All posts by nagaraj11081993

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು.

Source link

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ತಮ್ಮ ಎಕ್ಸ್​​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ, ತಮಿಳು ಮಾತನಾಡುವ ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆಗಾಗಿ ಈ ಮಸೂದೆಯನ್ನು ತರಲಾಗಿದೆ. ಹಕ್ಕು ರಕ್ಷಣೆಗೆ ಮಸೂದೆಯ ಸೆಕ್ಷನ್ 7ರಲ್ಲಿ ರಕ್ಷಣಾತ್ಮಕ ನಿಯಮ ಅಳವಡಿಕೆ ಮಾಡಲಾಗಿದೆ. ಸಚಿವಾಲಯ, ಇಲಾಖೆ ಮುಖ್ಯಸ್ಥರ ಜತೆ ಪತ್ರ ವ್ಯವಹಾರವನ್ನು ಕೂಡ ತಮ್ಮ ಭಾಷೆಯಲ್ಲೇ ನಡೆಸಬಹುದು ಎಂದು ಹೇಳಿದ್ದಾರೆ. ಕಚೇರಿಗಳಲ್ಲೂ ತಮ್ಮ ಮಾತೃಭಾಷೆಯಲ್ಲೇ ಪತ್ರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಕೇರಳ ಸಚಿವಾಲಯ ಹಾಗೂ ಕಚೇರಿಗಳ ನಿಮ್ಮ ಭಾಷೆಯಲ್​ಲೇ ಉತ್ತರಿಸುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮದ ಅನ್ವಯ ಲಭ್ಯವಿರುವ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಭಾರತೀಯ ಸಂವಿಧಾನದ 346 ಮತ್ತು 347ನೇ ವಿಧಿಗಳು ಹಾಗೂ 1963ರ ಅಧಿಕೃತ ಭಾಷಾ ಕಾಯ್ದೆಗೆ ಈ ಭಾಷಾ ನೀತಿ ಅನುಗುಣವಾಗಿದೆ. ಕೇರಳ ಸರ್ಕಾರ ಒಕ್ಕೂಟ ವ್ಯವಸ್ಥೆಯ ಹಕ್ಕುಗಳನ್ನು ಎತ್ತಿಹಿಡಿಯುತ್ತಿದೆ. ಪ್ರತಿಯೊಬ್ಬ ನಾಗರಿಕನ ಭಾಷಾ ಗುರುತನ್ನು ರಕ್ಷಿಸಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?

ಮಲಯಾಳ ಭಾಷಾ ಮಸೂದೆಯಲ್ಲೇನಿದೆ?

ಈ ಮಸೂದೆ ಕೇರಳದಾದ್ಯಂತ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಮಸೂದೆ. 016 ರಲ್ಲಿ ಮಂಡಿಸಲಾದ ಈ ಮಸೂದೆಯನ್ನು ಭಾಷಾ ಅಲ್ಪಸಂಖ್ಯಾತರಿಗೆ ವಿರುದ್ದವಾಗಿದೆ ಎಂದು ಅಂದಿನ ರಾಜ್ಯಪಾಲರು ತಿರಸ್ಕರಿಸಿದ್ದರು. 1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮ ಶಾಲೆಯೂ ಸೇರಿದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯಗೊಳಿಸುವುವ ಬಗ್ಗೆ ಈ ಮಸೂದೆಯಲ್ಲಿ ಉಲ್ಲೇಖವಾಗಿದೆ. ರಾಜ್ಯಪಾಲರು ತಿರಸ್ಕರಿಸಿದ್ದ ನಂತರ ಇದರಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದು, ಮತ್ತೆ ಈ ಮಸೂದೆಯನ್ನು ಮಂಡಿಸಲು ಮುಂದಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಲು ಬಯಸಿದರೆ ಈ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ – Kannada News | Follow these habits if you want to live a healthy and long life

ದೀರ್ಘಾಯುಷ್ಯವನ್ನು (longevity) ಹೊಂದಲು, ಯಂಗ್‌ ಮತ್ತು ಆರೋಗ್ಯವಂತರಾಗಿರಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರೂ ಸಹ ಯಾವುದೇ ಆರೋಗ್ಯ ಸಮಸ್ಯೆಯಿಲ್ಲದೆ ನೂರ್ಕಾಲ ಬದುಕಬೇಕು ಎಂದು ಬಯಸುತ್ತಾರೆ. ಆದರೆ ಇಂದಿನ ಈ ಕಾಲದಲ್ಲಿ ಅನಾರೋಗ್ಯಕರ ಆಹಾರ ಪದ್ಧತಿ, ಕಳಪೆ ಜೀವನಶೈಲಿ ಇವೆಲ್ಲದರ ಕಾರಣದಿಂದಾಗಿ 30-40 ವರ್ಷಕ್ಕೆ ಆರೋಗ್ಯ ಕೈಕೊಡುತ್ತಿದೆ ಜೊತೆಗೆ ಆದರ್ಶ ಜೀವಿತಾವಧಿಯೂ ಕಡಿಮೆಯಾಗುತ್ತಿದೆ.  ಹಾಗಾದರೆ, ದೀರ್ಘಾಯುಷ್ಯವನ್ನು ಪಡೆಯಲು, ಆರೋಗ್ಯವಂತರಾಗಿ ನೂರ್ಕಾಲ ಬಾಳಲು  ಏನು ಮಾಡಬೇಕು? ಈ ಕೆಲವೊಂದು ಅಭ್ಯಾಸಗಳನ್ನು ಪ್ರತಿನಿತ್ಯ ಪಾಲಿಸುವ ಮೂಲಕ ಆರೋಗ್ಯ ಸಮಸ್ಯೆಗಳು ನಿಮ್ಮ ಬಳಿ ಸುಳಿಯದಂತೆ ನೋಡಿಕೊಳ್ಳಬಹುದು, ಆರೋಗ್ಯವಂತರಾಗಿ ದೀರ್ಘಕಾಲ ಜೀವನ ನಡೆಸಬಹುದು. ದೀರ್ಘಾಯುಷ್ಯಕ್ಕೆ ಸಹಕಾರಿಯಾದ ಆ ಅಭ್ಯಾಸಗಳು ಯಾವುದೆಂದು ನೋಡೋಣ ಬನ್ನಿ.

ದೀರ್ಘಕಾಲ ಬದುಕಲು ಏನು ಮಾಡಬೇಕು?

ಆರೋಗ್ಯಕರ ಆಹಾರ ಕ್ರಮ ಅನುಸರಿಸಿ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಸೇವನೆ ಅತ್ಯಗತ್ಯ. ನಿಮ್ಮ ಆಹಾರದಲ್ಲಿ ಹಸಿರು ತರಕಾರಿಗಳು, ಹಣ್ಣುಗಳು, ಧಾನ್ಯಗಳು, ಪ್ರೋಟೀನ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರಗಳು ಇರಬೇಕು. ಜಂಕ್ ಫುಡ್ ಮತ್ತು ಎಣ್ಣೆ ಮತ್ತು ಸಕ್ಕರೆ ಅಧಿಕವಾಗಿರುವ ಆಹಾರಗಳನ್ನು ತಪ್ಪಿಸಿ.

ನಿಯಮಿತವಾಗಿ ವ್ಯಾಯಾಮ ಮಾಡಿ: ದೈಹಿಕ ಚಟುವಟಿಕೆಯು ನಿಮ್ಮ ಆರೋಗ್ಯಕ್ಕೆ ಅತ್ಯಗತ್ಯ. ನಿಯಮಿತ ವ್ಯಾಯಾಮವು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ನಿಮ್ಮ ಹೃದಯ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಡೆಯುವುದು, ಯೋಗ ಮಾಡುವುದು ಅಥವಾ ಇತರ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಿಮ್ಮ ಜೀವಿತಾವಧಿಯನ್ನು ಹೆಚ್ಚಿಸಬಹುದು.

ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ:  ದೈಹಿಕ ಆರೋಗ್ಯದಷ್ಟೇ ನಿಮ್ಮ ಮಾನಸಿಕ ಆರೋಗ್ಯವನ್ನು ನೋಡಿಕೊಳ್ಳುವುದು ಮುಖ್ಯ. ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡಲು ಧ್ಯಾನ ಮತ್ತು ಪ್ರಾಣಾಯಾಮವನ್ನು ಅಭ್ಯಾಸ ಮಾಡಿ. ಅಲ್ಲದೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದರಿಂದ ನೀವು ಸಂತೋಷ ಮತ್ತು ಆರೋಗ್ಯವಾಗಿರಬಹುದು.

ಸಾಕಷ್ಟು ನಿದ್ರೆ ಪಡೆಯಿರಿ: ಉತ್ತಮ ಮತ್ತು ಸಾಕಷ್ಟು ನಿದ್ರೆ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ಮನಸ್ಸನ್ನು ಉಲ್ಲಾಸಗೊಳಿಸುತ್ತದೆ. ವಯಸ್ಕರು ಪ್ರತಿದಿನ 7-8 ಗಂಟೆಗಳ ಕಾಲ ನಿದ್ರೆ ಮಾಡಬೇಕು. ನಿದ್ರೆಯ ಕೊರತೆಯು ಹೃದಯ ಕಾಯಿಲೆ, ಬೊಜ್ಜು ಮತ್ತು ಖಿನ್ನತೆಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು, ಇದು ನಿಮ್ಮ ಜೀವಿತಾವಧಿಯ ಮೇಲೆ ಪರಿಣಾಮ ಬೀರುತ್ತದೆ.

ಧೂಮಪಾನ ಮತ್ತು ಮದ್ಯಪಾನ ತ್ಯಜಿಸಿ: ಧೂಮಪಾನ ಮತ್ತು ಅತಿಯಾದ ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಈ ಅಭ್ಯಾಸಗಳು ಹೃದಯ ಕಾಯಿಲೆ, ಕ್ಯಾನ್ಸರ್ ಮತ್ತು ಯಕೃತ್ತಿನ ಸಮಸ್ಯೆಗಳನ್ನು ಉಂಟುಮಾಡಬಹುದು. ನೀವು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಬಯಸಿದರೆ, ಅವುಗಳಿಂದ ಸಾಧ್ಯವಾದಷ್ಟು ದೂರವಿರಿ.

ನಿಯಮಿತ ವೈದ್ಯಕೀಯ ತಪಾಸಣೆ: ನಿಮ್ಮ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ಮತ್ತು ಯಾವುದೇ ಕಾಯಿಲೆಗಳಿಗೆ ಸಕಾಲಿಕ ಚಿಕಿತ್ಸೆ ಪಡೆಯಲು ವೈದ್ಯರೊಂದಿಗೆ ನಿಯಮಿತ ಸಮಾಲೋಚನೆಗಳು ಮತ್ತು ತಪಾಸಣೆಗಳು ಅತ್ಯಗತ್ಯ. ಇದು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

ಸಮಾಜದೊಂದಿಗೆ ಸಂಪರ್ಕದಲ್ಲಿರಿ: ಸಾಮಾಜಿಕ ಸಂಬಂಧಗಳು, ಸಂಪರ್ಕಗಳು  ನಿಮ್ಮ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಸಾಮಾಜಿಕ ಜೀವನದಲ್ಲಿ ಸಕ್ರಿಯರಾಗಿರುವುದು ನಿಮ್ಮನ್ನು ಸಂತೋಷ ಮತ್ತು ಮಾನಸಿಕವಾಗಿ ಸಮತೋಲನದಲ್ಲಿರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದು ನಿಮ್ಮ ಜೀವನದಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ, ಇದು ನಿಮ್ಮ ಜೀವಿತಾವಧಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಸೂರ್ಯನ ಬೆಳಕಿನಿಂದ ವಿಟಮಿನ್‌ ಡಿ ಪಡೆಯುವ ಸರಿಯಾದ ಮಾರ್ಗ ಯಾವುದು? 90% ಜನರಿಗೆ ಇದು ಗೊತ್ತೇ ಇಲ್ಲ

ಸಕಾರಾತ್ಮಕವಾಗಿ ಯೋಚಿಸಿ: ಸಕಾರಾತ್ಮಕವಾಗಿ ಯೋಚಿಸುವುದರಿಂದ ನೀವು ಹೆಚ್ಚು ಕಾಲ ಬದುಕಲು ಸಹಾಯವಾಗುತ್ತದೆ. ಹಲವಾರು ಅಧ್ಯಯನಗಳು ಸಕಾರಾತ್ಮಕವಾಗಿರುವುದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತೋರಿಸಿವೆ. ನೀವು ಜೀವನದ ಬಗ್ಗೆ ಹೆಚ್ಚು ಸಕಾರಾತ್ಮಕ ಮತ್ತು ಆಶಾವಾದಿಗಳಾಗಿದ್ದಷ್ಟೂ, ನೀವು ಕಡಿಮೆ ಅನಾರೋಗ್ಯವನ್ನು ಅನುಭವಿಸುತ್ತೀರಿ ಮತ್ತು  ಹೆಚ್ಚು ಕಾಲ ಆರೋಗ್ಯವಂತರಾಗಿ ಬದುಕುತ್ತೀರಿ.

ದೀರ್ಘಾಯುಷ್ಯ ಸಾಧಿಸಲು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಸರಿಯಾಗಿ ಸಮತೋಲಿತ ಆಹಾರವನ್ನು ಸೇವನೆ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ, ಆರೋಗ್ಯಕರ ಆಹಾರ ಮತ್ತು ಸಕಾರಾತ್ಮಕ ಮನಸ್ಥಿತಿಯು ದೀರ್ಘಾಯುಷ್ಯವನ್ನು ಪಡೆಯಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ – Kannada News | Yash mother explains why she visited police station see video

ಯಶ್ (Yash) ಅವರ ತಾಯಿ, ನಿರ್ಮಾಪಕಿಯೂ ಆಗಿರುವ ಪುಷ್ಪ ಅವರು ಇಂದು (ಜನವರಿ 10) ಹಾಸನದ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೆ ಅವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ವ್ಯಕ್ತಿಯೊಬ್ಬರು ಹೊಡೆದು ಹಾಕಿದ್ದರು. ಅದರ ಬಗ್ಗೆ ದೂರು ಸಹ ದಾಖಲಾಗಿತ್ತು. ಅದರ ಬೆನ್ನಲ್ಲೆ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಠಾಣಾ ಭೇಟಿಯ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಪುಷ್ಪ ಅವರು, ತಾವು ಠಾಣೆಗೆ ಭೇಟಿ ನೀಡಿದ್ದೇಕೆ ಎಂದು ವಿವರಿಸಿದ್ದಾರೆ. ಮಾಹಿತಿಗಾಗಿ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಒಡಿಶಾದ ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ – Kannada News | Aircraft crashes near Odisha’s Rourkela airstrip in Odisha including Pilot 6 injured

ನವದೆಹಲಿ, ಜನವರಿ 10: ಒಡಿಶಾದ (Odisha) ರೂರ್ಕೆಲಾ ವಾಯುನೆಲೆಯಿಂದ 9 ಕಿಲೋಮೀಟರ್ ದೂರದಲ್ಲಿ ಸಣ್ಣ ವಿಮಾನವೊಂದರಲ್ಲಿ ಹಾರಾಟದ ವೇಳೆ ತಾಂತ್ರಿಕ ದೋಷ ಕಂಡುಬಂದ ನಂತರ ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಪೈಲಟ್ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಭುವನೇಶ್ವರದಿಂದ ರೂರ್ಕೆಲಾಗೆ ಹಾರುತ್ತಿದ್ದ 9 ಆಸನಗಳ ವಿಮಾನ ಇದಾಗಿತ್ತು. ಈ ವಿಮಾನದಲ್ಲಿ 4 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಅವರನ್ನು ಕ್ಯಾಪ್ಟನ್ ನವೀನ್ ಕಡಂಗ ಮತ್ತು ಕ್ಯಾಪ್ಟನ್ ತರುಣ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಅವರೆಲ್ಲರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

UPW vs GG Live Score, WPL 2026: 208 ರನ್ ಟಾರ್ಗೆಟ್ ನೀಡಿದ ಗುಜರಾತ್ – Kannada News | UPW vs GG Live Score today WPL 2026 match scorecard, Women’s Premier League UP Warriorz vs Gujarat Giants Match 02 In Kannada

  • 10 Jan 2026 04:35 PM (IST)

    UPW vs GG Live Score: 207 ರನ್ ಗುರಿ

    ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 207 ರನ್ ಗಳಿಸಿತು. ಜಾರ್ಜಿಯಾ ವೇರ್‌ಹ್ಯಾಮ್ 27 ರನ್ ಮತ್ತು ಭಾರ್ತಿ ಫುಲ್ಮಾಲಿ 14 ರನ್ ಗಳಿಸಿ ಅಜೇಯರಾಗಿ ಉಳಿದರು.

  • 10 Jan 2026 04:17 PM (IST)

    UPW vs GG Live Score: 17 ಓವರ್‌ ಪೂರ್ಣ

    ಗುಜರಾತ್ ಜೈಂಟ್ಸ್ ತಂಡ 17 ಓವರ್‌ಗಳಲ್ಲಿ 3 ವಿಕೆಟ್‌ಗೆ 167 ರನ್ ಗಳಿಸಿದೆ. ಆಶ್ಲೇ ಗಾರ್ಡ್ನರ್ (37 ಎಸೆತಗಳಲ್ಲಿ 60) ಮತ್ತು ಜಾರ್ಜಿಯಾ ವೇರ್‌ಹ್ಯಾಮ್ (6) ಕ್ರೀಸ್‌ನಲ್ಲಿದ್ದಾರೆ.

  • 10 Jan 2026 04:01 PM (IST)

    UPW vs GG Live Score: 10 ಓವರ್‌ ಪೂರ್ಣ

    ಗುಜರಾತ್ ಜೈಂಟ್ಸ್ 10 ಓವರ್‌ಗಳಲ್ಲಿ 2 ವಿಕೆಟ್‌ಗೆ 90 ರನ್ ಗಳಿಸಿದೆ. ಆಶ್ಲೇ ಗಾರ್ಡ್ನರ್ (12) ಮತ್ತು ಅನುಷ್ಕಾ ಶರ್ಮಾ (23) ಕ್ರೀಸ್‌ನಲ್ಲಿದ್ದಾರೆ.

  • 10 Jan 2026 03:14 PM (IST)

    UPW vs GG Live Score: ಸೋಫಿ ಸಿಕ್ಸರ್

    ಶಿಖಾ ಪಾಂಡೆ ಎಸೆದ ಮೊದಲ ಓವರ್‌ನಲ್ಲಿ 14 ರನ್‌ಗಳು ಬಂದವು. ಗುಜರಾತ್ ಜೈಂಟ್ಸ್ ತಂಡವು ತನ್ನ ಎರಡನೇ ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 17 ರನ್ ಗಳಿಸಿದೆ.

  • 10 Jan 2026 03:04 PM (IST)

    UPW vs GG Live Score: ಯುಪಿ ತಂಡ

    ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್ (ನಾಯಕಿ), ಫೋಬೆ ಲಿಚ್‌ಫೀಲ್ಡ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಕಿರಣ್ ನವಗಿರೆ, ಶ್ವೇತಾ ಸೆಹ್ರಾವತ್ (ವಿಕೆಟ್ ಕೀಪರ್), ಆಶಾ ಸೋಭಾನಾ, ಸೋಫಿ ಎಕ್ಲೆಸ್ಟೋನ್, ಶಿಖಾ ಪಾಂಡೆ, ಕ್ರಾಂತಿ ಗೌಡ್.

  • 10 Jan 2026 03:04 PM (IST)

    UPW vs GG Live Score: ಗುಜರಾತ್ ತಂಡ

    ಸೋಫಿ ಡಿವೈನ್, ಬೆತ್ ಮೂನಿ (ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್ (ನಾಯಕಿ), ಜಾರ್ಜಿಯಾ ವೇರ್ಹ್ಯಾಮ್, ಅನುಷ್ಕಾ ಶರ್ಮಾ, ಕನಿಕಾ ಅಹುಜಾ, ಭಾರತಿ ಫುಲ್ಮಾಲಿ, ಕಾಶ್ವಿ ಗೌತಮ್, ತನುಜಾ ಕನ್ವರ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್ ಠಾಕೂರ್.

  • 10 Jan 2026 02:35 PM (IST)

    UPW vs GG Live Score: ಟಾಸ್ ಗೆದ್ದ ಯುಪಿ

    ಟಾಸ್ ಗೆದ್ದ ಯುಪಿ ವಾರಿರರ್ಸ್​ ನಾಯಕಿ ಮೆಗ್ ಲ್ಯಾನಿಂಗ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

  • Source link

    ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ – Kannada News | Siddaramaiah Is a Lease Based Chief Minister: HD Kumaraswamy

    ಬೆಂಗಳೂರು, ಜನವರಿ 10: ಸಿದ್ದರಾಮಯ್ಯ ಒಬ್ಬ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ದೇವರಾಜ ಅರಸು ದಾಖಲೆ ಮುರಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ದೇವರಾಜ ಅರಸು ದಾಖಲೆ ಮುರಿದೆ ಅಂತಾ ಹೇಳ್ತಿದ್ದಾರಲ್ಲಾ. ಹಿಂದೆ ಇಂದಿರಾಗಾಂಧಿ ವಿರುದ್ಧ ಅರಸು ಸೆಡ್ಡು ಹೊಡೆದು ನಿಂತಿದ್ದರು. ಈಗ ರಾಹುಲ್ ಗಾಂಧಿ ಯಾವಾಗ ಹೋಗು ಅಂತಾರೆ ಅಂತಾ ಕಾಯುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

    ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

    Source link

    ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ – Kannada News | Shiggavi Dowry Murder: Family Alleges Harassment in Sunita Doddamani’s Suspicious Death

    ಹಾವೇರಿ, ಜ.10: ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ ನೀಡಿದರು. ಪತಿ ಗಿರೇಶ ದೊಡ್ಡಮನಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಸುನೀತಾ ದೊಡ್ಡಮನಿ ಮನೆಯವರು ಆರೋಪಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯ ಮುಂದೆ ಆರೋಪಿಗಳ ಬಂಧನ ಮಾಡುವಂತೆ ಕುಟುಂಬದವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ವರದಿ: ಅಣ್ಣಪ್ಪ ಬಾರ್ಕಿ

    ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ಆಪರೇಷನ್ ಸಿಂಧೂರದಿಂದಾಗಿ ಪಾಕಿಸ್ತಾನ ಸಂವಿಧಾನವನ್ನೇ ಬದಲಾಯಿಸಿತು; ರಕ್ಷಣಾ ಮುಖ್ಯಸ್ಥ ಟೀಕೆ – Kannada News | Operation Sindoor exposed Pakistan failures forced it to change Constitution says Defence chief General Chauhan

    ನವದೆಹಲಿ, ಜನವರಿ 10: ಭಾರತದ ರಕ್ಷಣಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪಾಕಿಸ್ತಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿದ್ದುಪಡಿಗಳು ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಅದರ ವೈಫಲ್ಯವನ್ನು ಪ್ರದರ್ಶಿಸುತ್ತವೆ ಎಂದು ಹೇಳಿಟೀಕಿಸಿದ್ದಾರೆ. ಪಾಕಿಸ್ತಾನ ತನ್ನ ನ್ಯೂನತೆಗಳನ್ನು ಮರೆಮಾಡಲು ಬದಲಾವಣೆಗಳನ್ನು ಆರಂಭಿಸಿತು. ಇವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ಬಹಿರಂಗಗೊಂಡವು ಎಂದು ಅವರು ಹೇಳಿದ್ದಾರೆ.

    ಪುಣೆ ಸಾರ್ವಜನಿಕ ನೀತಿ ಉತ್ಸವದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಚೌಹಾಣ್, ಪಾಕಿಸ್ತಾನದಲ್ಲಿ ಮಾಡಲಾದ ಬದಲಾವಣೆಗಳು ಅನೇಕ ನ್ಯೂನತೆಗಳನ್ನು ಬಹಿರಂಗಪಡಿಸಿವೆ ಎಂದು ಹೇಳಿದ್ದಾರೆ. ಆತುರದಿಂದ ಮಾಡಿದ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಪಾಕಿಸ್ತಾನದಲ್ಲಿ ತರಲಾದ ಬದಲಾವಣೆಗಳು ವಾಸ್ತವವಾಗಿ ಈ ಕಾರ್ಯಾಚರಣೆಯಲ್ಲಿ ಅವರು ಅಂದುಕೊಂಡಿದ್ದು ಆಗಲಿಲ್ಲ ಎಂಬುದನ್ನು ಸಾರುತ್ತದೆ ಎಂದಿದ್ದಾರೆ.

    ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ

    ಪಾಕಿಸ್ತಾನದ ಸಂವಿಧಾನದ 243ನೇ ವಿಧಿಗೆ ತಿದ್ದುಪಡಿ ಮಾಡುವ ಮೂಲಕ ದೇಶದ ಉನ್ನತ ರಕ್ಷಣಾ ಸಂಸ್ಥೆಯಲ್ಲಿ ಭಾರೀ ಬದಲಾವಣೆಗಳಾಗಿವೆ. 3 ಸೇವೆಗಳ ನಡುವೆ ಜಂಟಿ ಮುಖ್ಯಸ್ಥರ (CDF) ಹುದ್ದೆಯನ್ನು ರದ್ದುಗೊಳಿಸಲಾಗಿದೆ ಎಂದು ಜನರಲ್ ಚೌಹಾಣ್ ವಿವರಿಸಿದ್ದಾರೆ.

    ಇತ್ತೀಚಿನ ಕಾರ್ಯಾಚರಣೆಗಳಿಂದ ಕಲಿತ ಪಾಠಗಳಿಂದ ಭಾರತದ ರಕ್ಷಣಾ ಯೋಜನೆ ಮತ್ತು ಉನ್ನತ ಕಮಾಂಡ್ ರಚನೆಗಳನ್ನು ಮಾರ್ಪಡಿಸಲಾಗಿದೆ. ಭಾರತವು ದೀರ್ಘಕಾಲೀನ ಮಿಲಿಟರಿ ಸಿದ್ಧತೆ ಮತ್ತು ಹೊಂದಾಣಿಕೆಯ ಕಾರ್ಯತಂತ್ರದ ಯೋಜನೆಯ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಜನರಲ್ ಚೌಹಾಣ್ ಹೇಳಿದ್ದಾರೆ.

    ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    U19 World Cup 2026: 7 ಸಿಕ್ಸರ್, 96 ರನ್..! ಅಭ್ಯಾಸ ಪಂದ್ಯದಲ್ಲೇ ಅಬ್ಬರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Shines with 96 for India U19 in World Cup Practice vs Scotland

    2026 ರ ಅಂಡರ್-19 ವಿಶ್ವಕಪ್ (U19 World Cup 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. 2026 ರ ಅಂಡರ್-19 ವಿಶ್ವಕಪ್ ಜನವರಿ 15 ರಂದು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಆರಂಭವಾಗುತ್ತದೆ. ಅದಕ್ಕೂ ಮೊದಲು, ಎಲ್ಲಾ ತಂಡಗಳು ಇಂದು ಅಂದರೆ ಜನವರಿ 10 ರಿಂದ ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಆ ಪ್ರಕಾರ ಭಾರತ ಯುವ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ (Vaibhav Suryavanshi) ಅಬ್ಬರದ ಇನ್ನಿಂಗ್ಸ್ ಆಡಿದರು. ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ತಂಡಗಳ ವಿರುದ್ಧ ವೈಭವ್ ಹೇಗೆ ಮಿಂಚಿದ್ದರೋ ಅದೇ ರೀತಿ ಸ್ಕಾಟ್ಲೆಂಡ್ ವಿರುದ್ಧವೂ ಸಿಕ್ಸರ್‌ಗಳ ಮಳೆಗರೆದಿದ್ದಾರೆ.

    ಪ್ರಸ್ತುತ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಫಾರ್ಮ್​ನಲ್ಲಿದ್ದಾರೆ. ಮೊದಲ ಬಾರಿಗೆ ವಿಶ್ವಕಪ್​ನಲ್ಲಿ ಭಾಗವಹಿಸುತ್ತಿರುವ ವೈಭವ್ ಮೇಲೆ ಭಾರತ ತಂಡ ಹೆಚ್ಚಿನ ಭರವಸೆಯನ್ನು ಹೊಂದಿದೆ. ಆ ಪ್ರಕಾರ 14 ವರ್ಷದ ವೈಭವ್, ಸ್ಕಾಟ್ಲೆಂಡ್ ವಿರುದ್ಧ ಬೌಂಡರಿ ಮತ್ತು ಸಿಕ್ಸರ್​ಗಳ ಮಳೆಗರೆದರು. ಆದರೆ ಕೇವಲ 4 ರನ್​ಗಳ ಅಂತರದಿಂದ ಶತಕದಿಂದ ವಂಚಿತರಾದರು.

    ಶತಕ ತಪ್ಪಿಸಿಕೊಂಡ ವೈಭವ್

    ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಎರಡು ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದ ವೈಭವ್, ಸ್ಕಾಟ್ಲೆಂಡ್ ವಿರುದ್ಧವೂ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್ ಬಹುತೇಕ ಪ್ರತಿ ಓವರ್‌ನಲ್ಲಿಯೂ ಬೌಂಡರಿ ಅಥವಾ ಸಿಕ್ಸರ್ ಬಾರಿಸಿದರು. ಇದರ ಪರಿಣಾಮವಾಗಿ ಶತಕದ ಸನಿಹಕ್ಕೂ ಬಂದರು. ಆದರೆ ಶತಕ ಪೂರೈಸಲು ಕೇವಲ ಒಂದು ಬೌಂಡರಿ ಮಾತ್ರ ಬೇಕಾಗಿದ್ದಾಗ ಎಡವಿದ ವೈಭವ್ ವಿಕೆಟ್ ಒಪ್ಪಿಸಿದರು.

    ಕೇವಲ 50 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಏಳು ಸಿಕ್ಸರ್‌ಗಳ ಸಹಿತ 96 ರನ್‌ ಬಾರಿಸಿದ ವೈಭವ್​ಗೆ ಇದು ಸತತ ಮೂರನೇ ಐವತ್ತು ಪ್ಲಸ್ ಸ್ಕೋರ್ ಆಗಿದೆ. ಇದಕ್ಕೂ ಮೊದಲು, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ 68 ಮತ್ತು 127 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇನ್ನು ಅಂಡರ್ ವಿಶ್ವಕಪ್​ನಲ್ಲಿ ಜನವರಿ 15 ರಂದು ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಭಾರತ, ಅಲ್ಲಿ ಅಮೆರಿಕ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲೂ ವೈಭವ್ ಇದೇ ರೀತಿ ಅಬ್ಬರಿಸಿದರೆ ತಂಡಕ್ಕೆ ಗೆಲುವು ಖಚಿತ.

    ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ?

    ತಂಡ ಸೇರಿಕೊಂಡ ಆಯುಷ್ ಮತ್ತು ವಿಹಾನ್

    ಈ ಪಂದ್ಯದೊಂದಿಗೆ ತಂಡದ ನಾಯಕ ಆಯುಷ್ ಮ್ಹಾತ್ರೆ ಮತ್ತು ಉಪನಾಯಕ ವಿಹಾನ್ ಮಲ್ಹೋತ್ರಾ ಇಂಜುರಿಯಿಂದ ಚೇತರಿಸಿಕೊಂಡು ತಂಡ ಸೇರಿಕೊಂಡಿದ್ದಾರೆ. ಮಣಿಕಟ್ಟಿನ ಗಾಯಗಳಿಂದಾಗಿ ಇಬ್ಬರೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಹೀಗಾಗಿ ಆ ಸರಣಿಯಲ್ಲಿ ವೈಭವ್ ತಂಡವನ್ನು ಮುನ್ನಡೆಸಿದ್ದರು. ಈ ಪಂದ್ಯದಲ್ಲಿ ನಾಯಕ ಆಯುಷ್ 19 ಎಸೆತಗಳಲ್ಲಿ 22 ರನ್ ಬಾರಿಸಿದರೆ ವಿಹಾನ್ ಅರ್ಧಶತಕದ ಇನ್ನಿಂಗ್ಸ್ ಆಡಿದರು.

    Published On – 3:57 pm, Sat, 10 January 26

    Source link