನು ಸುದೀಪ್ ಕೂಡ ಎತ್ತಿದ್ದಾರೆ. ಇದರಿಂದ ಗಿಲ್ಲಿಗೆ ನಡುಕ ಶುರುವಾಗಿದೆ.

ಯೆಸ್ ಆರ್ ನೋ ಸೆಷನ್ ವೇಳೆ ರಕ್ಷಿತಾಗೆ ಕಿತಾಪತಿ ಮಾಡೋ ಹುಡುಗರು ಎಂದರೆ ತುಂಬಾ ಇಷ್ಟ’ ಎಂದು ಸುದೀಪ್ ಕೇಳಿದರು. ಇದಕ್ಕೆ ರಕ್ಷಿತಾ ಶೆಟ್ಟಿ ನಾಚಿ ನೀರಾದರು. ‘ಗಿಲ್ಲಿ ಈ ಮನೆಯಲ್ಲಿ ಹೆಚ್ಚು ಕಿತಾಪತಿ ಮಾಡುತ್ತಾರೆ. ಅವರು ಯಾವಾಗಲೂ ಗಂಭೀರವಾಗಿ ಇರೋದಿಲ್ಲ. ಅದಕ್ಕೆ ನಂಗೆ ಗಿಲ್ಲಿ ಅಂದ್ರೆ ಇಷ್ಟ’ ಎಂದರು ರಕ್ಷಿತಾ.

ಈ ವಿಷಯ ಗಿಲ್ಲಿಗೆ ಸರಿಯಾಗಿ ಗೊತ್ತಿಲ್ಲರಲಿಲ್ಲ ಎನಿಸುತ್ತದೆ. ‘ಜೀವನದಲ್ಲಿ ರಾಂಗ್ ಕನೆಕ್ಷನ್ ಆಗಿದೆ ಎಂದು ಅನಿಸುತ್ತಿದೆ’ ಎಂದರು. ಆಗ ಸ್ಪಂದನಾ ಅವರು, ‘ಗಿಲ್ಲಿ ಮೊದಲ ಬಾರಿಗೆ ನಗುತ್ತಾ ಇಲ್ಲ’ ಎಂದರು. ಆ ಸಂದರ್ಭದಲ್ಲಿ ಗಿಲ್ಲಿ ಮುಖ ತುಂಬಾನೇ ಗಂಭೀರವಾಗಿತ್ತು.

‘ಜಾಸ್ತಿ ಯೋಚಿಸದೆ ಇರುವ, ಸೆನ್ಸ್ ಆಫ್ ಹ್ಯೂಮರ್ ಇರುವವರು ಇಷ್ಟ ಆಗುತ್ತಾರೆ. ಹೀಗಾಗಿ ಗಿಲ್ಲಿ ನಂಗೆ ಇಷ್ಟ’ ಎಂದರು ರಕ್ಷಿತಾ. ಈ ಮೊದಲು ಕೂಡ ಅವರು, ‘ಗಿಲ್ಲಿ ರೀತಿಯ ಹುಡುಗ ಬೇಕು’ ಎಂದು ಹೇಳಿದ್ದರು. ರಕ್ಷಿತಾ ಶೆಟ್ಟಿಯ ಮಾತು ಕೇಳಿ ಗಿಲ್ಲಿಗೆ ನಡುಕ ಶುರುವಾಗಿದೆ. ‘ನಂಗೆ ಬೆಳಿಗ್ಗೆ ಇಂದ ಏಕೋ ಮಿಸ್ ಹೊಡೆಯುತ್ತಿದೆ ಎಂದಿದ್ದಾರೆ. ಅವರು ಈ ಸಂದರ್ಭದಲ್ಲಿ ಭಯದಲ್ಲಿ ಕುಳಿತಿದ್ದರು. ಅವರ ಮುಖ ನೋಡಿ ಎಲ್ಲರಿಗೂ ನಗು ಬಂದಿದೆ.

ಇದನ್ನೂ ಓದಿ: ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು?

ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟ ಅವರ ಮಧ್ಯೆ ಇರೋ ಬಾಂಡ್ ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕವೂ ಮುಂದುವರಿಯುತ್ತದೆಯೇ ಎಂಬುದು ಸದ್ಯದ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೈದರಾಬಾದ್​​ನ ಅಲ್ಲು ಅರ್ಜುನ್ ಹೊಸ ಥಿಯೇಟರ್​​ನಲ್ಲಿ ಇಬ್ಬರು ಕನ್ನಡ ನಿರ್ದೇಶಕರ ಫೋಟೋ – Kannada News | Allu Cinemas: Allu Arjun’s Kokapet Multiplex Honors Rishab, Prashanth Neel

ಅಲ್ಲು ಅರ್ಜುನ್ (Allu Arjun) ಅವರು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್ ಹೊಂದಿದ್ದಾರೆ. ‘ಅಲ್ಲು ಸಿನಿಮಾಸ್’ ಅನ್ನೋದು ಇದರ ಹೆಸರು. ಹೈದರಾಬಾದ್​​ನಲ್ಲಿ ಇದು ತನ್ನ ಶಾಖೆ ಹೊಂದಿದೆ. ಅಲ್ಲ ಅರ್ಜುನ್ ಈ ಮಲ್ಟಿಪ್ಲೆಕ್ಸ್​ ಚೈನ್ ಅನ್ನು ವಿಸ್ತರಿಸುವ ಪ್ರಯತ್ನದಲ್ಲಿ ಇದ್ದಾರೆ. ಈಗ ಅವರು ಹೈದರಾಬಾದ್ ಹೊರವಲಯದಲ್ಲಿರುವ ಕೋಕಾಪೇಟ್​​ನಲ್ಲಿ ಹೊಸ ಥಿಯೇಟರ್​ ಕಟ್ಟಿದ್ದಾರೆ. ಸಂಕ್ರಾಂತಿಯಂದು ಇದು ಆರಂಭ ಆಗಲಿದೆ. ಇದರಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ.

ಇತ್ತೀಚೆಗೆ ನಿರ್ಮಾಣ ಆಗುತ್ತಿರುವ ಮಲ್ಟಿಪ್ಲೆಕ್ಸ್​​ಗಳನ್ನು ಅಂದಗಾಣಿಸಲು ನಾನಾ ತಂತ್ರ ಬಳಸಲಾಗುತ್ತಿದೆ. ಐಕಾನಿಕ್ ಸಿನಿಮಾ ಹೆಸರುಗಳನ್ನು ಬರೆಯೋದು, ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ತೆಗೆದ ಅಪರೂಪದ ಫೋಟೋಗಳನ್ನು ಫ್ರೇಮ್ ಹಾಕಿಸೋದು ಅಥವಾ ಖ್ಯಾತ ನಿರ್ದೇಶಕರು/ನಟರ ಫೋಟೋಗಳನ್ನು ಹಾಕೋದನ್ನು ಮಾಡಲಾಗುತ್ತದೆ. ಈಗ ಅಲ್ಲು ಅರ್ಜುನ್ ಕೂಡ ಇದನ್ನೇ ಮಾಡಿದ್ದಾರೆ.

ಕೋಕಾಪೇಟ್​​ನಲ್ಲಿ ನಿರ್ಮಾಣ ಆಗಿರುವ ‘ಅಲ್ಲು ಸಿನಿಮಾಸ್​’ ಒಳಭಾಗದ ಗೋಡೆಯ ಮೇಲೆ ಹಲವು ನಿರ್ದೇಶಕರ ಫೋಟೋಗಳಿವೆ. ಇದರಲ್ಲಿ ಕನ್ನಡದ ರಿಷಬ್ ಶೆಟ್ಟಿ ಹಾಗೂ ಪ್ರಶಾಂತ್ ನೀಲ್ ಫೋಟೋ ಕೂಡ ಇದೆ. ತೆಲುಗು ನಿರ್ದೇಶಕರಾದ ರಾಜಮೌಳಿ, ಸುಕುಮಾರ್, ತ್ರಿವಿಕ್ರಂ ಶ್ರೀನಿವಾಸ್ ಫೋಟೋಗಳಿವೆ. ತಮಿಳಿನ ಮಣಿರತ್ನಂ, ವೆಟ್ರಿಮಾರನ್, ಅಟ್ಲೀ ಭಾವಚಿತ್ರ ಹಾಕಲಾಗಿದೆ. ಹಿಂದಿಯ ರಾಜ್​ಕುಮಾರ್ ಹಿರಾನಿ, ಸಂದೀಪ್ ರೆಡ್ಡಿ ವಂಗ ಸೇರಿದಂತೆ ಇನ್ನೂ ಕೆಲವು ನಿರ್ದೇಶಕರ ಫೋಟೋಗಳು ಇವೆ. ಈ ವಿಡಿಯೋ ವೈರಲ್ ಆಗುತ್ತಿದೆ. ಕನ್ನಡಿಗರಿಂದ ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ರಿಷಬ್ ಶೆಟ್ಟಿ ಹಾಗೂ ಪ್ರಶಾಂತ್ ನೀಲ್ ಹೆಸರು ತೆಲುಗು ಮಂದಿಗೂ ತಿಳಿದಿದೆ. ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಸರಣಿ ಸಿನಿಮಾ ನಿರ್ದೇಶಿಸಿ ಫೇಮಸ್ ಆದವರು. ತೆಲುಗಿನಲ್ಲೂ ಸಿನಿಮಾ ಮಾಡಿದ್ದಾರೆ ಮತ್ತು ಮಾಡುತ್ತಿದ್ದಾರೆ. ರಿಷಬ್ ಅವರು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ತೆಲುಗು ರಾಜ್ಯಗಳಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಕಾರಣದಿಂದ ಇವರ ಫೋಟೋಗಳನ್ನು ಹಾಕಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ಅಲ್ಲು ಅರ್ಜುನ್ ಎಷ್ಟನೇ ಆರೋಪಿ?

ಅಲ್ಲು ಸಿನಿಮಾಸ್ ಸಂಕ್ರಾಂತಿಗೆ ಆರಂಭ ಆಗುವ ಸಾಧ್ಯತೆ ಇದೆ. 75 ಅಡಿಯ ಸ್ಕ್ರೀನ್​ನ ಇದು ಹೊಂದಿದೆ ಎನ್ನಲಾಗಿದೆ. ಒಳ್ಳೆಯ ಅನುಭವ ಪಡೆಯಲು ಮಲ್ಟಿಪ್ಲೆಕ್ಸ್ ಸಹಕಾರಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:35 am, Mon, 5 January 26

Source link

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Creates Unwanted Record in BBL

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

Published On – 7:40 am, Mon, 5 January 26

Source link

Video: ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್​ ಪೊಲೀಸ್​​ಗೆ ಆವಾಜ್ ಹಾಕಿದ ಆಟೋ ಡ್ರೈವರ್ – Kannada News | Unusual Standoff in Hyderabad as Auto Driver Intimidates Police During Check

ಹೈದರಾಬಾದ್, ಜನವರಿ 05: ಆಟೋ ಡ್ರೈವರ್ ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸುವ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್​ನ ಹಳೆಯ ನಗರದ ಚಂದ್ರಾಯನಗುಟ್ಟ ಕ್ರಾಸ್​ರೋಡ್ಸ್​​ನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದಾಗ, ಈ ಚಾಲಕನಿದ್ದ ಆಟೋವನ್ನು ಕೂಡ ನಿಲ್ಲಿಸಿದ್ದಾರೆ. ಆಗ ಕೋಪಗೊಂಡ ಚಾಲಕ ಕೈಯಲ್ಲಿ ಜೀವಂತ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸಿದ್ದಾರೆ.
ಜನನಿಬಿಡ ಜಂಕ್ಷನ್‌ನಲ್ಲಿ ಭೀತಿ ಸೃಷ್ಟಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಚಾಲಕ ಆರಂಭದಲ್ಲಿ ಸಂಚಾರ ಪೊಲೀಸರಿಗೆ ಕೈಮುಗಿದು ಕ್ಷಮೆಯಾಚಿಸಿ ತನ್ನ ವಾಹನವನ್ನು ಹಿಂತಿರುಗಿಸುವಂತೆ ವಿನಂತಿಸುತ್ತಿರುವುದನ್ನು ನೋಡಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link