nagaraj11081993

ಬಳ್ಳಾರಿ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ? ಕೇಸ್​ ಬಗ್ಗೆ ಪರಮೇಶ್ವರ್​​ ಬಿಗ್​​ಅಪ್ಡೇಟ್​ – Kannada News | Ballari Banner Clash: Is the Case Being Handed Over to the CBI?

ಗೃಹ ಸಚಿವ ಜಿ. ಪರಮೇಶ್ವರ್​​ ಬೆಂಗಳೂರು, ಜನವರಿ 04: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ  ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅಪ್ಡೇಟ್​​ ನೀಡಿದ್ದಾರೆ. ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡ್ತೇನೆ. ಅಗತ್ಯಬಿದ್ದರೆ ಸಿಐಡಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು…

Read More

Mangaluru: ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು? – Kannada News | Kankanady Traditional Cockfighting Ban: Daiva’s Assurance Amid Police Restrictions

ಮಂಗಳೂರು, ಜನವರಿ 04: ಕಾನೂನಿನ ನೆಪವೊಡ್ಡಿ ಪ್ರಸಿದ್ಧ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಖಾಕಿ ತಡೆ ವಿಚಾರವೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದೆ. ಜೂಜು, ಪ್ರಾಣಿ ಹಿಂಸೆ ಕಾರಣ ನೀಡಿ ಕೋಳಿ ಅಂಕಕ್ಕೆ ಮಂಗಳೂರು ಪೊಲೀಸರು ಅನುಮತಿ ನಿರಾಕರಣೆ ಬೆನ್ನಲ್ಲೇ ಗರೋಡಿ ಆಡಳಿತ ಸಮಿತಿ ದೈವಗಳ ಮೊರೆ ಹೋಗಿದೆ. ಈ ವೇಳೆ ಅಭy ನೀಡಿರುವ ದೈವ, ‘ಹಿಂದೆ ಕೋಳಿ ಅಂಕ ನಿಲ್ಲಲು ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ’ ಎಂದು ತಿಳಿಸಿದೆ. ವಿಟ್ಲ ಕೇಪು ಉಳ್ಳಾಲ್ತಿ ಬಳಿಕ…

Read More

ಪ್ರಿಯಕರನ ಜತೆ ಓಡಿ ಹೋಗಲು 3 ಮಕ್ಕಳಿಗೆ ಹಣ್ಣಿನಲ್ಲಿ ನಿದ್ರೆ ಮಾತ್ರೆ ಬೆರೆಸಿ, ಕತ್ತು ಹಿಸುಕಿ ಕೊಂದ ಮಹಿಳೆ – Kannada News | Pakistan Woman Arrested After Deaths of Three Children in Domestic Tragedy

ಮಾತ್ರೆಗಳು-ಸಾಂದರ್ಭಿಕ ಚಿತ್ರImage Credit source: Dateline Health Africa ಲಾಹೋರ್, ಜನವರಿ 04: ವಿವಾಹಿತ ಮಹಿಳೆಗೆ ಬೇರೆ ಪುರುಷನೊಟ್ಟಿಗೆ ಅಕ್ರಮ ಸಂಬಂಧವಿತ್ತು, ಆತನ ಜತೆಯೇ ಇರಲಿ ಆಕೆ ಬಯಸಿದ್ದಳು. ಹಾಗಾಗಿ ಮೂವರು ಮಕ್ಕಳಿಗೆ ನಿದ್ರೆ ಮಾತ್ರೆ ಹಾಕಿ ಸಾಯಿಸಿರುವ ಘಟನೆ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಮದುವೆಯಾಗಲು ತನ್ನ ಮೂವರು ಚಿಕ್ಕ ಮಕ್ಕಳನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ…

Read More

ಭೂ ಒತ್ತುವರಿ ಆರೋಪ: ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ – Kannada News | Yash mother Pushpa house Compound in Hassan demolished on court order

ಹಾಸನದಲ್ಲಿ ನಟ ಯಶ್ (Yash) ತಾಯಿ ಪುಷ್ಪಾ ಅವರ ವಿರುದ್ಧ ಭೂಒತ್ತುವರಿ ಆರೋಪ ಇದೆ. ​ಲಕ್ಷ್ಮಮ್ಮ ಎಂಬುವವರ ಜಾಗದಲ್ಲಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಸಿದ್ದಾರೆ ಎನ್ನಲಾಗಿದೆ. ​ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ದೇವರಾಜು ಅವರು ಪುಷ್ಪಾ (Yash mother Pushpa) ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್​ ಆದೇಶದ ಮೇರೆಗೆ ಹಾಸನದ ವಿದ್ಯಾನಗರದಲ್ಲಿರುವ ಪುಷ್ಪಾ ಅವರ ಮನೆಯ ಕಾಂಪೌಂಡ್ ತೆರವುಗೊಳಿಸಲಾಗಿದೆ. ಅಕ್ರಮವಾಗಿ ಕಟ್ಟಿದ್ದ ಗೋಡೆಯನ್ನು ಜಿಪಿಎ ಹೋಲ್ಡರ್ ತೆರವುಗೊಳಿಸಿದ್ದಾರೆ. ಈ ಸಂದರ್ಭದ ವಿಡಿಯೋ…

Read More

Video: ಎಡಗಡೆಯಿಂದ ಲಾರಿ ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸಾವು – Kannada News | Fatal Road Accident in Hanumakonda as Biker Loses Control While Passing Truck

ಹನುಮಕೊಂಡ, ಜನವರಿ 04: ಎಡಗಡೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಹನುಮಕೊಂಡದಲ್ಲಿ ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಚಕ್ರದಡಿ ಸಿಲುಕಿದ್ದಾನೆ.ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಜಿಲ್ಲೆಯ ಕಮಲಾಪುರ ಪ್ರದೇಶದಲ್ಲಿ ಲಾರಿಯನ್ನು ಎಡಭಾಗದಿಂದ ಹಿಂದಿಕ್ಕಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಾರೀ ವಾಹನವನ್ನು ಹಿಂದಿಕ್ಕಲು ಬೈಕ್…

Read More

Vastu Tips: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು – Kannada News | Vastu Tips for Money: Avoid Financial Loss and Attract Wealth

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅನೇಕ ಜನರು ವಾಸ್ತು ಶಾಸ್ತ್ರದ ಪ್ರಕಾರ ತಮ್ಮ ಮನೆಗಳನ್ನು ನಿರ್ಮಿಸುತ್ತಾರೆ. ವಾಸ್ತುವು ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತದೆ ಎಂದು ನಂಬಲಾಗಿದೆ. ಗಳಿಸಿದ ಹಣವು ಬಾಳಿಕೆ ಬರದಿರಲು ಒಂದು ಕಾರಣವಿದೆ ಎಂದು ವಾಸ್ತು ಶಾಸ್ತ್ರವು ಹೇಳುತ್ತದೆ. ಅನಿರೀಕ್ಷಿತ ಆರ್ಥಿಕ ತೊಂದರೆಗಳು ಮತ್ತು ಹೆಚ್ಚುತ್ತಿರುವ ಸಾಲಗಳು ವಾಸ್ತು ದೋಷಗಳಿಂದ ಉಂಟಾಗುತ್ತವೆ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ಸ್ಥಳಗಳಲ್ಲಿ ಹಣವನ್ನು ಇಡಲೇಬಾರದು. ಯಾಕೆಂದರೆ ಅಂತಹ ಸ್ಥಳಗಳಲ್ಲಿ ಹಣವನ್ನು…

Read More

ಎಟಿಎಂಗಳಲ್ಲಿ ಮಾರ್ಚ್ ನಂತರ 500 ರೂ ನೋಟು ಸಿಗಲ್ವಾ? ಸರ್ಕಾರದ ಸ್ಪಷ್ಟನೆ ಇದು – Kannada News | Viral news of Rs 500 notes stopping in 2026, govt clarifies again

ನವದೆಹಲಿ, ಜನವರಿ 4: ಭಾರತೀಯ ರಿಸರ್ವ್ ಬ್ಯಾಂಕ್ (RBI) 500 ರೂ ನೋಟುಗಳ ಚಲಾವಣೆ ಕಡಿಮೆ ಮಾಡುತ್ತದೆ. ಮುಂಬರುವ ದಿನಗಳಲ್ಲಿ ಎಟಿಎಂಗಳಲ್ಲಿ 500 ರೂ ನೋಟುಗಳು ಸಿಕ್ಕೋದಿಲ್ಲ ಎಂದು ತಿಳಿಸುತ್ತಿರುವ ಕೆಲ ಪೋಸ್ಟ್​ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಸರ್ಕಾರ 500 ರೂ ನೋಟುಗಳ ಮುದ್ರಣ ನಿಲ್ಲಿಸಿ, 100 ರೂ ನೋಟುಗಳ ಚಲಾವಣೆ ಮಾತ್ರ ಮುಂದುವರಿಸಬಹುದು ಎನ್ನುವಂತಹ ಸುದ್ದಿಗಳು ಕೆಲ ತಿಂಗಳ ಹಿಂದೆ ಹರಿದಾಡುತ್ತಿದ್ದವು. ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಗಳನ್ನು ಸರ್ಕಾರ ಅಲ್ಲಗಳೆದಿದೆ. ಇವು ಸುಳ್ಳು…

Read More

ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ! – Kannada News | Bengaluru Father Poisons Specially Abled Son Over Treatment Costs

ಚಿಕಿತ್ಸೆಗೆ ಹಣವಿಲ್ಲವೆಂದು ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ! ಬೆಂಗಳೂರು, ಜನವರಿ 04: ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು…

Read More

ದಕ್ಷಿಣ ಕೊರಿಯಾ ಅಧ್ಯಕ್ಷರ ಚೀನಾ ಭೇಟಿಗೂ ಮುನ್ನ, ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ – Kannada News | North Korea Conducts Fresh Missile Launches Into Eastern Waters

ದಕ್ಷಿಣ ಕೊರಿಯಾ, ಜನವರಿ 04: ದಕ್ಷಿಣ ಕೊರಿಯಾ(South Korea) ಅಧ್ಯಕ್ಷ ಲೀ ಜೇ-ಮ್ಯುಂಗ್ ಚೀನಾಗೆ ತೆರಳುವ ಮುನ್ನ ಉತ್ತರ ಕೊರಿಯಾ(North Korea) ದಕ್ಷಿಣ ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಜತೆಗಿನ ಶೃಂಗಸಭೆಗಾಗಿ ಲೀ ಚೀನಾಗೆ ತೆರಳಿದ್ದಾರೆ. ಉತ್ತರ ಕೊರಿಯಾ ಭಾನುವಾರ ಬೆಳಿಗ್ಗೆ ಕ್ಷಿಪಣಿಯನ್ನು ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು (ಜೆಸಿಎಸ್) ದೃಢಪಡಿಸಿದ್ದಾರೆ. ಕ್ಷಿಪಣಿಯ ವ್ಯಾಪ್ತಿ ಮತ್ತು ನಿಖರತೆಯ ವಿವರವಾದ ವಿಶ್ಲೇಷಣೆ ಇನ್ನೂ ನಡೆಯುತ್ತಿದೆ. ಈ ಸಮಯದಲ್ಲಿ ಈ…

Read More

IPL 2026: ಬಾಂಗ್ಲಾದೇಶ್​ನಲ್ಲಿ ಐಪಿಎಲ್ ಬ್ಯಾನ್? – Kannada News | IPL 2026 Broadcast May Be Ban in Bangladesh

ಬಾಂಗ್ಲಾದೇಶ್  ತಂಡದ ಆಟಗಾರ ಮುಸ್ತಫಿಝುರ್ ರೆಹಮಾನ್​ನನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಕೈ ಬಿಟ್ಟ ಬೆನ್ನಲ್ಲೇ ಕೌಂಟರ್ ಅಟ್ಯಾಕ್ ನೀಡಲು ಬಾಂಗ್ಲಾದೇಶ್ ಸರ್ಕಾರ ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಬಾಂಗ್ಲಾದೇಶ್​​ನಲ್ಲಿ ಐಪಿಎಲ್ ಬ್ಯಾನ್ ಮಾಡಲು ಮುಂದಾಗುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ ನಜ್ರುಲ್,  ಬಾಂಗ್ಲಾದೇಶ್ ಆಟಗಾರನಿಗೆ ಮಾಡಲಾದ ಅವಮಾನಕ್ಕೆ ಪ್ರತೀಕಾರವಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಯಾವುದೇ…

Read More